Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ...

ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ ನಿವಾಸದಲ್ಲಿ ನೀವು ಯಾಕೆ ಇದ್ದಿರಿ?: ಸಿಎಂಗೆ ಕುಮಾರಸ್ವಾಮಿ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ24 Oct 2023 10:23 AM IST
share
ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ ನಿವಾಸದಲ್ಲಿ ನೀವು ಯಾಕೆ ಇದ್ದಿರಿ?: ಸಿಎಂಗೆ ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಮುಂದುವರಿದಿದ್ದು, ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ಕುಮಾರಸ್ವಾಮಿ ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ ನಿವಾಸದಲ್ಲಿ ನೀವು ಯಾಕೆ ಇದ್ದಿರಿ? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಸಂಬಂಧ X ನಲ್ಲಿ ಸರಣಿ ಪೋಸ್ಟ್‌ ಮಾಡಿರುವ ಎಚ್ ಡಿಕೆ, ʼʼ ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ 'ಮೈತ್ರಿದ್ರೋಹ'ಕ್ಕೆ ಏನು ಹೇಳುವುದು ಸಿದ್ದರಾಮಯ್ಯ ನವರೇ? ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು ಡೊಂಕು ಮಾಡುವುದು ಕಷ್ಟವೇ? 'ಮೀರುಸಾದಿಕ'ನ ಆಧುನಿಕ ಅವತಾರಿ ಆಗಿರುವ ನಿಮಗೆ ಇಂಥ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ. ಅದನ್ನೇ ನೀವು ಸುತ್ತಿಬಳಸಿ ಹೇಳುತ್ತಿದ್ದೀರಿ. ಧೈರ್ಯವಾಗಿ, ನೇರವಾಗಿ ಸತ್ಯ ಹೇಳಲು ಭಯವೇ? ಹೇಳಿ, ಕುಮಾರಸ್ವಾಮಿ ಸರಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ?ʼʼ ಎಂದು ಪ್ರಶ್ನೆ ಮಾಡಿದ್ದಾರೆ.

ʼಜಾರ್ಜ್ ಅವರ ನಿವಾಸದಲ್ಲಿ ನೀವು ಯಾಕೆ ಇದ್ದಿರಿ?ʼ

ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ? ಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಅನ್ಯರಿಗೆ ಕಾಣದು ಎನ್ನುವಷ್ಟು ಕಿಲಾಡಿತನವೇ? ಇದು ಕಿಲಾಡಿತನವೋ ಅಥವಾ ಕಿಡಿಗೇಡಿತನವೋ? ತಮ್ಮ ಇಂಥ ಸಿದ್ದಲೀಲೆಗಳು ನಮಗೇನೂ ಹೊಸತಲ್ಲ. ಯಡಿಯೂರಪ್ಪ ಅವರು ಕಾವೇರಿಯನ್ನು ಖಾಲಿ ಮಾಡಲಿಲ್ಲ ಸರಿ, ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ ನಿವಾಸದಲ್ಲಿ ನೀವು ಯಾಕೆ ಇದ್ದಿರಿ? ಪಾಪ.. ಅನ್ಯರ ಹಂಗೇಕೆ ಬೇಕಿತ್ತು ನಿಮಗೆ? ಮಾಜಿ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಭಂಗಲೆಯನ್ನೇ ಹಂಚಿಕೆ ಮಾಡುತ್ತಿದ್ದೆವು. ನೀವು ಕೇಳಬಹುದಿತ್ತು. ಕುತಂತ್ರ, ಕುಯುಕ್ತಿಯೇ ಸಿದ್ದಸೂತ್ರ ಆಗಿರುವಾಗ ಭಂಗಲೆ ಬಿಟ್ಟುಕೊಡುವಷ್ಟು ಉದಾರತೆ ನಿಮಗೆ ಎಲ್ಲಿಂದ ಬರಬೇಕು? ಇಷ್ಟಕ್ಕೂ ಇನ್ನೊಬ್ಬರು ಇದ್ದ, ಅದರಲ್ಲೂ ನನ್ನ ಸಂಪುಟದಲ್ಲಿ ಸಚಿವರಾಗಿದ್ದವರಿಗೆ ಹಂಚಿಕೆ ಆಗಿದ್ದ ಭಂಗಲೆಯಲ್ಲಿ ಸೇರಿಕೊಳ್ಳುವುದು ಸಮಾಜವಾದಿಗೆ ಅದೆಂಥ ಸಭ್ಯತೆ? ಅದೆಂಥ ಶೋಭೆ? ಛೀ! ಛೀ!!ʼʼ ಎಂದು ಎಚ್‌ ಡಿಕೆ ವಾಗ್ದಾಳಿ ನಡೆಸಿದ್ದಾರೆ.

ʼʼವೆಸ್ಟ್ ಎಂಡ್ ನಲ್ಲಿ ಇದ್ದ ಕಾರಣವನ್ನು ನಾನು ಈಗಾಗಲೇ ತಿಳಿಸಿದ್ದೇನೆ, ನೂರಾರು ಸಲ. ಆದರೆ, ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆಯನ್ನು ಬಹಿರಂಗ ಮಾಡುವಿರಾ? ನಿಮ್ಮ ಅಂತರಂಗವನ್ನು ಒಮ್ಮೆಯಾದರೂ ಬಹಿರಂಗ ಮಾಡಿ ಸಿದ್ದರಾಮಯ್ಯನವರೇʼʼ ಎಂದು ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X