Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನದ...

ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನದ ಚುನಾವಣೆ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ17 Feb 2025 12:10 PM IST
share
ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನದ ಚುನಾವಣೆ ಮುಂದೂಡಿಕೆ

ಬೆಂಗಳೂರು : ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಇಂದು(ಫೆ.17) ಮಧ್ಯಾಹ್ನ 12 ಗಂಟೆಗೆ ನಿಗದಿಯಾಗಿದ್ದ ಚುನಾವಣೆಯನ್ನು ಮುಂದೂಡಲಾಗಿದೆ.

ನಿಕಟಪೂರ್ವ ವಕ್ಫ್ ಬೋರ್ಡ್ ಅಧ್ಯಕ್ಷ ಕೆ.ಅನ್ವರ್ ಬಾಷಾ ಅವರನ್ನೇ ಮತ್ತೊಂದು ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಚುನಾಯಿಸಲು ಸಿದ್ಧತೆಗಳು ಜರುಗಿದ್ದವು ಎನ್ನಲಾಗಿದೆ.

ಆದರೆ, ಅನ್ವರ್ ಬಾಷಾ ವಿರುದ್ಧ ಸರಕಾರಿ ಖಬರಸ್ತಾನ್ ಜಮೀನು ಒತ್ತುವರಿ ಆರೋಪ ಇರುವುದರಿಂದ ಯಾವುದೇ ಕಾರಣಕ್ಕೂ ಅವರನ್ನು ಚುನಾಯಿಸಬಾರದು ಎಂದು ಕೆಪಿಸಿಸಿ ಉಪಾಧ್ಯಕ್ಷ ಮುಹಮ್ಮದ್ ಉಬೇದುಲ್ಲಾ ಶರೀಫ್, ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದ ಸೈಯದ್ ಅಶ್ರಫ್ ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ ದಾಖಲೆಗಳನ್ನು ಬಿಡುಗಡೆ ಮಾಡಿ ಆಗ್ರಹಿಸಿದ್ದರು.

ಅಲ್ಲದೇ, ವಕ್ಫ್ ಬೋರ್ಡ್‌ಗೆ ಸರಕಾರದ ವತಿಯಿಂದ ಸದಸ್ಯರನ್ನು ನಾಮ ನಿರ್ದೇಶನ ಮಾಡುವಾಗಲೂ ಹಿರಿಯ ನಾಯಕರ ಜೊತೆ ಚರ್ಚೆ ಮಾಡದೆ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಝಮೀರ್ ಅಹ್ಮದ್ ಖಾನ್ ಏಕ ಪಕ್ಷಿಯ ತೀರ್ಮಾನ ಕೈಗೊಂಡಿದ್ದಾರೆ ಎಂದು ಉಭಯ ನಾಯಕರು ಅಸಮಾಧಾನ ಹೊರಹಾಕಿದ್ದರು.

ಒಂದು ವೇಳೆ ಅನ್ವರ್ ಬಾಷಾ ಅವರನ್ನು ವಕ್ಫ್ ಬೋರ್ಡ್ ಗೆ ಪುನಃ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದೇ ಆದಲ್ಲಿ, ಅನ್ವರ್ ಬಾಷಾ ಹಾಗೂ ಇತರ ಸದಸ್ಯರ ವಿರುದ್ಧ ಭೂ ಒತ್ತುವರಿ, ಭೂ ಕಬಳಿಕೆ ಸೇರಿದಂತೆ ಇನ್ನಿತರ ಆಪಾದನೆಗಳ ದಾಖಲೆಗಳನ್ನು ಸರಣಿ ರೀತಿಯಲ್ಲಿ ಬಿಡುಗಡೆ ಮಾಡುವುದಾಗಿ ಮುಹಮ್ಮದ್ ಉಬೇದುಲ್ಲಾ ಶರೀಫ್ ಹಾಗೂ ಸೈಯದ್ ಅಶ್ರಫ್ ಎಚ್ಚರಿಕೆ ನೀಡಿದ್ದರು.

ಇದೀಗ ಸರಕಾರ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ನಡೆಯಬೇಕಾದ ಚುನಾವಣೆಯನ್ನು ಮುಂದೂಡುವ ಮೂಲಕ ಸಮುದಾಯದ ಹಿರಿಯ ನಾಯಕರಲ್ಲಿರುವ ಅಸಮಾಧಾನ ಶಮನ ಮಾಡಲು ಯತ್ನಿಸಿದೆ.

ಸರಕಾರ ಇತ್ತೀಚೆಗೆ ವಕ್ಫ್ ಬೋರ್ಡ್‌ಗೆ ಮಾಜಿ ಅಧ್ಯಕ್ಷ ಖಾಲಿದ್ ಅಹ್ಮದ್, ಮೌಲಾನಾ ಸೈಯದ್ ಮುಹಿಯುದ್ದೀನ್ ಹುಸೇನಿ ಪೀರ್ ಝಾದೆ, ಮೌಲಾನಾ ಮೀರ್ ಖಾಸಿಂ ಅಬ್ಬಾಸ್ ಹಾಗೂ ಐಪಿಎಸ್ ಅಧಿಕಾರಿ ಸಾರಾ ಫಾತಿಮಾ ಅವರನ್ನು ನಾಮನಿರ್ದೇಶನ ಮಾಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X