Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಹಿಳೆ ಅಪಹರಣ ಪ್ರಕರಣ | ನಿರೀಕ್ಷಣಾ...

ಮಹಿಳೆ ಅಪಹರಣ ಪ್ರಕರಣ | ನಿರೀಕ್ಷಣಾ ಜಾಮೀನು ನಿರಾಕರಣೆ ಬೆನ್ನಲ್ಲೇ ಎಚ್‌.ಡಿ.ರೇವಣ್ಣ ಬಂಧನ

ವಾರ್ತಾಭಾರತಿವಾರ್ತಾಭಾರತಿ4 May 2024 6:57 PM IST
share
ಮಹಿಳೆ ಅಪಹರಣ ಪ್ರಕರಣ | ನಿರೀಕ್ಷಣಾ ಜಾಮೀನು ನಿರಾಕರಣೆ ಬೆನ್ನಲ್ಲೇ ಎಚ್‌.ಡಿ.ರೇವಣ್ಣ  ಬಂಧನ

ಬೆಂಗಳೂರು: ‘ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧ ಎ1 ಆರೋಪಿಯಾಗಿರುವ ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ವಿಶೇಷ ತನಿಖಾ ದಳ(ಎಸ್‌ಐಟಿ) ಅಧಿಕಾರಿಗಳು ನಗರದ ಪದ್ಮನಾಭನಗರದಲ್ಲಿರುವ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನಿವಾಸದಲ್ಲಿ ಶನಿವಾರ ಬಂಧಿಸಿದ್ದಾರೆ.

ಎಚ್.ಡಿ.ರೇವಣ್ಣ ಅವರನ್ನು ಬಂಧಿಸಿದ ಬಳಿಕ ಅಧಿಕಾರಿಗಳು ನೇರವಾಗಿ ಇಲ್ಲಿನ ಅರಮನೆ ರಸ್ತೆಯಲ್ಲಿನ ಸಿಐಡಿ ಕಚೇರಿಯಲ್ಲಿನ ಕಾರ್ಲಟನ್ ಭವನದಲ್ಲಿರುವ ಎಸ್‍ಐಟಿ ಕಚೇರಿಗೆ ಕರೆದೊಯ್ದಿದ್ದಾರೆ. ಮೈಸೂರಿನ ಕೆ.ಆರ್.ನಗರ ಠಾಣೆಯಲ್ಲಿ ದಾಖಲಾದ ಅಪಹರಣ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್.ಡಿ. ರೇವಣ್ಣರನ್ನು ಎಸ್‌ಐಟಿ ಬಂಧಿಸಿದೆ.

ಮಹಿಳೆಯನ್ನು ಅಪಹರಿಸಿದ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಎಚ್.ಡಿ.ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿ ತೀರ್ಪು ನೀಡಿತ್ತು.

ಇದರ ಬೆನ್ನಲ್ಲೇ ಎಚ್.ಡಿ.ರೇವಣ್ಣರ ಬಂಧನಕ್ಕೆ ಐದಕ್ಕೂ ಹೆಚ್ಚು ಮಂದಿ ಎಸ್‍ಐಟಿ ಅಧಿಕಾರಿಗಳು ಎರಡು ಕಾರುಗಳಲ್ಲಿ ಪದ್ಮನಾಭನಗರದ ಎಚ್.ಡಿ.ದೇವೇಗೌಡರ ನಿವಾಸಕ್ಕೆ ತೆರಳಿದ್ದರು. ಅಧಿಕಾರಿಗಳು ನಿವಾಸಕ್ಕೆ ತೆರಳಿ 15 ನಿಮಿಷವಾದರೂ ಮನೆ ಬಾಗಿಲು ತೆರೆದಿರಲಿಲ್ಲ. ನಂತರ ಎಚ್.ಡಿ.ರೇವಣ್ಣ ಅವರೇ ಬಾಗಿಲು ತೆರೆದು ಹೊರಬಂದರು. ತಕ್ಷಣವೇ ಅವರನ್ನು ಬಂಧಿಸಿದ ಎಸ್‍ಐಟಿ ಅಧಿಕಾರಿಗಳು ಕಚೇರಿಯತ್ತ ಕರೆದೊಯ್ದರು.

