Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚಳಿಗಾಲದ ಅಧಿವೇಶನ: ಹತ್ತು ದಿನದ...

ಚಳಿಗಾಲದ ಅಧಿವೇಶನ: ಹತ್ತು ದಿನದ ವಿಧಾನಸಭೆ ಕಲಾಪದಲ್ಲಿ 66 ಗಂಟೆ 10 ನಿಮಿಷ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ15 Dec 2023 6:16 PM IST
share
ಚಳಿಗಾಲದ ಅಧಿವೇಶನ: ಹತ್ತು ದಿನದ ವಿಧಾನಸಭೆ ಕಲಾಪದಲ್ಲಿ 66 ಗಂಟೆ 10 ನಿಮಿಷ ಚರ್ಚೆ

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಡಿ.4ರಿಂದ 15ರ ವರೆಗೆ ಹತ್ತು ದಿನ ನಡೆದ ವಿಧಾನಸಭೆಯ ಕಲಾಪ ಅನಿರ್ಧಿಷ್ಟಾವಧಿಗೆ ಮುಂದೂಡಲ್ಪಟ್ಟಿದ್ದು, ಪ್ರಸಕ್ತ ಅಧಿವೇಶನವು ಸುಮಾರು 66 ಗಂಟೆ 10 ನಿಮಿಷಗಳ ಕಾಲ ಚರ್ಚೆ ನಡೆದಿದೆ.

ಶುಕ್ರವಾರ ವಿಧಾನಸಭೆಯಲ್ಲಿ ಪ್ರಸಕ್ತ ಅಧಿವೇಶನದ ಸಂಕ್ಷಿಪ್ತ ವರದಿಯನ್ನು ಮಂಡಿಸಿದ ಸ್ಪೀಕರ್ ಯು.ಟಿ.ಖಾದರ್, ‘ಈ ಅಧಿವೇಶನದಲ್ಲಿ ಇತ್ತೀಚೆಗೆ ನಿಧನ ಹೊಂದಿದ ಗಣ್ಯರಿಗೆ ಸಂತಾಪ ಸೂಚನಾ ನಿರ್ಣಯ ಮಂಡಿಸಿ, ಅಂಗೀಕರಿಸಲಾಗಿದೆ. ರಾಷ್ಟ್ರಪತಿ, ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಬಗ್ಗೆ ಕಾರ್ಯದರ್ಶಿಯವರ ವರದಿಯನ್ನು ಮಂಡಿಸಲಾಗಿದೆ ಎಂದರು.

2023-24ನೇ ಸಾಲಿನ ಪೂರಕ ಅಂದಾಜುಗಳ ಮೊದಲನೆ ಕಂತನ್ನು ಡಿ.11ರಂದು ಮಂಡಿಸಿದ್ದು, ಡಿ.13ರಂದು ಮತಕ್ಕೆ ಹಾಕಿ ಅಂಗೀಕರಿಸಲಾಗಿದೆ. 2023-24ನೆ ಸಾಲಿನ ರಾಜ್ಯ ಹಣಕಾಸಿನ ಮಧ್ಯವಾರ್ಷಿಕ ಪರಿಶೀಲನಾ ವರದಿಯನ್ನು ಡಿ.14ರಂದು ಮಂಡಿಸಲಾಗಿದೆ. ಅಧಿವೇಶನದಲ್ಲಿ ಧನವಿನಿಯೋಗ ವಿಧೇಯಕವು ಸೇರಿದಂತೆ ಒಟ್ಟು 17 ವಿಧೇಯಕಗಳನ್ನು ಮಂಡಿಸಿ, ಅಂಗೀಕರಿಸಲಾಗಿದೆ ಎಂದು ಯು.ಟಿ.ಖಾದರ್ ತಿಳಿಸಿದರು.

ರಾಜ್ಯದ 4 ವಿಮಾನ ನಿಲ್ದಾಣಗಳಿಗೆ ಐತಿಹಾಸಿಕ ವ್ಯಕ್ತಿಗಳ ನಾಮಕರಣ ಮಾಡಬೇಕೆಂದು ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವ ಅಧಿಕೃತ ನಿರ್ಣಯವನ್ನು ಹಾಗೂ ಮಹಾತ್ಮ ಗಾಂಧಿ ಬೆಳಗಾವಿಗೆ ಆಗಮಿಸಿದ ಶತಮಾನೋತ್ಸವದ ಸಂಭ್ರಮದಲ್ಲಿ ಸ್ಮಾರಕ ನಿರ್ಮಾಣ ಮಾಡುವ ಕುರಿತು ಖಾಸಗಿ ಸದಸ್ಯರ ನಿರ್ಣಯವನ್ನು ಡಿ.14ರಂದು ಸದನವು ಸರ್ವಾನುಮತದಿಂದ ಅಂಗೀಕರಿಸಿದೆ. ನಿಯಮ 60 ರಡಿಯಲ್ಲಿ ನೀಡಿದ್ದ 4 ಸೂಚನೆಗಳ ಪೈಕಿ 3 ಸೂಚನೆಗಳನ್ನು ನಿಯಮ 69ಕ್ಕೆ ಪರಿವರ್ತಿಸಲಾಗಿದ್ದು, ಒಟ್ಟು 5 ಸೂಚನೆಗಳನ್ನು ನಿಯಮ 69ರಡಿಯಲ್ಲಿ ಚರ್ಚಿಸಲಾಗಿದೆ ಎಂದು ಅವರು ಹೇಳಿದರು.

