Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರಾ...

ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರಾ ? ಇದು ರಾಜ್ಯದ ಜನತೆಗೆ ಗೊತ್ತಾಗಬೇಕು: ಬಸವರಾಜ ಬೊಮ್ಮಾಯಿ

ʼʼಕಾಂಗ್ರೆಸ್ ‌ನಾಯಕರ ಭಿನ್ನಾಭಿಪ್ರಾಯ ಶೀಘ್ರ ಸ್ಪೋಟಗೊಳ್ಳಲಿದೆʼʼ

ವಾರ್ತಾಭಾರತಿವಾರ್ತಾಭಾರತಿ10 Oct 2023 11:30 PM IST
share
ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರಾ ? ಇದು ರಾಜ್ಯದ ಜನತೆಗೆ ಗೊತ್ತಾಗಬೇಕು: ಬಸವರಾಜ ಬೊಮ್ಮಾಯಿ

ಬಾಗಲಕೋಟೆ: ಕಾಂಗ್ರೆಸ್ ನಾಯಕರ ನಡುವಿನ‌ ಭಿನ್ನಾಭಿಪ್ರಾಯ ಶೀಘ್ರವೇ ಸ್ಪೋಟಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಇಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ʼಕಾಂಗ್ರೆಸ್ ಸರ್ಕಾರದಲ್ಲಿ ಸಚಿವರು , ಶಾಸಕರು ಒಗ್ಗಟ್ಟಿಲ್ಲದೆ ವಿಭಿನ್ನ ಹೇಳಿಕೆ ಕೊಡುತ್ತಿದ್ದು, ಈ ಸರ್ಕಾರದಲ್ಲಿ ಸಿಎಂ ನೇಮಕ ಪ್ರಕ್ರಿಯೆಯಿಂದಲೇ ಭಿನ್ನಾಭಿಪ್ರಾಯ ಶುರುವಾಗಿದೆ. ಸಿಎಂ ಆಯ್ಕೆ ವೇಳೆಯೇ ಸಿದ್ದರಾಮಯ್ಯ ಅವರು ತಮ್ಮನ್ನು ಸಿಎಂ ಮಾಡಲಿಲ್ಲ ಎಂದು ಕೋಪಗೊಂಡು ದೆಹಲಿಯಿಂದ ಮರಳಿ ಬರುತ್ತಿದ್ದರು. ನಂತರ ಸಿದ್ದರಾಮಯ್ಯ ಅವರಿಗೆ ಕರಾರು ಹಾಕಿ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದ್ದಾರೆʼ ಎಂದರು.

ಸಿದ್ದರಾಮಯ್ಯ ಅವರು ಐದು ವರ್ಷ ಪೂರ್ಣಾವಧಿ‌ ಸಿಎಂ ಎಂದು ಅನುಮಾನ ಬರುವ ರೀತಿಯಲ್ಲಿ ಅವರ ಸಂಪುಟದ ಹಿರಿಯ ಸಚಿವರೇ ಮಾತನಾಡಿದರು. ಇದೂವರೆಗೂ ಸಿದ್ದರಾಮಯ್ಯ ಸಹ 5 ವರ್ಷ ನಾನೇ ಸಿಎಂ ಅಂತ ಎಲ್ಲೂ ಹೇಳಿಲ್ಲ. ಏನಿದರರ್ಥ, ಏನು ಒಳಗಡೆ ನಡೆದಿದೆ ? ಇದು ರಾಜ್ಯದ ಜನತೆಗೆ ಗೊತ್ತಾಗಬೇಕು, ಇದು ಕಾಂಗ್ರೆಸ್ ಆಂತರಿಕ ವಿಷಯ ಅಲ್ಲ. ರಾಜ್ಯದ ಆಡಳಿತ ರಾಜ್ಯದ ಜನರಿಗೆ ಬೇಕಾದ ವಿಷಯ ಇದು ಎಂದು ಹೇಳಿದರು.

ಇನ್ನು ಮೂರು ಜನ ಉಪಮುಖ್ಯಮಂತ್ರಿಗಳ ವಿಚಾರದಲ್ಲಿ ಅವರ ಬುಡಕ್ಕೆ ಇವರು, ಇವರ ಬುಡಕ್ಕೆ ಅವರು ಇಡಲು ನೋಡುತ್ತಿದ್ದಾರೆ. ಈ ಮಧ್ಯೆ ಶಾಸಕರು ನಮ್ಮ ಮಾತು ಕೇಳುವವರಿಲ್ಲ, ಅಭಿವೃದ್ಧಿ ಇಲ್ಲ ಅಂತಿದ್ದಾರೆ. ಹೀಗಾಗಿ ಈ ಸರ್ಕಾರ ಗೊಂದಲದ ಗೂಡಾಗಿದೆ. ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಇನ್ನು ಸ್ವಲ್ಪ ದಿನದಲ್ಲಿ ಸ್ಪೋಟವಾಗಲಿದೆ ಎಂದು ಭವಿಷ್ಯ ನುಡಿದರು.‌

ನಾನು ಬಿಜೆಪಿಗೆ ಬಂದ ಬಳಿಕವೇ ಸೋತಿದ್ದು ಎಂಬ ಮಾಜಿ ಸಚಿವ ವಿ.ಸೋಮಣ್ಣ ಹೇಳಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಅವರ ಅನುಭವ, ಅದು ಸತ್ಯ ಕೂಡ ಇದೆ. ಅದಕ್ಕೆ ಕಾರಣಗಳು ಬೇರೆ ಬೇರೆ ಇವೆ. ವಿ. ಸೋಮಣ್ಣ ಅವರು ಕ್ಷೇತ್ರ ಬದಲಾವಣೆ ಮಾಡಿರುವ ಕಾರಣಗಳೂ ಇವೆ ಎಂದರು.

ʼಶೀಘ್ರ ವಿಪಕ್ಷ ನಾಯಕನ ಆಯ್ಕೆʼ

ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಪಕ್ಷ ನಾಯಕನ ಆಯ್ಕೆ ವಿಳಂಬದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ʼಈಗಾಗಲೇ ರಾಜ್ಯಾಧ್ಯಕ್ಷ ಇದ್ದಾರೆ, ಕೆಲಸ ಮಾಡುತ್ತಿದ್ದಾರೆ. ಅಧ್ಯಕ್ಷ, ವಿಪಕ್ಷ ನಾಯಕ ಎರಡನ್ನೂ ಒಟ್ಟಿಗೆ ನೇಮಕ ಮಾಡಲು ವಿಳಂಬ ಆಗಿರುವುದು ನಿಜ. ಆದರೆ, ನಾನು ಈಗಾಗಲೇ ದೆಹಲಿ ನಾಯಕರೊಟ್ಟಿಗೆ ಮಾತಾಡಿದ್ದೇನೆ. ಐದು ರಾಜ್ಯಗಳ ಟಿಕೆಟ್ ಫೈನಲ್ ಆದ ನಂತರ ಮಾಡುದಾಗಿ ತಿಳಿಸಿದ್ದಾರೆ. ಆದಷ್ಟು ಬೇಗ ವಿಪಕ್ಷ ನಾಯಕ ಆಯ್ಕೆ ಆಗುತ್ತದೆ ಎಂಬ ವಿಶ್ವಾಸವಿದೆʼ ಎಂದು ಹೇಳಿದರು.

Tags

SiddaramaiahBasavaraja Bommai
share
ವಾರ್ತಾಭಾರತಿ
ವಾರ್ತಾಭಾರತಿ
Next Story
X