Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. "ಕೃಪಾ ಆಳ್ವಾ ಅವರ ವಿರುದ್ಧ ನೇರ ಸಾಕ್ಷಿ...

"ಕೃಪಾ ಆಳ್ವಾ ಅವರ ವಿರುದ್ಧ ನೇರ ಸಾಕ್ಷಿ ಇರುವ ಕಾರಣ ಉಚ್ಛಾಟಿಸಿದ್ದೇವೆ” : ಬಿ.ಕೆ ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ31 Oct 2026 1:58 PM IST
share
ಕೃಪಾ ಆಳ್ವಾ ಅವರ ವಿರುದ್ಧ ನೇರ ಸಾಕ್ಷಿ ಇರುವ ಕಾರಣ ಉಚ್ಛಾಟಿಸಿದ್ದೇವೆ” : ಬಿ.ಕೆ ಹರಿಪ್ರಸಾದ್

ಬೆಂಗಳೂರು: “ಸಾರ್ವಜನಿಕ ಕ್ಷೇತ್ರದಲ್ಲಿ ನಾಯಕರಿಗೆ ಮುಜುಗರ ಉಂಟುಮಾಡುವ ಕೆಲಸದಿಂದ ಮಾಧ್ಯಮಗಳಲ್ಲಿ ಅಹಿತಕರ ಸುದ್ದಿಗಳು ಬಂದಿದ್ದವು. ಈ ವಿಚಾರವಾಗಿ ಕಾರಣ ಕೇಳಿ ನೋಟೀಸ್ ನೀಡಿ ಉತ್ತರ ನೀಡಲು ಮೂರು ದಿನಗಳ ಕಾಲಾವಕಾಶ ನೀಡಲಾಗಿತ್ತು. ಅವರಿಂದ ಉತ್ತರ ಬಾರದ ಕಾರಣ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಬಿ. ಕೆ ಹರಿಪ್ರಸಾದ್ ಅವರು ಕೃಪಾ ಆಳ್ವಾ ಅವರನ್ನು ಪಕ್ಷದಿಂದ ಉಚ್ಛಾಟನೆಗೊಳಿಸಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ನೋಟೀಸ್ ಅವರಿಗೆ ತಲುಪಿಲ್ಲವೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, “ಅವರಿಗೆ ಕಳುಹಿಸಿದ ನೋಟೀಸ್ ವಾಪಸ್ ಬಂದಿದೆ. ಹೀಗಾಗಿ ಬೇರೆ ವಿಧಿ ಇಲ್ಲದೆ ಈ ಕ್ರಮ ಕೈಗೊಳ್ಳಲಾಗಿದೆ” ಎಂದರು.

ಕೃಪಾ ಆಳ್ವಾ ಅವರು ವಿದೇಶಕ್ಕೆ ಹೋಗಿರುವ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಐಬಿ, ಸಿಬಿಐ ನೋಡಿಕೊಳ್ಳುತ್ತದೆ. ನಾನು ಅದರ ಬಗ್ಗೆ ನೋಡುವುದಿಲ್ಲ” ಎಂದರು.

ಇಷ್ಟು ತಡವಾಗಿ ಕ್ರಮ ಯಾಕೆ ಎಂಬ ಬಗ್ಗೆ ಕೇಳಿದಾಗ, “ನಾವು ದುಡುಕಿ ಹೆಜ್ಜೆ ಇಡುವ ಮುನ್ನ, ಅವರನ್ನು ಕೇಳಿ ಕ್ರಮ ಕೈಗೊಳ್ಳಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಒಂದು ಅವಕಾಶ ನೀಡಬೇಕು. ಅವರು ಉತ್ತರ ನೀಡದೇ ಇದ್ದಾಗ ತೀರ್ಮಾನ ಕೈಗೊಂಡಿದ್ದೇವೆ” ಎಂದರು.

ಕೃಪ ಆಳ್ವಾ ಅವರ ಹಿಂದೆ ಬೇರೆ ಯಾರಾದರೂ ಇದ್ದಾರ ಎಂಬ ವಿಚಾರವಾಗಿ ಪಕ್ಷದಲ್ಲಿ ಆಂತರಿಕ ತನಿಖೆ ಮಾಡಿಸುತ್ತೀರಾ ಎಂದು ಕೇಳಿದಾಗ, “ ಕೃಪಾ ಆಳ್ವಾ ಅವರ ವಿರುದ್ಧ ನೇರ ಸಾಕ್ಷಿ ಇರುವ ಕಾರಣ ಉಚ್ಛಾಟಿಸಿದ್ದೇವೆ” ಎಂದರು.

