Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿರುವ 1695 ಅನಧಿಕೃತ...

ರಾಜ್ಯದಲ್ಲಿರುವ 1695 ಅನಧಿಕೃತ ಶಾಲೆಗಳನ್ನು ಹಂತ ಹಂತವಾಗಿ ಮುಚ್ಚುತ್ತೇವೆ: ಸಚಿವ ಮಧು ಬಂಗಾರಪ್ಪ

''ಹೊಸದಾಗಿ ಅನಧಿಕೃತ ಶಾಲೆಗಳು ಕಂಡುಬಂದಲ್ಲಿ ಅಧಿಕಾರಿಗಳೇ ಹೊಣೆ''

ವಾರ್ತಾಭಾರತಿವಾರ್ತಾಭಾರತಿ11 Aug 2023 10:37 PM IST
share
ರಾಜ್ಯದಲ್ಲಿರುವ 1695 ಅನಧಿಕೃತ ಶಾಲೆಗಳನ್ನು ಹಂತ ಹಂತವಾಗಿ ಮುಚ್ಚುತ್ತೇವೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆ.11: ರಾಜ್ಯಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವನ್ನು ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚುತ್ತೇವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ಶುಕ್ರವಾರ ನಗರದ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಧಿಕೃತ ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ. ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರಕಾರದ ಕರ್ತವ್ಯವಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕ್ರಮ ಜರುಗಿಸಲಾಗುವುದು ಎಂದರು.

ರಾಜ್ಯದಲ್ಲಿ 26 ಶಾಲೆಗಳು ನೋಂದಣಿಯನ್ನೇ ಮಾಡಿಲ್ಲ, ಅನುಮತಿ ಪಡೆಯದೆ ಉನ್ನತೀಕರಿಸಿರುವ ಶಾಲೆಗಳು 76, ಇತರೆ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳು 143, ಅನುಮತಿ ಪಡೆಯದೆ ಹೆಚ್ಚುವರಿ ವಿಭಾಗಗಳನ್ನು ಪಡೆದಿರುವ 631, ಅನುಮತಿ ಪಡೆಯದೆ ಸ್ಥಳಾಂತರಿಸಿರುವ 190, ಅನುಮತಿ ಪಡೆಯದೆ ಹಸ್ತಾಂತರ ಮಾಡಿರುವ 15, ಒಂದೇ ಕಟ್ಟಡದಲ್ಲಿ ಕೇಂದ್ರ ಮತ್ತು ರಾಜ್ಯ ಪಠ್ಯಕ್ರಮ ಬೋಧಿಸುತ್ತಿರುವ ಶಾಲೆಗಳು 95 ಶಾಲೆಗಳಿವೆ ಎಂದು ಸಚಿವರು ಮಾಹಿತಿ ನೀಡಿದರು.

ಹೊಸದಾಗಿ ಅನಧಿಕೃತ ಶಾಲೆಗಳು ಕಂಡುಬಂದಲ್ಲಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಈ ಸಂಬಂಧ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಮುಂದಾಗುವಂತೆ ಆಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ಆ.18ರಂದು ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲೆಗಳ 1ರಿಂದ 10ನೆ ತರಗತಿ ಮಕ್ಕಳಿಗೆ ವಾರದಲ್ಲಿ 2 ದಿನ ನೀಡುತ್ತಿರುವ ಮೊಟ್ಟೆ ವಿತರಣೆ ಯೋಜನೆಯನ್ನು ಶಾಲೆಯೊಂದರಲ್ಲಿ ಮೊಟ್ಟೆ/ಬಾಳೇಹಣ್ಣು/ಶೇಂಗಾ ಚಿಕ್ಕಿ ವಿತರಿಸುವ ಮೂಲಕ ಚಾಲನೆ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಬಜೆಟ್‍ನಲ್ಲಿ ಘೋಷಿಸಿದ್ದಂತೆ ಶಾಲಾ ಆವರಣ ಮತ್ತು ಸುತ್ತಲಿನ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಹಯೋಗದಲ್ಲಿ 50 ಲಕ್ಷ ಗಿಡಗಳನ್ನು ನೆಡುವ ‘ಸಸ್ಯ ಶ್ಯಾಮಲಾ’ ಯೋಜನೆ ಅನುμÁ್ಠನಕ್ಕೆ ಚರ್ಚಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಖಾಸಗಿ ಶಾಲೆಗಳು ಪ್ರತಿವರ್ಷ ಆಗ್ನಿಶಾಮಕ ದಳದಿಂದ ಅನುಮತಿ ನವೀಕರಣ ಮಾಡಿಕೊಳ್ಳಬೇಕು ಎಂಬ ನಿಯಮವನ್ನು ಸಡಿಲಿಸಲು ಸಾಧ್ಯವಿಲ್ಲ. ನಮಗೆ ಮಕ್ಕಳ ಸುರಕ್ಷತೆ ಮುಖ್ಯ. ಅದೇ ರೀತಿ ಶಾಲಾ ಮಕ್ಕಳನ್ನು ಮ್ಯಾನೇಜ್ಮೆಂಟ್‍ನ ಸೇವೆಗಳಿಗೆ ಬಳಸಿದರೆ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಗಿಡ ನೆಡುವುದು ಮುಂತಾದ ಕಲಿಕೆಯ ಉದ್ದೇಶದ ಕೆಲಸಗಳಿಗೆ ವಿನಾಯಿತಿಯಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.

ಶಾಲಾ ವಿದ್ಯುತ್, ನೀರು ಬಿಲ್ ಮನ್ನಾ ಚಿಂತನೆ: ಸರಕಾರಿ ಶಾಲೆಗಳ ನೀರು ಮತ್ತು ವಿದ್ಯುತ್ ಬಿಲ್ ಮೊತ್ತವನ್ನು ಮನ್ನಾ ಮಾಡುವಂತೆ ಸರಕಾರಕ್ಕೆ ಮನವಿ ಮಾಡಲಾಗುತ್ತದೆ. ಸರಕಾರಿ ಶಾಲೆಗಳಲ್ಲಿ ಅತಿ ಕಡಿಮೆ ಮೊತ್ತದ ಬಿಲ್ ಗಳಿರುವುದರಿಂದ ಮನ್ನಾ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗುವುದು ಎಂದು ಸಚಿವರು ತಿಳಿಸಿದರು. ಈ ವೇಳೆ ಶಾಲಾ ಶಿಕ್ಷಣ ಆಯುಕ್ತೆ ಬಿ.ಬಿ. ಕಾವೇರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X