Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಲಾಪಕ್ಕೆ ಅಡ್ಡಿಪಡಿಸುವ ಸದಸ್ಯರಿಗೆ...

ಕಲಾಪಕ್ಕೆ ಅಡ್ಡಿಪಡಿಸುವ ಸದಸ್ಯರಿಗೆ ಮೊಗಸಾಲೆಯಲ್ಲೇ ಕೂರುವ ದಂಡನೆ: ಸ್ಪೀಕರ್ ಖಾದರ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ12 Dec 2025 5:27 PM IST
share
ಕಲಾಪಕ್ಕೆ ಅಡ್ಡಿಪಡಿಸುವ ಸದಸ್ಯರಿಗೆ ಮೊಗಸಾಲೆಯಲ್ಲೇ ಕೂರುವ ದಂಡನೆ: ಸ್ಪೀಕರ್ ಖಾದರ್ ಎಚ್ಚರಿಕೆ

ಬೆಳಗಾವಿ(ಸುವರ್ಣ ವಿಧಾನಸೌಧ): ವಿಧಾನಸಭೆ ಕಲಾಪದಲ್ಲಿ ಚರ್ಚೆಯ ನಡುವೆ ತಮಷ್ಟಕ್ಕೆ ತಾವು ಕುಳಿತ ಜಾಗದಲ್ಲಿಯೇ ಮಾತನಾಡಿ ಕಲಾಪಕ್ಕೆ ಅಡ್ಡಿಪಡಿಸುವ ಸದಸ್ಯರನ್ನು ಒಂದು ದಿನದ ಮಟ್ಟಿಗೆ ವಿಧಾನಸಭೆ ಮೊಗಸಾಲೆಯಲ್ಲಿ ಕೂರಿಸುವ ದಂಡನೆ ವಿಧಿಸಬೇಕಾಗುತ್ತದೆ ಎಂದು ಸ್ಪೀಕರ್ ಯು.ಟಿ.ಖಾದರ್ ಎಚ್ಚರಿಸಿದ ಪ್ರಸಂಗ ನಡೆಯಿತು.

ಶುಕ್ರವಾರ ವಿಧಾನಸಭೆ ಪ್ರಶ್ನೋತ್ತರದ ಬಳಿಕ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತ ಚರ್ಚೆಗೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅವರಿಗೆ ಸ್ಪೀಕರ್ ಖಾದರ್ ಅವಕಾಶ ನೀಡಿದರು. ಈ ವೇಳೆ ಬಿಜೆಪಿಯ ಉಚ್ಛಾಟಿತ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್, ‘ತಾನು ಮೂರು ದಿನಗಳಿಂದ ಚರ್ಚೆಗೆ ಅವಕಾಶ ಕೇಳುತ್ತಿದ್ದೇನೆ. ಈವರೆಗೂ ಅವಕಾಶ ಸಿಕ್ಕಿಲ್ಲʼ ಎಂದು ಆಕ್ಷೇಪಿಸಿದರು.

ಬಳಿಕ ಪ್ರತಿಕ್ರಿಯಿಸಿದ ಸ್ಪೀಕರ್ ಖಾದರ್, ‘ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಅವರಿಗೆ ಅನುಮತಿ ನೀಡಲಾಗಿದೆ. ಮುಂದಿನ ಸರದಿಯಲ್ಲಿ ನಿಮಗೆ ಅವಕಾಶ ನೀಡಲಾಗುವುದು ಎಂದು ಸಮಾಧಾನ ಪಡಿಸಿದರು. ಈ ಹಂತದಲ್ಲಿ ಗಂಭೀರ ಚರ್ಚೆ ನಡೆಯುವ ವೇಳೆ ಕೆಲವು ಶಾಸಕರು ತಮ ಸ್ಥಾನದಲ್ಲೇ ಕುಳಿತು ಮೈಕ್ ಆನ್ ಮಾಡಿಕೊಂಡು ಮಾತನಾಡಿ, ಚರ್ಚೆಗೆ ಅಡ್ಡಿಪಡಿಸುತ್ತಿದ್ದರು.

ಈ ವೇಳೆ ಸ್ಪೀಕರ್ ‘ಸದಸ್ಯರ ವರ್ತನೆ ಸರಿಯಲ್ಲ, ಚರ್ಚೆಯ ದಿಕ್ಕು ತಪ್ಪುತ್ತಿದೆ. ಫುಟ್ಬಾಲ್ ಆಟದಲ್ಲಿ ನಿಯಮ ಮೀರುವ ಆಟಗಾರರಿಗೆ ಕೆಂಪು, ಬಿಳಿ ಮತ್ತು ಹಳದಿ ಕಾರ್ಡ್‍ಗಳನ್ನು ತೋರಿಸುವ ಪದ್ಧತಿ ಇದೆ. ಅದೇ ರೀತಿ ಚರ್ಚೆಗೆ ಅಡ್ಡಿಪಡಿಸುವ ಸದಸ್ಯರಿಗೆ ಎಚ್ಚರಿಕೆಯ ಕಾರ್ಡ್‍ಗಳನ್ನು ತೋರಿಸಲಾಗುವುದು. ಅದರ ನಂತರವೂ ತಿದ್ದಿಕೊಳ್ಳದಿದ್ದರೆ ಒಂದು ದಿನದ ಮಟ್ಟಿಗೆ ವಿಧಾನಸಭೆಯ ಮೊಗಸಾಲೆಯಲ್ಲಿ ಕೂರಿಸುವ ದಂಡನೆ ವಿಧಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

Tags

warningUT KhadarKarnataka Assembly
share
ವಾರ್ತಾಭಾರತಿ
ವಾರ್ತಾಭಾರತಿ
Next Story
X