Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಯನಾಡು ಭೂಕುಸಿತ | ರಕ್ಷಣೆ, ಪರಿಹಾರ...

ವಯನಾಡು ಭೂಕುಸಿತ | ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ30 July 2024 6:57 PM IST
share
ವಯನಾಡು ಭೂಕುಸಿತ | ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ ಸಿದ್ದರಾಮಯ್ಯ

ಹೊಸದಿಲ್ಲಿ : ಭೂಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದು, ಇದಕ್ಕಾಗಿ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ್ದಾರೆ.

ಹೊಸದಿಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಅವರು ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು, ವಯನಾಡಿನಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್‌ಡಿಆರ್‌ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳು ತ್ವರಿತವಾಗಿ ತೆರಳಲು ಹಾಗೂ ಅಗತ್ಯ ಉಪಕರಣಗಳು ಮತ್ತು ಇತರ ಅಗತ್ಯ ಪರಿಹಾರ ಸಾಮಗ್ರಿಗಳನ್ನು ರವಾನೆ ಮಾಡಲು ನೆರವು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಎಂಇಜಿಯ ಒಬ್ಬರು ಅಧಿಕಾರಿ, ಇಬ್ಬರು ಜೆ.ಸಿ.ಓ.ಗಳು ಹಾಗೂ 70 ಮಂದಿ ವಿವಿಧ ರ್ಯಾಂಕಿನ ಸಿಬ್ಬಂದಿ ಈಗಾಗಲೇ ರಕ್ಷಣೆ ಹಾಗೂ ಪರಿಹಾರ ಸಾಮಗ್ರಿಗಳೊಂದಿಗೆ 15 ವಾಹನಗಳಲ್ಲಿ ವಯನಾಡಿಗೆ ತೆರಳಿದ್ದಾರೆ. ಇನ್ನೂ ಇಬ್ಬರು ಅಧಿಕಾರಿಗಳು, ನಾಲ್ಕು ಮಂದಿ ಜೆ.ಸಿ.ಓ.ಗಳು, ಹಾಗೂ 100 ಮಂದಿ ಸೇನಾ ಸಿಬ್ಬಂದಿ ರಕ್ಷಣಾ ಉಪಕರಣಗಳೊಂದಿಗೆ 40 ವಾಹನಗಳಲ್ಲಿ ತೆರಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ತಂಡಗಳು ವಯನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ, ಬಂಡಿಪುರ ಚೆಕ್ ಪೋಸ್ಟ್ ನಲ್ಲಿ ಈ ಎನ್ ಡಿ ಆರ್ ಎಫ್ ಹಾಗೂ ಸೇನೆಯ ತಂಡಗಳಿಗೆ ಹಾಗೂ ಪರಿಹಾರ ಸಾಮಗ್ರಿಗಳ ಸಾಗಾನಣಿಕೆ ವಾಹನಗಳಿಗೆ ಗ್ರೀನ್‌ ಕಾರಿಡಾರ್‌ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.

ಕರ್ನಾಟಕ ಸರ್ಕಾರವು ಕೇರಳ ಸರ್ಕಾರದ ವಿಪತ್ತು ನಿರ್ವಹಣಾ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯ ನೆರವು ಒದಗಿಸಲಾಗುತ್ತಿದೆ. ಅಲ್ಲದೆ, ಗಡಿ ಭಾಗದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹ ಸೂಕ್ತ ಬೆಂಬಲ ನೀಡುತ್ತಿದ್ದಾರೆ. ವೈದ್ಯಕೀಯ ನೆರವು, ಆಸ್ಪತ್ರೆ ಸೌಲಭ್ಯ ಹಾಗೂ ಗಾಯಾಳುಗಳನ್ನು ಕರೆತರಲು ಬಸ್ ಗಳನ್ನು ಎಚ್‌.ಡಿ. ಕೋಟೆಯಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಚಾಮರಾಜನಗರ ಜಿಲ್ಲಾಡಳಿತವೂ ಜಿಲ್ಲೆಯ ಗಡಿಭಾಗದಿಂದ ವಯನಾಡಿಗೆ ಆಗಾಗ ತೆರಳುವ ನಾಗರಿಕರ ನೆರವಿಗಾಗಿ ಸಹಾಯವಾಣಿ ಪ್ರಾರಂಭಿಸಿದೆ.

ಮುಖ್ಯಮಂತ್ರಿಗಳು ಸ್ವತಃ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದು, ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಚರಣೆಗೆ ಎಲ್ಲ ರೀತಿಯ ಬೆಂಬಲ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದಲ್ಲದೆ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಕುರಿತಂತೆ ಸಮನ್ವಯಕ್ಕಾಗಿ ಹಿರಿಯ ಐಎಎಸ್‌ ಅಧಿಕಾರಿ ಪಿ.ಸಿ. ಜಾಫರ್‌ (ಮೊಬೈಲ್‌ ಸಂಖ್ಯೆ 9448355577) ಹಾಗೂ ದಿಲೀಶ್‌ ಶಶಿ (9446000514) ಅವರನ್ನು ನಿಯೋಜಿಸಲಾಗಿದೆ.

ಕನ್ನಡಿಗರ ರಕ್ಷಣೆಗೆ ಪ್ರಯತ್ನ :

ವಯನಾಡಿನಲ್ಲಿ ಕನ್ನಡಿಗರು ಸಿಲುಕಿಕೊಂಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ದೊರೆತಿದ್ದು, ಅವರ ರಕ್ಷಣೆಗೆ ಎಲ್ಲ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ ಸಂಖ್ಯೆಗಳು: 08226-223163, 08226-223161, 08226-223160 ಹಾಗೂ ವಾಟ್ಸಾಪ್ ಸಂಖ್ಯೆ: 9740942901.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X