ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್ ಅವರ ಭೇಟಿ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಬೆಂಗಳೂರು: ರಾಜ್ಯ ರಾಜಕೀಯ ಬೆಳವಣಿಗೆಯೊಂದರಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಭೇಟಿಯಾಗಿದ್ದಾರೆ.
ಭೇಟಿ ಬಗ್ಗೆ ನಿಖಿಲ್ ಕುಮಾರಸ್ವಾಮಿಯವರು ತನ್ನ X ಖಾತೆಯಲ್ಲಿ ಫೋಟೊ ಸಹಿತ ಹಂಚಿಕೊಂಡಿದ್ದು, ʼಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್ - ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು.ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದರುʼ ಎಂದು ತಿಳಿಸಿದ್ದಾರೆ.
ʼʼಇದೇ ವೇಳೆ ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು. ಅವರು ಅತ್ಯಂತ ಪ್ರೀತಿ, ವಾತ್ಸಲ್ಯದಿಂದ ನನ್ನನ್ನು ಬರಮಾಡಿಕೊಂಡು ಆಶೀರ್ವದಿಸಿದರು. ಪ್ರೀತಿಯಿಂದ ಸತ್ಕರಿಸಿದ ನಿಮಗೆ ಧನ್ಯವಾದಗಳುʼʼ ಎಂದು ನಿಖಿಲ್ ಬರೆದುಕೊಂಡಿದ್ದಾರೆ.
ಇತ್ತೇಚೆಗೆ ಹಲವು ಬಿಜೆಪಿ ನಾಯಕರನ್ನು ಭೇಟಿ ಮಾಡಿ, ಜೆಡಿಎಸ್ - ಬಿಜೆಪಿ ಮೈತ್ರಿ ಬಗ್ಗೆ ಚರ್ಚೆ ನಡೆಸುತ್ತಿರುವ ನಿಖಿಲ್ ಕುಮಾರಸ್ವಾಮಿ ಅವರು ಮುಂಬರುವ ಲೋಕ ಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ.







