Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಭೂಸ್ವಾಧೀನ ಪ್ರಕ್ರಿಯೆಯನ್ನು...

ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ

ದೇವನಹಳ್ಳಿ ರೈತರ ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರ

ವಾರ್ತಾಭಾರತಿವಾರ್ತಾಭಾರತಿ15 July 2025 12:49 PM IST
share
ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಹಾಗೂ ರೈತ ಮುಖಂಡರ ಸಭೆಯಲ್ಲಿ ಈ ನಿರ್ಧಾರವನ್ನು ತಿಳಿಸಿದರು.

ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ. ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ ಎಂದರು

ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು. ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ ಎಂದರು.

ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. 1777 ಎಕ್ರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸರ್ಕಾರ ಸ್ವಾಧೀನಪಡಿಸಿ, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶವಾಗಿದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ ಎಂದು ತಿಳಿಸಿದರು.

ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಹೆಚ್ಚಿನ ವಿಸ್ತೀರ್ಣದ ಅಭಿವೃದ್ಧಿಪಡಿಸಿದ ನಿವೇಶನ ನೀಡಲಾಗುವುದು ಎಂದು ಹೇಳಿದರು.

ಯಾವುದೇ ಕಾರಣಕ್ಕೆ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.

ಮುಖ್ಯಮಂತ್ರಿ ಅವರ ಸಾಮಾಜಿಕ ನ್ಯಾಯ ಕೇವಲ ನುಡಿಯಲ್ಲಿ ಮಾತ್ರವಲ್ಲ ನಡೆಯಲ್ಲೂ ಇದೆ. ಅದನ್ನು ಇಂದು ಅವರು ತೋರಿಸಿಕೊಟ್ಟಿದ್ದಾರೆ ಎಂದು ಪ್ರಕಾಶ್ ರಾಜ್ ಅವರು ಹೇಳಿದರು.

ಸಚಿವರಾದ ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ, ಹೆಚ್.ಕೆ.ಪಾಟೀಲ್, ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಅಡ್ವಕೇಟ್ ಜನರಲ್ ಶಶಿಕಿರಣ ಶೆಟ್ಟಿ, ರೈತ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X