Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಬಂಡುಕೋರ ನಾಯಕʼ ಈಶ್ವರಪ್ಪ ವಿರುದ್ಧ...

ʼಬಂಡುಕೋರ ನಾಯಕʼ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ʼವೀಕ್ ಪಿಎಂ’ ಅಲ್ಲದೆ ಮತ್ತೇನು? : ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದ ಪ್ರಧಾನಿಗೆ ತಿರುಗೇಟು ನೀಡಿದ ಸಿಎಂ

ವಾರ್ತಾಭಾರತಿವಾರ್ತಾಭಾರತಿ19 March 2024 6:27 PM IST
share
ʼಬಂಡುಕೋರ ನಾಯಕʼ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ʼವೀಕ್ ಪಿಎಂ’ ಅಲ್ಲದೆ ಮತ್ತೇನು? :  ಸಿದ್ದರಾಮಯ್ಯ

ಬೆಂಗಳೂರು : "ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’, ನಿಮ್ಮ ಹಾಗೆ ನಾನು ‘‘ವೀಕ್ ಪಿಎಂ’’ ಅಲ್ಲ" ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

"ಮೋದಿಯವರೇ ನಿಮ್ಮನ್ನು ನೀವು 56 ಇಂಚಿನ ಎದೆಯುಳ್ಳವನು ಎಂದು ಬಣ್ಣಿಸಿಕೊಳ್ಳುತ್ತೀರಿ, ನಿಮ್ಮ ಅಭಿಮಾನಿಗಳು ನಿಮ್ಮನ್ನು ವಿಶ್ವಗುರು ಎಂದು ಕೊಂಡಾಡುತ್ತಾರೆ. ಆದರೆ ನೀವೊಬ್ಬ ‘‘ವೀಕ್ ಪಿಎಂ’’ ಎಂದು ಮತ್ತೆ ಮತ್ತೆ ತೋರಿಸಿಕೊಡುತ್ತಿದ್ದೀರಿ" ಎಂದು ವ್ಯಂಗ್ಯವಾಡಿದರು.

ಬಿ.ಎಸ್ ಯಡಿಯೂರಪ್ಪನವರು ಒಂದು ಕಾಲದಲ್ಲಿ ನಿಮ್ಮ ನಾಯಕತ್ವದ ವಿರುದ್ಧವೇ ಬಂಡಾಯ ಎದ್ದವರು, ನಿಮ್ಮನ್ನು ಹೀನಾಯವಾಗಿ ನಿಂದಿಸಿದವರು. ಅಂತಹವರ ಕಾಲಿಗೆ ಬಿದ್ದು ಮತ್ತೆ ಪಕ್ಷಕ್ಕೆ ಕರೆತಂದು ಮೆರವಣಿಗೆ ಮಾಡುವ ಮೂಲಕ ನೀವೊಬ್ಬ ‘‘ವೀಕ್ ಪಿಎಂ’’ ಎಂದು ನೀವೇ ತೋರಿಸಿಕೊಟ್ಟಂತಾಗಲಿಲ್ಲವೇ? ಎಂದು ಹೇಳಿದರು.

ಕರ್ನಾಟಕದಲ್ಲಿ ನಿಮ್ಮ ನಾಯಕತ್ವದ ವಿರುದ್ಧ ಅರ್ಧ ಡಜನ್ ನಾಯಕರು ಬಂಡೆದಿದ್ದಾರೆ. ಟಿಕೆಟ್ ಪಡೆಯಲು ಅಸಮರ್ಥರಾದ ನಿಮ್ಮ ಪಕ್ಷದ ನಾಯಕರು ಹಾದಿ ಬೀದಿಲಿ ಹೊಡೆದಾಡಿಕೊಳ್ಳುತ್ತಿದ್ದಾರೆ, ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದಾರೆ. ನಿಮ್ಮ ಯಾವ ಮನವಿಗೂ ಅವರು ಕಿವಿಕೊಟ್ಟಿಲ್ಲ. ಇವರಲ್ಲಿ ಕೆಲವರು ನಮ್ಮನ್ನೂ ಸಂಪರ್ಕಿಸುತ್ತಿದ್ದಾರೆ. ಶಿಸ್ತಿನ ಪಕ್ಷದಲ್ಲಿ ಇದೆಂತಹ ಅಶಿಸ್ತಿನ ತಾಂಡವ. ಇದಕ್ಕೆಲ್ಲ ಕಾರಣ ನೀವೊಬ್ಬ ‘‘ವೀಕ್ ಪಿಎಂ’’ ಆಗಿರುವುದಲ್ಲವೇ? ಎಂದು ಪ್ರಶ್ನಿಸಿದರು.

ಶಿವಮೊಗ್ಗದಲ್ಲಿ ನೀವು ಪಕ್ಷದ ಪ್ರಚಾರ ಸಭೆ ನಡೆಸುತ್ತಿದ್ದಾಗ ಬಂಡುಕೋರ ನಾಯಕ ಈಶ್ವರಪ್ಪನವರು ಕೂಗಳತೆ ದೂರದ ತಮ್ಮ ಮನೆಯಲ್ಲಿದ್ದರೂ ಕ್ಯಾರೇ ಅನ್ನದೆ ಸಭೆಗೆ ಗೈರು ಹಾಜರಾಗಿದ್ದರು. ಇಷ್ಟು ಮಾತ್ರವಲ್ಲ ನಿರಂತರವಾಗಿ ಬಿಜೆಪಿ ನಾಯಕತ್ವದ ವಿರುದ್ಧ ಕಿಡಿಕಾರುತ್ತಿದ್ದರು. ಅವರ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘‘ವೀಕ್ ಪಿಎಂ’’ ಅಲ್ಲದೆ ಮತ್ತೇನು? ಎಂದರು.

ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ, ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾದವರು ಹಲವು ಮಂದಿ ಇದ್ದಾರೆ. ನಿಮ್ಮ ಪಕ್ಷದ ಕತೆ ಏನು? ವಿಶ್ವದಲ್ಲಿಯೇ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿದ್ದೇವೆ ಎಂದು ಕೊಚ್ಚಿಕೊಳ್ಳುತ್ತಿರುವ ನಿಮ್ಮ ಪಕ್ಷದಲ್ಲಿ ಪಿಎಂ ಆಗುವ ಅರ್ಹತೆ ಇರುವ ಒಬ್ಬ ನಾಯಕನೂ ಇಲ್ಲವಲ್ಲಾ? ಅಂತಹ ನಾಯಕರೇ ಇಲ್ವಾ? ಕುರ್ಚಿ ಕಳೆದುಕೊಳ್ಳುವ ಭಯದಿಂದ ಅಂತಹ ನಾಯಕರನ್ನು ಬೆಳೆಯಲು ನೀವೇ ಬಿಡುತ್ತಿಲ್ವಾ? ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X