Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಲೋಕಸಭೆ ಚುನಾವಣೆ ಗೆಲ್ಲಲು ಒಗ್ಗಟ್ಟಿನಿಂದ...

ಲೋಕಸಭೆ ಚುನಾವಣೆ ಗೆಲ್ಲಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ10 Jan 2024 5:57 PM IST
share
ಲೋಕಸಭೆ ಚುನಾವಣೆ ಗೆಲ್ಲಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಲೋಕಸಭೆ ಚುನಾವಣೆಯಲ್ಲಿ ಇಡೀ ದೇಶ, ನಮ್ಮ ಪಕ್ಷ ಕರ್ನಾಟಕದ ಮೇಲೆ ಬಹಳ ವಿಶ್ವಾಸ ಇಟ್ಟುಕೊಂಡಿದ್ದು, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಇಂದಿರಾಭವನದಲ್ಲಿ ನಡೆದ ಪಕ್ಷದ ಸಭೆ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು “ಜನರಿಗೆ ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ನಮ್ಮ ಕಾರ್ಯಕರ್ತರು ಮತ್ತೆ ಜನರ ಬಳಿಗೆ ಹೋಗಲು ಆತ್ಮವಿಶ್ವಾಸ ತುಂಬಿದ್ದೇವೆ. ಈ ಹಿಂದೆ ದೇಶದಲ್ಲಿ ಯಾವ ಸರ್ಕಾರವೂ ಕೊಟ್ಟ ಮಾತನ್ನು ಏಳೇ ತಿಂಗಳಲ್ಲಿ ಪೂರ್ಣಗೊಳಿಸಿರಲಿಲ್ಲ. ನಾಲ್ಕು ಗ್ಯಾರಂಟಿ ಜನರನ್ನು ತಲುಪಿದ್ದು, ಐದನೇ ಗ್ಯಾರಂಟಿ ಯುವನಿಧಿಗೆ ಇದೇ 12 ರಂದು ವಿವೇಕಾನಂದರ ಜಯಂತಿ ದಿನ ಶಿವಮೊಗ್ಗದಲ್ಲಿ ಚಾಲನೆ ನೀಡಲಿದ್ದೇವೆ" ಎಂದು ಹರ್ಷ ವ್ಯಕ್ತಪಡಿಸಿದರು.

3 ಕೋಟಿಗೂ ಹೆಚ್ಚು ಜನ ʼಗ್ಯಾರಂಟಿʼ ಫಲಾನುಭವಿಗಳಾಗಿದ್ದಾರೆ

ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಹೊಸ ಸ್ವರೂಪದ ಕಾರ್ಯಕ್ರಮ ರೂಪಿಸಿದ್ದೇವೆ. ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಸಂದಾಯ ಮಾಡಿ ಪಾರದರ್ಶಕತೆ ಕಾಪಾಡಿಕೊಂಡಿದ್ದೇವೆ. ರಾಜ್ಯದ ಶೇ.80 ರಷ್ಟು ಕುಟುಂಬಗಳಿಗೆ ಈ ಯೋಜನೆ ತಲುಪಿದ್ದು, 3 ಕೋಟಿಗೂ ಹೆಚ್ಚು ಜನ ಇದರ ಫಲಾನುಭವಿಗಳಾಗಿದ್ದಾರೆ ಎಂದು ತಿಳಿಸಿದರು.

ಇದೇ 21 ರಂದು ರಾಜ್ಯದ ಕಾರ್ಯಕರ್ತರ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷರು ಸೂಚಿಸಿದ್ದಾರೆ. ಶಾಸಕರು, ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಮುಖಂಡರು, ಸಹಕಾರ ಸಂಸ್ಥೆಗಳ ಪ್ರತಿನಿಧಿಗಳು, ಪದಾಧಿಕಾರಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು, ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಗೆದ್ದವರು, ಸೋತವರು, ಬೂತ್ ಮಟ್ಟದ ಪ್ರತಿನಿಧಿಗಳನ್ನು ಸೇರಿಸಿ ಈ ಸಮಾವೇಶ ಮಾಡಲು ತಿಳಿಸಿದ್ದು, ಕಾರ್ಯಕ್ರಮ ಸ್ಥಳದ ಬಗ್ಗೆ ಎರಡು ದಿನಗಳಲ್ಲಿ ತಿಳಿಸುತ್ತೇವೆ ಎಂದು ತಿಳಿಸಿದರು.

