ವಿನಯ್ ಕುಲಕರ್ಣಿ ಶಾಸಕ ಸ್ಥಾನ ಮರು ಸ್ಥಾಪನೆ: ವಿಧಾನಸಭೆ ಕಾರ್ಯದರ್ಶಿ ಅಧಿಸೂಚನೆ

ಬೆಂಗಳೂರು : ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ಮರು ಸ್ಥಾಪಿಸಿ ರಾಜ್ಯ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿಸೋಮವಾರ ಅಧಿಸೂಚನೆ ಹೊರಡಿಸಿದ್ದಾರೆ.
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಸೇರಿದಂತೆ ಇನ್ನಿತರರ ವಿರುದ್ಧದ ದೋಷಾರೋಪಣೆ ತೀರ್ಪಿಗೆ ಜು.31ರಂದು ಹೈಕೋಟ್ ತಡೆ ನೀಡಿ, ಶರತ್ತುಬದ್ದ ಜಾಮೀನು ಮಂಜೂರು ಮಾಡಿ ಮಧ್ಯಂತರ ಆದೇಶ ನೀಡಿದ ಹಿನ್ನೆಲೆಯಲ್ಲಿ ಈ ಅಧಿಸೂಚನೆ ಹೊರಡಿಸಲಾಗಿದೆ.
ಆದಾಗ್ಯೂ, ಈ ಮಧ್ಯಂತರ ಪರಿಹಾರವು ಮುಂದಿನ ನ್ಯಾಯಾಂಗ ತೀರ್ಪುಗಳಿಗೆ ಒಳಪಟ್ಟಿರುತ್ತದೆ. ಪ್ರಕರಣದ ಅಂತಿಮ ತೀರ್ಪಿನ ಆಧಾರದ ಮೇಲೆ ಮುಂದಿನ ಕಾನೂನು ಪರಿಣಾಮಗಳು ನಿರ್ಧಾರವಾಗಲಿವೆ ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.
Next Story




