Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜೆಡಿಎಸ್ ಉಳಿಸಲು ನಾನ್ಯಾಕೆ ಕೆಲಸ...

ಜೆಡಿಎಸ್ ಉಳಿಸಲು ನಾನ್ಯಾಕೆ ಕೆಲಸ ಮಾಡಬೇಕು?: ಮೈತ್ರಿಗೆ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ವಿರೋಧ

ʼನನ್ನ ಮನೆಗೆ ಕಲ್ಲೆಸೆದವರೊಂದಿಗೆ ಚೆನ್ನಾಗಿರಲು ಹೇಗೆ ಸಾಧ್ಯ?ʼʼ

ವಾರ್ತಾಭಾರತಿವಾರ್ತಾಭಾರತಿ13 Sept 2023 10:58 PM IST
share
ಜೆಡಿಎಸ್ ಉಳಿಸಲು ನಾನ್ಯಾಕೆ ಕೆಲಸ ಮಾಡಬೇಕು?: ಮೈತ್ರಿಗೆ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ವಿರೋಧ

ಹಾಸನ: ʼʼಯಾರೋ ಒಬ್ಬರ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಈ ಮೈತ್ರಿ ಅನಿವಾರ್ಯ ಅಂತ ಹೇಳಿದರೆ, ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲʼʼ ಎಂದು ಮಾಜಿ ಶಾಸಕ ಪ್ರೀತಂಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼʼ28 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ನಿಲ್ಲಲಿ, ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಬೇಕು ಅಂತ ಬಂದರೆ ಸ್ವಾಗತವಿದೆ. ಬಿಜೆಪಿ ಪಕ್ಷ ಉಳಿಸಿಕೊಳ್ಳಲು ನಮಗೆ ಗೊತ್ತಿದೆ. ಜೆಡಿಎಸ್ ಉಳಿಸಲು ನಾನ್ಯಾಕೆ ಕೆಲಸ ಮಾಡಬೇಕು?ʼʼ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ʼʼಆ ರೀತಿಯ ರಾಜಕಾರಣದ ಅವಶ್ಯಕತೆ ಬಿಜೆಪಿ ಕಾರ್ಯಕರ್ತರಿಗೆ ಇಲ್ಲ. ಅವರ ಪಕ್ಷ, ಕಾರ್ಯಕರ್ತರನ್ನು ಉಳಿಸಿಕೊಳ್ಳಲು ಮೈತ್ರಿ ಮಾಡಿಕೊಂಡರೆ ಇಡೀ ರಾಜ್ಯದ ಬಿಜೆಪಿ ಕಾರ್ಯಕರ್ತರು ಒಪ್ಪೋದಿಲ್ಲ, ಅದರಲ್ಲಿ ಪ್ರೀತಂಗೌಡ ಕೂಡ ಒಬ್ಬʼʼ ಎಂದು ಸ್ಪಷ್ಟಪಡಿಸಿದರು.

ʼʼಕುಟುಂಬ ರಾಜಕಾರಣ ವಿರುದ್ಧ ಹೋರಾಟʼʼ

ʼʼನಾವು ಕುಟುಂಬ ರಾಜಕಾರಣ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಹಾಸನದಲ್ಲಿ ಅವರ ಕುಟುಂಬದವರು ಅಭ್ಯರ್ಥಿ ಆಗುತ್ತಾರೆ. ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ ಜೆಡಿಎಸ್ ಉಳಿಸಲು ನಾನ್ಯಾಕೆ ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ಒಪ್ಪಲ್ಲʼʼ ಎಂದು ಮೈತ್ರಿ ಬಗ್ಗೆ ವಿರೋಧ ವ್ಯಿಕ್ತಪಡಿಸಿದರು.

ʼನನ್ನ ಮನೆಗೆ ಕಲ್ಲೆಸೆದವರೊಂದಿಗೆ ಚೆನ್ನಾಗಿರಲು ಹೇಗೆ ಸಾಧ್ಯ?ʼ

ʼʼಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಸಿಎಂ ಕುಮಾರಣ್ಣ ಜಿಲ್ಲೆಯಲ್ಲಿ ಒಕ್ಕಲಿಗ ನಾಯಕರು ಬೆಳೆಯಬಾರದು, ಪ್ರೀತಂ ಜೆ.ಗೌಡ ಬೆಳೆಯಬಾರದು ಎಂದು ವಿಧಾನಸಭಾ ಚುನಾವಣೆಯಲ್ಲಿ ತನ್ನ ವಿರುದ್ಧ ಪ್ರಚಾರ ಮಾಡಿದ್ದರು. ಜೆಡಿಎಸ್‌ನವರು ನನ್ನ ಮನೆಗೆ ಕಲ್ಲು ಹೊಡೆದರು. ಈಗ ಅವರೊಂದಿಗೆ ಚೆನ್ನಾಗಿರಲು ಹೇಗೆ ಸಾಧ್ಯʼʼ ಎಂದು ಪ್ರೀತಂಗೌಡ ಪ್ರಶ್ನಿಸಿದರು.

ಇದನ್ನೂ ಓದಿ >>> ಚೈತ್ರಾ ಕುಂದಾಪುರ ಪ್ರಕರಣ | ಕೋಟ್ಯಂತರ ರೂ. ವಂಚನೆ, ಚಿಕನ್ ಕಬಾಬ್ ತಯಾರಿಸುವವನಿಗೆ ಬಿಜೆಪಿ ನಾಯಕನ ವೇಷ!


share
ವಾರ್ತಾಭಾರತಿ
ವಾರ್ತಾಭಾರತಿ
Next Story
X