ಇಂದಿನ ಸಭೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ನಮ್ಮ ಪಕ್ಷ ಶಾಸಕರು ಹಾಗೂ ಸಚಿವರಿಗೆ ಕೆಲವು ಸೂಚನೆ ನೀಡಿದ್ದೇವೆ. ಈ ತಿಂಗಳ ಒಳಗಾಗಿ ಆಶ್ರಯ ಸಮಿತಿ, ಆರಾಧನಾ ಸಮಿತಿ, ಇಂಧನ ಇಲಾಖೆ ಉಪಸಮಿತಿ, ನೀರಾವರಿ ಇಲಾಖೆ ಕೆರೆಗಳ ಸಮಿತಿ, ಕೆಡಿಪಿ ಸೇರಿದಂತೆ ಎಲ್ಲ ಸಮಿತಿಗಳಿಗೆ ನಾಮನಿರ್ದೇಶನ ಮಾಡಬೇಕು. ಜಿಲ್ಲಾಧ್ಯಕ್ಷರು ಹಾಗೂ ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ತಿಂಗಳ ಒಳಗಾಗಿ ಜಿಲ್ಲಾ ಮಂತ್ರಿಗಳು ನಾಮನಿರ್ದೇಶನ ಮಾಡಿ ಕಾರ್ಯಕರ್ತರಿಗೆ ಶಕ್ತಿ ತುಂಬಬೇಕು ಎಂದರು.

ಜಿಲ್ಲಾ ಹಾಗೂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮಾಡಲು ತೀರ್ಮಾನಿಲಾಗಿದೆ. ಫೆ.12 ರಂದು ವಿಧಾನಮಂಡಲದ ಅಧಿವೇಶನ ಆರಂಭವಾಗುವ ಸಾಧ್ಯತೆ ಇದೆ. ಹೀಗಾಗಿ ಮುಂದಿನ ತಿಂಗಳ 12ರ ಒಳಗಾಗಿ ಈ ಸಮಾವೇಶಗಳನ್ನು ನಡೆಸಬೇಕಿದೆ. ಜಿಲ್ಲಾ ಮಂತ್ರಿಗಳು ಈ ಸಮಾವೇಶಗಳ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರು.

ಮನೆ ಮನೆಗೆ ಕಾಂಗ್ರೆಸ್

ಮನೆ ಮನೆಗೆ ಕಾಂಗ್ರೆಸ್ ಎಂಬ ಕಾರ್ಯಕ್ರಮವನ್ನು ರೂಪಿಸುತ್ತಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡುತ್ತೇವೆ. ಇನ್ನು ಕಾರ್ಯಕರ್ತರಿಗೆ ಶಕ್ತಿ ತುಂಬಲು ನಿಗಮ ಮಂಡಳಿಗಳ ನೇಮಕದ ಮೊದಲ ಪಟ್ಟಿ ಸದ್ಯದಲ್ಲೇ ಪ್ರಕಟವಾಗಲಿದೆ. ಈ ಹುದ್ದೆಗಳ ಕಾಲವಧಿ 2 ವರ್ಷ. ಎಲ್ಲರಿಗೂ ಅವಕಾಶ ಸಿಗಲಿ ಎಂದು ಈ ಕಾಲಮಿತಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿ ಬಗ್ಗೆ ಎಐಸಿಸಿ ನಾಯಕರು ನಮಗೆ ಅಜೆಂಡಾ ನಿಗದಿ ಮಾಡಿದ್ದಾರೆ. 28 ಕ್ಷೇತ್ರಗಳಿಗೆ ಮಂತ್ರಿಗಳನ್ನು ಉಸ್ತುವಾರಿಯಾಗಿ ನೇಮಕ ಮಾಡಿದ್ದು, ನಾಳೆ ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಾಲ್ಕು ರಾಜ್ಯಗಳ ಸಚಿವರುಗಳ ಸಭೆ ಕರೆಯಲಾಗಿದೆ. ಅಲ್ಲಿ ಯಾವ ರೀತಿ ಕೆಲಸ ಮಾಡಬೇಕು ಎಂಬುದರ ಬಗ್ಗೆ ತಿಳಿಸುತ್ತಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X