ಕೊಪ್ಪಳದಲ್ಲಿ ಉಕ್ಕು ಕಾರ್ಖಾನೆ ಸ್ಥಾಪನೆಗೆ ನಮ್ಮ ವಿರೋಧ: ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ‘ಕೊಪ್ಪಳದಲ್ಲಿ ಬಲ್ಡೋಟ ಕಂಪೆನಿಯ ಉಕ್ಕಿನ ಕಾರ್ಖಾನೆ ಸ್ಥಾಪನೆಗೆ ನಮ್ಮ ವಿರೋಧವಿದೆ. ಜಿಲ್ಲೆಯ ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್.ತಂಗಡಗಿ ಇಂದಿಲ್ಲಿ ತಿಳಿಸಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಮ್ಮದೆ ಸರಕಾರ ಕಾರ್ಖಾನೆ ಆರಂಭಕ್ಕೆ ಪರವಾನಗಿ ನೀಡಿರಬಹುದು. ಆದರೆ, ಸ್ಥಳೀಯ ಜನರ ವಿರೋಧವಿದೆ. ಈ ಕಾರಣಕ್ಕಾಗಿ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ಹೋಗುತ್ತೇವೆ ಎಂದು ತಿಳಿಸಿದರು.
‘ಜಿಲ್ಲೆಯಲ್ಲಿ ಕಾರ್ಖಾನೆಗಾಗಿ ಭೂಮಿ ಕಳೆದುಕೊಂಡವರಿಗೆ ಉದ್ಯೋಗ ಕೊಡುವ ಬಗ್ಗೆ ನಮ್ಮ ಬಳಿ ಮಾಹಿತಿ ಇಲ್ಲ. ಈ ಹಿಂದೆ ಕಾರ್ಖಾನೆಯಿಂದ ಪರಿಸರ ಹಾನಿ ವರದಿ ಬಗ್ಗೆಯೂ ನನಗೆ ಮಾಹಿತಿ ಇಲ್ಲ. ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಜನರ ಜತೆ ನಾವಿದ್ದೇವೆ’ ಎಂದರು.
Next Story





