Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತಮಿಳುನಾಡಿಗೆ ನೀರು...: ಕಾವೇರಿ...

ತಮಿಳುನಾಡಿಗೆ ನೀರು...: ಕಾವೇರಿ ಪ್ರಾಧಿಕಾರದ ಆದೇಶ ವಿರೋಧಿಸಿ ಮಂಡ್ಯದ ಸರ್.ಎಂ. ವಿ ಪ್ರತಿಮೆ ಎದುರು ರೈತರಿಂದ ಧರಣಿ ಆರಂಭ

ವಾರ್ತಾಭಾರತಿವಾರ್ತಾಭಾರತಿ31 Aug 2023 1:48 PM IST
share
ತಮಿಳುನಾಡಿಗೆ ನೀರು...:  ಕಾವೇರಿ ಪ್ರಾಧಿಕಾರದ ಆದೇಶ ವಿರೋಧಿಸಿ ಮಂಡ್ಯದ ಸರ್.ಎಂ. ವಿ ಪ್ರತಿಮೆ ಎದುರು ರೈತರಿಂದ ಧರಣಿ ಆರಂಭ

ಮಂಡ್ಯ, ಆ.31: ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂ ಸೆಕ್ ನೀರು ಬಿಡುಗಡೆ ಮಾಡಬೇಕೆಂದು ಕಾವೇರಿ ನೀರು ನದಿ ಪ್ರಾಧಿಕಾರ ಆದೇಶ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ರೈತ ರಕ್ಷಣಾ ಸಮಿತಿ ಮಂಡ್ಯದಲ್ಲಿ ಧರಣಿ ಆರಂಭಿಸಿದೆ.

ನಗರದ ಸರ್ ಎಂ ವಿ ಪ್ರತಿಮೆ ಎದುರು ಸಮಿತಿಯ ಆಶ್ರಯದಲ್ಲಿ ಮಾಜಿ ಶಾಸಕರು, ರೈತರು,ಕನ್ನಡ ಪರ ಹೋರಾಟಗಾರರು. ರಾಜಕೀಯ ಪಕ್ಷಗಳ ಕಾರ್ಯಕರ್ತರು ಸೇರಿ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಪ್ರತಿಭಟನಾ ಧರಣಿ ನಡೆಸಿದರು.

ಕಾವೇರಿ ನಮ್ಮದು, ರಕ್ತ ಕೊಟ್ಟರೂ ನೀರು ಬಿಡೆವು ಎಂಬ ಘೋಷವಾಕ್ಯದೊಂದಿಗೆ ರಾಜ್ಯ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶಿಸಿದರು.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಒತ್ತಡ ತಂತ್ರದ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರು ಪ್ರಾಧಿಕಾರ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂದು ಆದೇಶ ಮಾಡಿರುವುದು ಅವ್ಯೆಜ್ಞಾನಿಕ, ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಜಲಾಶಯಗಳಿಂದ ನೀರು ಬಿಡುಗಡೆ ಮಾಡಬಾರದು ಎಂದು ಒತ್ತಾಯಿಸಿದರು.

ತಮಿಳುನಾಡಿಗೆ ಸತತವಾಗಿ ನೀರು ಹರಿಸಿದ ಪರಿಣಾಮ 113 ಅಡಿ ಇದ್ದ ನೀರು 101 ಅಡಿಗೆ ಕುಸಿದಿದೆ. ರೈತರು ಬೆಳೆದಿರುವ ಬೆಳೆ ರಕ್ಷಣೆಗೆ ನೀರು ಇಲ್ಲದಂತಾಗಿದೆ, ಪ್ರಾಧಿಕಾರದ ಆದೇಶದಂತೆ ಮತ್ತೆ ತಮಿಳುನಾಡಿಗೆ ನೀರು ಬಿಟ್ಟರೆ ಫಸಲು ರಕ್ಷಣೆ ಇರಲಿ ಕುಡಿಯುವ ನೀರು ಕೂಡ ನೀರು ಇರುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ಸರಕಾರ ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಬಿಟ್ಟಿರುವುದರಿಂದ ಮಂಡ್ಯ, ಮೈಸೂರು, ಬೆಂಗಳೂರು ಸೇರಿ ಎಂಟು ನಗರಗಳಿಗೆ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಲಿದೆ, ತಕ್ಷಣ ಕಾವೇರಿ ನದಿಗೆ ಬಿಟ್ಟಿರುವ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ಸರಕಾರ ತಾಳ್ಮೆ ವಹಿಸಿ ತಮಿಳುನಾಡಿಗೆ ನೀರು ಬಿಡದೆ ಪ್ರಾಧಿಕಾರ ಮತ್ತು ಸುಪ್ರೀಂ ಕೋರ್ಟ್ ಗೆ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಡಲು ಮುಂದಾಗ ಬೇಕಿತ್ತು, ನೀರು ಬಿಟ್ಟ ಪರಿಣಾಮ ಮತ್ತು ಈಗಲೂ ನೀರು ಹರಿಸುತ್ತಿರುವ ಹಿನ್ನಲೆಯಲ್ಲಿ ಕೆ ಆರ್ ಎಸ್ ಜಲಾಶಯದಲ್ಲಿ ನೀರಿನ ಪ್ರಮಾಣ ಕುಸಿತ ಕಾಣುತ್ತಿದೆ ಎಂದು ತಿಳಿಸಿದರು.