ವಿಧಾನ ಮಂಡಲದ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 2023-24ನೇ ಸಾಲಿನ ಮೊದಲನೆ ಹಾಗೂ ಮಧ್ಯಂತರ ವರದಿ, ಸಾರ್ವಜನಿಕ ಉದ್ಯಮಗಳ ಸಮಿತಿಯ 136ನೇ ವರದಿ, ವಿಧಾನಸಭೆ ಸದಸ್ಯರ ಖಾಸಗಿ ವಿಧೇಯಕಗಳ ಮತ್ತು ನಿರ್ಣಯಗಳ ಸಮಿತಿಯ 2023-24ನೇ ಸಾಲಿನ ಮೊದಲನೆ ವರದಿಯನ್ನು ಸದನದಲ್ಲಿ ಮಂಡಿಸಲಾಗಿದ್ದು ಒಟ್ಟು 9 ಅಧಿಸೂಚನೆಗಳು, 3 ಅಧ್ಯಾದೇಶಗಳು ಮತ್ತು 61 ವಾರ್ಷಿಕ ವರದಿಗಳು, 105 ಲೆಕ್ಕ ಪರಿಶೋಧನಾ ವರದಿಗಳು ಹಾಗೂ 01 ಲೆಕ್ಕ ತಪಾಸಣಾ ವರದಿಯನ್ನು ಸದನದಲ್ಲಿ ಮಂಡಿಸಲಾಗಿದೆ ಎಂದು ಯು.ಟಿ.ಖಾದರ್ ತಿಳಿಸಿದರು.

ರಾಜ್ಯ ಗ್ರಂಥಾಲಯ ಪ್ರಾಧಿಕಾರಕ್ಕೆ ನಾಲ್ಕು ಸದಸ್ಯರನ್ನು ನಾಮನಿರ್ದೇಶನ ಮಾಡಲು ಡಿ.15ರಂದು ಸಭಾಧ್ಯಕ್ಷರಿಗೆ ಸದನವು ಅಧಿಕಾರ ನೀಡಿದೆ. ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಸದನದಲ್ಲಿ ವಿಶೇಷ ಚರ್ಚೆ ನಡೆಸಲಾಗಿದ್ದು, ಒಟ್ಟು 42 ಸದಸ್ಯರು 11 ಗಂಟೆ 4 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ ಎಂದು ಅವರು ಹೇಳಿದರು.

18 ಅರ್ಜಿಗಳನ್ನು ಒಪ್ಪಿಸಲಾಗಿದೆ. ಒಟ್ಟು 3038 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಸದನದಲ್ಲಿ ಉತ್ತರಿಸಬೇಕಾಗಿದ್ದ 150 ಪ್ರಶ್ನೆಗಳ ಪೈಕಿ 148 ಪ್ರಶ್ನೆಗಳಿಗೆ ಹಾಗೂ ಲಿಖಿತ ಮೂಲಕ ಉತ್ತರಿಸುವ 2206 ಪ್ರಶ್ನೆಗಳ ಪೈಕಿ 2010 ಪ್ರಶ್ನೆಗಳಿಗೆ ಉತ್ತರಗಳನ್ನು ಸ್ವೀಕರಿಸಲಾಗಿದೆ. ನಿಯಮ 351 ರಡಿಯಲ್ಲಿ 200 ಸೂಚನೆಗಳನ್ನು ಅಂಗೀಕರಿಸಿದ್ದು, 110 ಸೂಚನೆಗಳ ಉತ್ತರಗಳನ್ನು ಸ್ವೀಕರಿಸಲಾಗಿದೆ. ಗಮನ ಸೆಳೆಯುವ 174 ಸೂಚನೆಗಳ ಪೈಕಿ 140 ಸೂಚನೆಗಳನ್ನು ಚರ್ಚಿಸಿ, ಮಂಡಿಸಲಾಗಿದೆ. ಒಟ್ಟಾರೆಯಾಗಿ 197 ಸೂಚನೆಗಳಿಗೆ ಉತ್ತರವನ್ನು ಸ್ವೀಕರಿಸಲಾಗಿದೆ. ಶೂನ್ಯ ವೇಳೆಯಲ್ಲಿ ಒಟ್ಟು 31 ಸೂಚನೆಗಳನ್ನು ಚರ್ಚಿಸಲಾಗಿದೆ ಎಂದು ಖಾದರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X