Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ...

ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ದಿಲ್ಲಿಯಲ್ಲಿ ಧ್ವನಿ ಎತ್ತುತ್ತೇವೆ: ಡಿಕೆ ಶಿವಕುಮಾರ್‌

'ಫೆ.7ರಂದು ದಿಲ್ಲಿಯಲ್ಲಿ ರಾಜ್ಯ ಸರಕಾರದಿಂದ ಪ್ರತಿಭಟನೆ'

ವಾರ್ತಾಭಾರತಿವಾರ್ತಾಭಾರತಿ5 Feb 2024 1:08 PM IST
share
ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ದಿಲ್ಲಿಯಲ್ಲಿ ಧ್ವನಿ ಎತ್ತುತ್ತೇವೆ: ಡಿಕೆ ಶಿವಕುಮಾರ್‌

ಬೆಂಗಳೂರು, ಫೆ. 5: ಕೋವಿಡ್ ಸಮಯದಲ್ಲಿ, ರೈತರು ಹಾಗೂ ಜಿಎಸ್ ಟಿ ವಿಚಾರದಲ್ಲಿ, ಕೇಂದ್ರದ ಯೋಜನೆಗಳ ಅನುದಾನದಲ್ಲಿ, ಬರ ಪರಿಹಾರ, ನರೇಗಾ ಯೋಜನೆ ಹಾಗೂ ನಿರಾವರಿ ಇಲಾಖೆ ಯೋಜನೆಗಳ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ಈ ಅನ್ಯಾಯವನ್ನು ನೋಡಿಕೊಂಡು ಇನ್ನೆಷ್ಟು ದಿನ ಸುಮ್ಮನೆ ಕೂರಬೇಕು? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ವಿಧಾನಸೌಧದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯರ ಜತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ನಾವು ಧ್ವನಿ ಎತ್ತಿ ಈ ಬಗ್ಗೆ ದೇಶ ಹಾಗೂ ರಾಜ್ಯದ ಜನರಿಗೆ ಅರಿವು ಮೂಡಿಸಲು ಫೆ.7ರಂದು ದಿಲ್ಲಿಯಲ್ಲಿ ರಾಜ್ಯ ಸರಕಾರ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದರು.

ರಾಜ್ಯದ ಹಿತ ಕಾಯುವ ಹೋರಾಟಕ್ಕೆ ನಾವೆಲ್ಲರೂ ಒಟ್ಟಾಗಿ ಹೆಜ್ಜೆ ಇಡಬೇಕಿದೆ. ರಾಜ್ಯದ ಜನ ನಮಗೆ ಅವಕಾಶ ಕೊಟ್ಟಿದ್ದು ಅವರಿಗೆ ನ್ಯಾಯ ಒದಗಿಸಿ ಋಣ ತೀರಿಸುವುದು ನಮ್ಮ ಕರ್ತವ್ಯ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು ಕೇಂದ್ರ ಸರ್ಕಾರದ ಜತೆ ಸಹಕಾರ ಸಮನ್ವಯತೆಯಿಂದ ನಡೆದುಕೊಂಡು ಬರುತ್ತಿದ್ದೇವೆ. ಕೇಂದ್ರ ಸರ್ಕಾರ ಕಳೆದ 10 ವರ್ಷಗಳಿಂದ ಮಾಡುತ್ತಿರುವ ಅನ್ಯಾಯವನ್ನು ಪ್ರತಿ ವರ್ಷ ಗಮನಿಸುತ್ತಿದ್ದೇವೆ ಎಂದರು.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲೂ ಡಬಲ್ ಇಂಜಿನ ಸರ್ಕಾರ ಬಂದರೆ ರಾಜ್ಯ ಅಭಿವೃದ್ಧಿಯಾಗುತ್ತದೆ ಎಂದು ಹೇಳುತ್ತಿದ್ದರು. ಮಧ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಕೂಡ ಇತ್ತು. ನಮ್ಮ ಸರ್ಕಾರ ಬಂದ ನಂತರ ಕೇಂದ್ರ ಬಜೆಟ್ ನಲ್ಲಿ ನ್ಯಾಯ ಒದಗಿಸುತ್ತಾರೆ ಎಂದು ನಾವು ತಾಳ್ಮೆಯಿಂದ ಕಾಯುತ್ತಿದ್ದೆವು. ಕಳೆದ ವರ್ಷ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಘೋಷಣೆಯಾದ ನೀರಾವರಿ ಇಲಾಖೆಯ ಅನುದಾನವನ್ನಾದರೂ ಬಿಡುಗಡೆ ಮಾಡುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೆವು. ಅವರು ನುಡಿದಂತೆ ನಡೆಯುತ್ತಾರೆ ಎಂದು ನಂಬಿಕೆ ಇಟ್ಟಿದ್ದೆವು. ಆದರೆ ನಮ್ಮ ನಂಬಿಕೆ, ನಿರೀಕ್ಷೆ ಹುಸಿಯಾಯಿತು.