ಕಾವೇರಿ ನದಿ ನೀರು ವಿಚಾರದಲ್ಲಿ ಕೇಂದ್ರ ಸರಕಾರ ನಿರಂತರವಾಗಿ ಮಲತಾಯಿ ಧೋರಣೆ ಅನುಸರಿಸುತ್ತಾ ಬಂದಿದೆ, ಸಂಕಷ್ಟ ಬಂದಾಗ ಮಧ್ಯ ಪ್ರವೇಶಿಸಿ ಸಂಕಷ್ಟ ಸೂತ್ರ ಪಾಲಿಸಲು ಸೂಚನೆ ನೀಡುವುದಿಲ್ಲ,ಬದಲಾಗಿ ರಾಜ್ಯ ರಾಜ್ಯಗಳ ನಡುವೆ ಸಂಘರ್ಷ ಉಂಟುಮಾಡುತ್ತಿದೆ ಎಂದು ಕಿಡಿಕಾರಿದರು.

ಮೇಕೆದಾಟು ಯೋಜನೆಗೆ ಅಡ್ಡಿಪಡಿಸುವ ತಮಿಳುನಾಡು ಸರ್ಕಾರ ಕಾವೇರಿ ಜಲಾನಯನ ಪ್ರದೇಶದಲ್ಲಿ ನದಿ ಜೋಡಣೆ ಸೇರಿದಂತೆ ಹಲವು ನೀರಾವರಿ ಯೋಜನೆಗಳನ್ನು ಜಾರಿ ಮಾಡುತ್ತಿದೆ, ಕಾವೇರಿ ನದಿ ನೀರಿನ ಬಹು ಪಾಲನ್ನು ಪಡೆಯಲು ಒತ್ತಡ ತಂತ್ರ ಅನುಸರಿಸಿ ಕರ್ನಾಟಕ ವಿರೋಧಿ ಧೋರಣೆ ಮಾಡುತ್ತಿದೆ ಎಂದು ಆರೋಪಿಸಿದರು.

ಕಾವೇರಿ ನದಿ ಪಾತ್ರದಲ್ಲಿನ ವಾಸ್ತವ ಪರಿಸ್ಥಿತಿ ಅರಿಯಲು ಮತ್ತು ಜಲಾಶಯಗಳಲ್ಲಿ ಇರುವ ನೀರಿನ ಲಭ್ಯತೆ ಬಗ್ಗೆ ಪರಿಶೀಲಿಸಲು ಕೇಂದ್ರ ಸರಕಾರ ನೀರಾವರಿ ತಜ್ಜರ ತಂಡವನ್ನು ಕರ್ನಾಟಕಕ್ಕೆ ಕಳುಹಿಸಿ ಕೊಡುವ ಮೂಲಕ ವಾಸ್ತವ ಸ್ಥಿತಿ ಅರಿಯಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ಮಾಜಿ ಸಚಿವ ಎಂ. ಎಸ್. ಆತ್ಮಾನಂದ, ಮಾಜಿ ಶಾಸಕರಾದ ಜಿ.ಬಿ ಶಿವಕುಮಾರ್, ಕೆ. ಟಿ. ಶ್ರೀಕಂಠೇಗೌಡ, ರೈತ ನಾಯಕಿ ಸುನಂದಾ ಜಯರಾಂ, ಕದಂಬ ಸೈನ್ಯದ ಬೇಕ್ರಿ ರಮೇಶ್, ದಶಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ಪ್ರಶಾಂತ ಬಾಬು, ಕೆ.ಬೋರಯ್ಯ, ಅಂಬುಜಮ್ಮ, ಸಿದ್ದರಾಮೇಗೌಡ, ಬಿ.ಸಿ.ಶಿವಾನಂದ, ಅಂದಾನಿ ಸೋಮನಹಳ್ಳಿ, ಕನ್ನಡ ಸೇನೆ ಮಂಜುನಾಥ್, ಜಯ ಕರ್ನಾಟಕ ಯೋಗಣ್ಣ, ರೈತ ಸಂಘದ ಇಂಡುವಾಳು ಚಂದ್ರಶೇಖರ್,

ಸಿ.ಎಂ ದ್ಯಾವಪ್ಪ, ಎಂ.ಬಿ ರಮೇಶ್, ಎಸ್ ಕೆ ಮೊಳ್ಳೆಗೌಡ, ಎಂ.ಎಲ್ತು.ಳಸೀದರ್, ಇಂಡುವಾಳು ಬಸವರಾಜ್ ನೇತೃತ್ವ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X