Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ...

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಘೋಷಿಸಿದ ಕೊಡುಗೆಗಳೇನು?

ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು

ವಾರ್ತಾಭಾರತಿವಾರ್ತಾಭಾರತಿ16 Feb 2024 3:50 PM IST
share
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಘೋಷಿಸಿದ ಕೊಡುಗೆಗಳೇನು?

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 2024-25ನೇ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗುವುದು. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಯೋಜನೆ ಅವಕಾಶ ಕಲ್ಪಿಸಿದೆ ಎಂದು ಸಿಎಂ ಸಿದ್ದಾರಮಯ್ಯ ಹೇಳಿದ್ದಾರೆ.

ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 ಕೋಟಿ ಎಪಿಎಲ್, ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಯಜಮಾನಿ ಮಹಿಳೆಯರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಈವರೆಗೆ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ.

► ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು.

► ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ ಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು.

► ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು.

► ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು.

► Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ 1,000 ರೂ. ಪ್ರೋತ್ಸಾಹಧನವನ್ನು ನೀಡಲಾಗುವುದು.

► ಆರೋಗ್ಯ ಇಲಾಖೆಯೊಂದಿಗೆ ಸಮನ್ವಯಿಸಿ ಎಲ್ಲಾ ತಾಲ್ಲೂಕುಗಳಲ್ಲಿ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಎರಡು Cataract ಶಸ್ತ್ರಚಿಕಿತ್ಸೆ ಶಿಬಿರಗಳನ್ನು ಆಯೋಜಿಸಲಾಗುವುದು.

► ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ 4 ಅನುಪಾಲನಾ ಗೃಹಗಳನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.

► ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸಲು ಇನ್ನೂ ಬಾಕಿಯಿರುವ 1,500 ವಿಶೇಷಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುವುದು.

► ಲಿಂಗತ್ವ ಅಲ್ಪಸಂಖ್ಯಾತರ ಬದುಕನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರೂ.ಗಳಿಂದ 1,200 ರೂ.ಗಳಿಗೆ ಹೆಚ್ಚಿಸಲಾಗುವುದು. ಜೊತೆಗೆ ಗುರುತಿಸುವಿಕೆ ಹಾಗೂ ಗುರುತಿನ ಚೀಟಿ ವಿತರಣೆಯ ಪ್ರಕ್ರಿಯೆಗಳನ್ನು ಸರಳಗೊಳಿಸಲಾಗುವುದು.

► ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು;

• ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು 1500 ರೂ.ಗಳಿಂದ 2000 ರೂ.ಗಳಿಗೆ ಹೆಚ್ಚಿಸಲಾಗುವುದು.

• ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ವಿಶೇಷ ಪ್ಯಾಕೇಜ್ ಅನ್ನು ನೀಡಲಾಗುವುದು.

• ನಿವೇಶನ ಹೊಂದಿರುವ ವಸತಿರಹಿತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ ಕಲ್ಪಿಸಲಾಗುವುದು.

• ಅವರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಕಲ್ಪಿಸಲು ಮರುಸಮೀಕ್ಷೆ ನಡೆಸಲಾಗುವುದು.

► 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗುವುದು.

► ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2024-25ನೇ ಸಾಲಿನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X