ರಾಜ್ಯದಿಂದ ಕೇಂದ್ರಕ್ಕೆ ಹೋಗುತ್ತಿರುವ ಸಂಪನಲ್ಲಿ ರಾಜ್ಯಕ್ಕೆ ಸಿಗಬೇಕಾದ ಪಾಲು ನ್ಯಾಯಯುತವಾಗಿ ಸಿಗುತ್ತದೆ ಎಂದು ಭಾವಿಸಿದ್ದೆವು. ನಾವು ತೆರಿಗೆ ಪಾವತಿಯಲ್ಲಿ ದೇಶದಲ್ಲಿ ಎರಡನೇ ಸ್ಥಾನದಲ್ಲಿದ್ದರೂ ನಮಗೆ ಕೇಂದ್ರದಿಂದ ಸಿಗುವ ಅನುದಾನದಲ್ಲಿ ತೀರಾ ಅನ್ಯಾಯವಾಗಿದೆ. ನಮಗಿಂತ ಕಡಿಮೆ ತೆರಿಗೆ ಪಾವತಿಸುವ ಉತ್ತರ ಭಾರತದ ರಾಜ್ಯಗಳಿಗೆ ನಮಗಿಂತ ಹೆಚ್ಚಿನ ಪಾಲು ನೀಡಲಾಗುತ್ತಿದೆ. ನಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ನಾವು ಧ್ವನಿಯೆತ್ತಲು ಫೆ.7ರಂದು ದಿಲ್ಲಿಯಲ್ಲಿ ರಾಜ್ಯ ಸರಕಾರ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಪ್ರತಿಭಟನೆಗೆ ಪಕ್ಷಾತೀತವಾಗಿ ಎಲ್ಲಾ ಶಾಸಕರು, ಪರಿಷತ್ ಸದಸ್ಯರು, ಸಂಸದರು ಭಾಗವಹಿಸಬೇಕು ಎಂದು ಆಹ್ವಾನ ನೀಡುತ್ತೇನೆ ಎಂದು ಹೇಳಿದರು.

ರಾಜ್ಯದಲ್ಲಿ ಬರಗಾಲದಿಂದ 223 ತಾಲೂಕುಗಳು ಬರಕ್ಕೆ ತುತ್ತಾಗಿವೆ. ಇದುವರೆಗೂ ಬರಗಾಲದ ಪರಿಹಾರ ಬಿಡುಗಡೆ ಮಾಡಿಲ್ಲ.

ನರೇಗಾ ಯೋಜನೆಯಲ್ಲಿ ನೀಡಲಾಗುವ 100 ಮಾನವ ಕೂಲಿ ದಿನಗಳ ಪ್ರಮಾಣವನ್ನು ಬರ ಪೀಡಿತ ಪ್ರದೇಶಗಳಲ್ಲಿ 150 ದಿನಗಳಿಗೆ ಏರಿಕೆ ಮಾಡಬಹುದು ಎಂದು ಕಾನೂನಿನಲ್ಲಿ ಇದೆ. ಅದನ್ನೂ ಅವರು ನೀಡುತ್ತಿಲ್ಲ. ನಿರಂತರವಾಗಿ ಇಷ್ಟೊಂದು ಅನ್ಯಾಯವಾದರೂ ನಾವು ಇನ್ನೆಷ್ಟು ದಿನ ನೋಡಿಕೊಂಡು ಸುಮ್ಮನೆ ಕೂರಬೇಕು ಎಂದವರು ಪ್ರಶ್ನಿಸಿದರು.

ವಿತ್ತ ಸಚಿವರಿಗೆ ಅನ್ಯಾಯ ಸರಿಪಡಿಸುವ ಅಧಿಕಾರವಿದೆ:

