Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾವು ವೋಟಿಗಾಗಿ ಗ್ಯಾರಂಟಿಗಳನ್ನು...

ನಾವು ವೋಟಿಗಾಗಿ ಗ್ಯಾರಂಟಿಗಳನ್ನು ಹೇಳಲಿಲ್ಲ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ27 Aug 2023 12:57 PM IST
share
ನಾವು ವೋಟಿಗಾಗಿ ಗ್ಯಾರಂಟಿಗಳನ್ನು ಹೇಳಲಿಲ್ಲ: ದಿನೇಶ್ ಗುಂಡೂರಾವ್

ಹುಬ್ಬಳ್ಳಿ: ಓಟಿಗಾಗಿ ನಾವು ಗ್ಯಾರಂಟಿಗಳನ್ನು ಹೇಳಿಲ್ಲ. ವಿರೋಧ ಪಕ್ಷದವರು ಹೇಗೆ ಮಾಡುತ್ತೀರಿ ಎಂದು ಟೀಕೆ ಮಾಡಿ, ಮೊಸರಲ್ಲಿ‌ಕಲ್ಲು ಹುಡುಕುವ ಕೆಲಸ ಮಾಡಿದ್ರು. ನಾವು ಮಾತು ಉಳಿಸಿಕೊಂಡು ಕಾಂಗ್ರೆಸ್ ಏನೆಂದು ದೇಶಕ್ಕೆ ತೋರಿಸಿದ್ದೇವೆ. ರಾಜ್ಯದ ಹಿತಾಸಕ್ತಿ ಕಾಪಾಡೋದು ನಮ್ಮ ಕೆಲಸ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಸರ್ಕಾರ ಬಂದು 100 ದಿನ ಆಗಿದೆ. 100 ದಿನದಲ್ಲಿ ನಾವು ಜನರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. 100 ದಿನ ಆಗಿರೋದಕ್ಕೆ ಬಹಳ ತೃಪ್ತಿ, ಹೆಮ್ಮೆ ಇದೆ. ಪ್ರಮಾಣಿಕತೆ,ದಕ್ಷತೆಯಿಂದ ನಾವು ಕೆಲಸ ಮಾಡುತ್ತಿದ್ದೇವೆ. ಹೊಸ ಸರ್ಕಾರ ಬಂದ ತಕ್ಷಣ ಆಶ್ವಾಸನೆ ಇಡೇರಿಸಲು ಸರ್ಕಾರ ಮನಸ್ಸು ಮಾಡಲ್ಲ. ಆದ್ರೆ ನಾವು 100 ದಿನದಲ್ಲಿ ಈಡೇರಿಸಿದ್ದೇವೆ. 100 ದಿನದ ಸಾಧನೆ ಬಗ್ಗೆ ಪುಸ್ತಕ ಬಿಡುಗಡೆ ಮಾಡುತ್ತೇವೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ಒಳ್ಳೆಯ ಆಡಳಿತ ಕೊಡುತ್ತಿದೆ. ಮೈಸೂರಿನಲ್ಲಿ ಗೃಹಲಕ್ಷ್ಮಿ ದೊಡ್ಡ ಮಟ್ಟದಲ್ಲಿ ಉದ್ಘಾಟನೆ ಆಗಲಿದೆ. ಇದು ನಮಗೆಲ್ಲ ಹೆಮ್ಮೆ ಎಂದರು.

ನಾನು ಸಚಿವನಾದ ನಂತರ ಮೊದಲ ಬಾರಿಗೆ ಹುಬ್ಬಳ್ಳಿಗೆ ಬಂದಿದ್ದೇನೆ. ಹತ್ತು ದಿನದ ನಂತರ ಆರೋಗ್ಯ ಇಲಾಖೆ ಸಭೆ ಮಾಡುತ್ತೇನೆ. ಹುಬ್ಬಳ್ಳಿ- ಧಾರವಾಡದ ಬಗ್ಗೆ ನನಗೆ ಮಾಹಿತಿ ಇದೆ. ನಾನು ಹಿಂದೆ ಮೂರು ವರ್ಷ ಇಲ್ಲಿ ಉಸ್ತುವಾರಿ ಆಗಿ ಕೆಲಸ ಮಾಡಿದ್ದೇನೆ ಎಂದರು.

ಜನರಿಗೆ ಸಾಂಕ್ರಾಮಿಕ ರೋಗಗಳು ಜಾಸ್ತಿ ಆಗುತ್ತಿದ್ದು, ಜನರಿಗೆ ಸಮಸ್ಯೆಯಾಗಿದೆ. ಇದಕ್ಕೆಲ್ಲ ಕಾರಣ ನಮ್ಮ ಜೀವನ ಶೈಲಿ, ಜೆನೆಟಿಕ್ ಸಮಸ್ಯೆ ಕಾರಣ. ಇದನ್ನು ಕಂಟ್ರೋಲ್ ಮಾಡಲು‌ ಇಲಾಖೆಯಿಂದ ವಿಶೇಷ ಕಾರ್ಯಕ್ರಮ ನಡೆಯಲಿದೆ. ಎಂಟು‌ ಜಿಲ್ಲೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಯೋಜನೆ ಜಾರಿಯಾಗಲಿದೆ. ನಮ್ಮ ಇಲಾಖೆಯೇ ಅವರ ಹತ್ತಿರ ಹೋಗುವ ಪ್ಲ್ಯಾನ್ ಮಾಡುತ್ತಿದ್ದೇವೆ. ಮುಂದಿನ ತಿಂಗಳು ಅಶಾಕಿರಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದೇವೆ. ಡಾಕ್ಟರ್ ಗಳೆಲ್ಲ ಹಳ್ಳಿಗಳಿಗೆ ಹೋಗಬೇಕು. ಆದ್ದರಿಂದ ವಾಹನಗಳಿಗೆ ಟೆಂಡರ್ ಕರೆಯುತ್ತೇವೆ. ನಾವು ಔಷಧಿ ಅವರ ಮನೆಗೆ ಹೋಗಿ ತಲುಪಿಸುತ್ತೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X