Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೈತ್ರಿ ಶಾಸಕರು ನನ್ನನ್ನು ಸಿಎಂ ಮಾಡಿ...

ಮೈತ್ರಿ ಶಾಸಕರು ನನ್ನನ್ನು ಸಿಎಂ ಮಾಡಿ ಅಂದಾಗ ಕುಮಾರಸ್ವಾಮಿ ಹೂ ಅನ್ನಲಿಲ್ಲ, ಅವರ ಮಾತು ನಂಬಲು ನಾನೇನು ದಡ್ಡನೇ?: ಡಿಕೆಶಿ ವಾಗ್ದಾಳಿ

ʼʼಮುಂಬೈಯಿಂದ ಮರಳಿ ಬರುವುದಾಗಿ ಗೋಪಾಲಯ್ಯ, ಸೋಮಶೇಖರ್ ಹೇಳಿದ್ದರುʼʼ

ವಾರ್ತಾಭಾರತಿವಾರ್ತಾಭಾರತಿ15 Nov 2023 5:19 PM IST
share
ಮೈತ್ರಿ ಶಾಸಕರು ನನ್ನನ್ನು ಸಿಎಂ ಮಾಡಿ ಅಂದಾಗ ಕುಮಾರಸ್ವಾಮಿ ಹೂ ಅನ್ನಲಿಲ್ಲ, ಅವರ ಮಾತು ನಂಬಲು ನಾನೇನು ದಡ್ಡನೇ?: ಡಿಕೆಶಿ ವಾಗ್ದಾಳಿ

ಬೆಂಗಳೂರು: “ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದರೆ, ಮುಂಬೈಯಿಂದ ಮರಳಿ ಬರುವುದಾಗಿ ಗೋಪಾಲಯ್ಯ ಮತ್ತು ಎಸ್.ಟಿ.ಸೋಮಶೇಖರ್ ಫೋನ್ ಮಾಡಿ ಹೇಳಿದ್ದರು. ಆದರೆ ಕುಮಾರಸ್ವಾಮಿ ಅವರು ನನ್ನ ಹೆಸರು ಹೇಳಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಜೆಡಿಎಸ್ ಪಕ್ಷದ ಮಾಜಿ ಶಾಸಕರಾದ ಗೌರಿಶಂಕರ್ ಮತ್ತು ಮಂಜುನಾಥ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷದ 40 ಜನ ಬಿಜೆಪಿ ಸಂಪರ್ಕದಲ್ಲಿ ಇದ್ದಾರೆ ಅನ್ನುವ ಕುಮಾರಸ್ವಾಮಿ ಇನ್ನೊಂದೆಡೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ ಪಕ್ಷದ 19 ಶಾಸಕರ ಬೆಂಬಲ ನೀಡುತ್ತೇವೆ ಅನ್ನುತ್ತಾರೆ. ಅವರ ಮಾತು ಕೇಳಲು ನಾವೇನು ದಡ್ಡರೇ?ʼʼಎಂದು ಪ್ರಶ್ನಿಸಿದರು.

ʼʼಸರಕಾರಕ್ಕೆ ನಮ್ಮ ಪಕ್ಷದ 136 ಜನ ಶಾಸಕರು ಮತ್ತು ಪಕ್ಷೇತರರ ಬೆಂಬಲವಿದೆ. ಕುಮಾರಸ್ವಾಮಿ ಅವರೇ ಎನ್ ಡಿಎಯಿಂದ ಮೊದಲು ಹೊರಬನ್ನಿ, ಒಬ್ಬ ವ್ಯಕ್ತಿಗೆ ಸ್ಪಷ್ಟವಾದ ರಾಜಕೀಯ ನಿಲುವು ಇರಬೇಕು ಎಂದು ಅವರಿಗೆ ಹೇಳಿದೆ. ನಂತರ ಈ ಕುರಿತು ನಾನು ಹೆಚ್ಚು ಪ್ರತಿಕ್ರಿಯೆ ನೀಡಲು ಹೋಗಲೇಇಲ್ಲ. ಕುಮಾರಸ್ವಾಮಿ ಅವರ ದ್ವಂದ್ವ ನಿಲುವು ಅವರಿಗೆ ಅರ್ಥವಾಗುತ್ತಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಜೊತೆ ಸೇರಿದ್ದಾರೆ, ತೆಲಂಗಾಣದಲ್ಲಿ ಕೆಸಿಆರ್ಗೆ ಪರವಾಗಿ ಮಾತನಾಡುತ್ತಾರೆ. ಕೆಸಿಆರ್ ಅವರ ಮಗ ಮೋದಿ ಅವರನ್ನು ಸುಳ್ಳ ಎಂದು ಕರೆಯುತ್ತಾರೆ. 18 ಜನ ಶಾಸಕರನ್ನು ಕರೆದುಕೊಂಡು, ಅವರನ್ನು ಖುರ್ಚಿಯಿಂದ ಇಳಿಸಿದವರ ಜತೆಗೆ ಮಿಲನವಾಗಿದ್ದೇವೆ, ಸಂಸಾರ ನಡೆಸುತ್ತೇವೆ ಎಂದರೆ ಸಿದ್ದಾಂತ ಎನ್ನುವುದು ಎಲ್ಲಿಗೆ ಹೋಯಿತು?ʼʼ ಎಂದು ವಾಗ್ದಾಳಿ ನಡೆಸಿದರು.

ʼʼಜೆಡಿಎಸ್ ಜಾತ್ಯತೀತ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟ ಪಕ್ಷ ಎನ್ನುವ ಕಾರಣಕ್ಕೆ 80 ಜನ ಕಾಂಗ್ರೆಸ್ ಶಾಸಕರು ಇದ್ದರೂ 30 ಸ್ಥಾನ ಗೆದ್ದಂತಹ ಅವರ ಪಕ್ಷಕ್ಕೆ ಬೆಂಬಲ ನೀಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು. ಈಗ ಸರ್ಕಾರ ಬೀಳಿಸಿದವರ ಜತೆಗೇ ಅವರು ನೆಂಟಸ್ಥನ ಮಾಡಿದ್ದಾರೆʼʼ ಎಂದು ಕಿಡಿಕಾರಿದರು.

Tags

Kumaraswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X