ಸಂಸತ್ತಿನಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಗಳ ವಿಚಾರದಲ್ಲಿ ವಿತ್ತ ಸಚಿವರ ಪಾತ್ರವಿಲ್ಲ ಎಂಬ ಹೇಳಿಕೆ ನೀಡಿರುವ ಬಗ್ಗೆ ಕೇಳಿದಾಗ, “ ನಿರ್ಮಲಾ ಸೀತರಾಮನ್ ಬಹಳ ಬುದ್ದಿವಂತರು ಎಂಬುದು ನನಗೆ ಗೊತ್ತಿದೆ. ಅವರು ಕರ್ನಾಟಕದ ಪ್ರತಿನಿಧಿಯಾಗಿದ್ದು, ಅವರು ಕಳೆದ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆ ವಿಚಾರವಾಗಿ 5,300 ಕೋಟಿ ರೂ, ಅನುದಾನವನ್ನು ಘೋಷಣೆ ಮಾಡಿದ್ದರು. ಈ ಘೋಷಣೆ ಮಾಡಿದ್ದು ವಿತ್ತ ಸಚಿವರೇ ಅಲ್ಲವೇ? ಯಾವುದೇ ಮಾಹಿತಿ ಇಲ್ಲದೆ ಸಚಿವರು ಇಂತಹ ಘೋಷಣೆಯನ್ನು ಬಜೆಟ್ ನಲ್ಲಿ ನೀಡುವುದಿಲ್ಲ. ಚುನಾವಣೆಗೂ ಮುನ್ನ ವಿತ್ತ ಸಚಿವರು ಈ ಘೋಷಣೆ ಮಾಡಿದ್ದರು. ಇದು ಕೇವಲ ಒಂದು ಉದಾಹರಣೆ. ಇನ್ನು ಹಣಕಾಸು ಆಯೋಗದ ವಿಚಾರದಲ್ಲಿ ಆಗಿರುವ ತಾರತಮ್ಯ ಸರಿಪಡಿಸಲು ವಿತ್ತ ಸಚಿವರಿಗೆ ಸಂಪೂರ್ಣ ಅಧಿಕಾರವಿದೆ. ಗುಜರಾತಿನಲ್ಲಿ ಗಿಫ್ಟ್ ಸಿಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು ಕರ್ನಾಟಕ ರಾಜ್ಯಕ್ಕೂ ಆ ಯೋಜನೆ ನೀಡಿ. ಅವರು ಕರ್ನಾಟಕದವರಾಗಿದ್ದು ಕರ್ನಾಟಕಕ್ಕೂ ಒಂದು ಗಿಫ್ಟ್ ಸಿಟಿ ನೀಡಲಿ. ನಾವು ಅದಕ್ಕೆ ಸಿದ್ಧರಾಗಿದ್ದೇವೆ. ನಾವು ಭಾರತೀಯರೇ. ದೇಶವನ್ನು ಒಟ್ಟಾಗಿಡುವುದು ನಮ್ಮ ಆಶಯ. ಆದರೆ ಇಂತಹ ತಾರತಮ್ಯವೇಕೆ?” ಎಂದು ಡಿಕೆಶಿ ಪ್ರಶ್ನಿಸಿದರು.

ನಿಮ್ಮ ಪ್ರತಿಭಟನೆಯಲ್ಲಿ ಬೇರೆ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಆಹ್ವಾನ ನೀಡುತ್ತೀರಾ ಎಂದು ಕೇಳಿದಾಗ, 'ನಾವು ಈ ವಿಚಾರದಲ್ಲಿ ರಾಜಕೀಯ ಮಾಡಲು ಹೋಗುವುದಿಲ್ಲ. ಇದು ಕರ್ನಾಟಕಕ್ಕೆ ಸಿಗಬೇಕಾದ ಪಾಲು ಪಡೆಯುವ ವಿಚಾರ. ಇದು ರಾಜ್ಯದ ವಿಷಯ' ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ನಿರ್ವಹಣೆ ಸಾಮರ್ಥ್ಯ ನಮಗಿದೆ:

ಕರ್ನಾಟಕ ಸರಕಾರದ ಆರೋಪಗಳು ರಾಜಕೀಯ ಪ್ರೇರಿತ, ಅವರು ಗ್ಯಾರಂಟಿ ಯೋಜನೆಗಳಿಗೆ ಹಣ ವೆಚ್ಚ ಮಾಡುತ್ತಿದ್ದಾರೆ ಎಂಬು ನಿರ್ಮಲಾ ಸೀತರಾಮನ್ ಹೇಳಿಕೆ ಬಗ್ಗೆ ಕೇಳಿದಾಗ, 'ಕರ್ನಾಟಕ ಸರಕಾರ ಗ್ಯಾರಂಟಿ ಯೋಜನೆಗಳ ನಿರ್ವಹಣೆಯ ಸಾಮರ್ಥ್ಯವನ್ನು ಹೊಂದಿದೆ. ಇದಕ್ಕೂ ಗ್ಯಾರಂಟಿ ಯೋಜನೆಗಳಿಗೂ ಯಾವುದೇ ಸಂಬಂಧವಿಲ್ಲ. ಅವರು ನಮ್ಮ ಪಾಲನ್ನು ನೀಡಲಿ ಸಾಕು, ನಮ್ಮ ರಾಜ್ಯವನ್ನು ನಾವು ನಡೆಸುತ್ತೇವೆ' ಎಂದು ತಿಳಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X