ನಾಗ್ಪುರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಬಗ್ಗೆ ಕೇಳಿದಾಗ, “ನಾಗ್ಪುರ ಎಂದರೆ ಕನ್ನಡದಲ್ಲಿ ಹಾವಿನಪುರ. ದೇಶದಲ್ಲಿ ದ್ವೇಷದ ವಿಷ ಕಾರುವ ಸಂಘಟನೆ ಕತ್ತಿಗೆ ಕೈ ಹಾಕಿ ಹಿಡಿದಿದ್ದೇವೆ. ಅಲ್ಲಿ ಆರಂಭವಾಗಿದ್ದು, ದೇಶದಲ್ಲಿ ಅವರನ್ನು ಮಣಿಸುವ ಸಂದೇಶ ರವಾನಿಸುತ್ತೇವೆ” ಎಂದರು.

ಕಾಂಗ್ರೆಸ್ ಪಕ್ಷವನ್ನು ಮಣಿಸಿದ್ದೇವೆ ಎಂದು ಹೇಳುತ್ತಿದ್ದಾರೆ ಎಂದು ಕೇಳಿದಾಗ, “ಕಾಂಗ್ರೆಸ್ ಸೋಲಿಸಿದ್ದೇವೆ ಎಂದು ಹೇಳಿಕೊಂಡು ಹೋದರೆ ಆಗುವುದಿಲ್ಲ. ಮಹಾಮಾನವನ ಕ್ಷೇತ್ರ ವಾರಣಾಸಿಯಲ್ಲಿ ಬಹಳ ಕೆಟ್ಟದಾಗಿ ಸೋತಿದ್ದಾರೆ. ಬಿಜೆಪಿ ಅಧ್ಯಕ್ಷನ ಕ್ಷೇತ್ರ ಬಿಹಾರದಲ್ಲಿ, ನಿತೀನ್ ಗಡ್ಕರಿ ಅವರ ಕ್ಷೇತ್ರದಲ್ಲಿ, ಯೋಗಿ ಆದಿತ್ಯನಾಥ್ ಕ್ಷೇತ್ರದಲ್ಲಿ ಸೋತಿದ್ದಾರೆ” ಎಂದು ತಿಳಿಸಿದರು.

ದೇವೇಗೌಡರನ್ನು ಯಡಿಯೂರಪ್ಪ ಅವರು ಭೇಟಿ ಮಾಡಿದ ಬಳಿಕ ಈ ಸರ್ಕಾರದ ಭವಿಷ್ಯದ ಬಗ್ಗೆ ಮಾತನಾಡಿದ್ದಾರೆ ಎಂದು ಕೇಳಿದಾಗ, “ಆನೆ ನಡೆಯುವಾಗ ಏನಾದರೂ ಬೀಳಬಹುದು ಎಂದು ಅದರ ಹಿಂದೆ ತೋಳ ಮತ್ತು ನರಿ ನಡೆದುಕೊಂಡು ಹೋಗುತ್ತಿರುತ್ತದೆ. ಅದರಲ್ಲಿ ತಪ್ಪೇನಿಲ್ಲ” ಎಂದು ತಿರುಗೇಟು ನೀಡಿದರು.

ದೆಹಲಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಉಳಿಸಲು ಹೋರಾಟಕ್ಕೆ ಕರೆ ನೀಡಿದ್ದಾರೆ. ಕರ್ನಾಟಕದಿಂದ ಹೋಗಲು ರೈಲ್ವೇಗೆ ಅನುಮತಿ ನೀಡಿರಲಿಲ್ಲ. ಆ ಮೂಲಕ ನಾವು ಭಾಗವಹಿಸಲು ತೊಂದರೆ ನೀಡಿದ್ದಾರೆ. ನಮ್ಮ ಕಾರ್ಯಕರ್ತರು ಈಗಾಗಲೇ ಸಹಸ್ರಾರು ಸಂಖ್ಯೆಯಲ್ಲಿ ದೆಹಲಿ ತಲುಪಿದ್ದು, ರಾಮಲೀಲಾ ಮೈದಾನದಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆಗಾಗಿ ದೊಡ್ಡ ಹೋರಾಟ ನಡೆಯಲಿದೆ” ಎಂದು ತಿಳಿಸಿದರು.

Tags

Krupa AlvaB.K. Hariprasad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X