ಎಸ್‍ಐಟಿ ಕಚೇರಿ ಬಳಿ ಬಿಗಿ ಭದ್ರತೆ: ‘ಎಚ್.ಡಿ.ರೇವಣ್ಣ ಬಂಧನದ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಎಸ್‍ಐಟಿ ಕಚೇರಿ ಇರುವ ಕಾರ್ಲಟನ್ ಭವನದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಬ್ಯಾರಿಕೇಡ್ ಹಾಕಿ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಬಂದೋಬಸ್ತ್ ಮಾಡಿದ್ದಾರೆ.

ಏನಿದು ಅಪಹರಣ ಪ್ರಕರಣ?: ವ್ಯಕ್ತಿಯೊಬ್ಬರು ತನ್ನ ತಾಯಿ ನಾಪತ್ತೆಯಾಗಿದ್ದಾರೆ. ಬಿಡುಗಡೆಯಾದ ಅಶ್ಲೀಲ ವಿಡಿಯೊದಲ್ಲಿ ಅವರ ಚಿತ್ರವೂ ಇತ್ತು, ಬಳಿಕ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ಸಂಬಂಧ ಎಚ್.ಡಿ.ರೇವಣ್ಣ ಪತ್ನಿ ಭವಾನಿಯವರ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವರನ್ನು ಈಗಾಗಲೇ ಎಸ್‍ಐಟಿ ಬಂಧಿಸಿದೆ. ಇವರನ್ನು ಆರೋಪಿ ಎ 2 ಎಂದು ಎಸ್‍ಐಟಿ ಗುರುತಿಸಿದೆ. ಎಚ್.ಡಿ.ರೇವಣ್ಣ ಮೊದಲ ಆರೋಪಿಯಾಗಿದ್ದಾರೆ. ಸಂತ್ರಸ್ತೆಯ 20 ವರ್ಷದ ಪುತ್ರ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು.

ನಾಪತ್ತೆಯಾಗಿರುವ ಮಹಿಳೆಯ ಪತ್ತೆಗಾಗಿ ನಂತರ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಪರಿಶೀಲನೆ ನಡೆಸಲಾಗಿತ್ತು. ಬಳಿಕ ಶನಿವಾರ ಸಂಜೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಎಚ್.ಡಿ.ರೇವಣ್ಣಗೆ ಎಸ್‍ಐಟಿ ಮೂರನೇ ನೋಟಿಸ್ ನೀಡಿತ್ತು. ಇದೀಗ ಅವರನ್ನು ಬಂಧಿಸಲಾಗಿದೆ.

ಎಸ್‍ಐಟಿ ವರದಿ ಬಂದ ಮೇಲೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುತ್ತಾರೆ ; ನಿಖಿಲ್ ಕುಮಾರಸ್ವಾಮಿ

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ವರಿಷ್ಠ ದೇವೇಗೌಡ, ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ಹೆಸರನ್ನು ತರುವುದು ಸರಿಯಲ್ಲ. ತಪ್ಪು ಮಾಡಿದವರು ಕಾನೂನಿಗೆ ತಲೆ ಬಾಗಲೇಬೇಕು. ತಪ್ಪಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಎಸ್‍ಐಟಿ ರಚನೆ ಮಾಡಿದ್ದು, ತನಿಖೆ ಆಗುತ್ತಿದೆ. ಕಾನೂನಿಗಿಂತ ಯಾರೂ ದೊಡ್ಡವರಿಲ್ಲ. ಎಸ್‍ಐಟಿ ವರದಿ ಬಂದ ಮೇಲೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುತ್ತಾರೆ. ಅದರ ಬಗ್ಗೆ ನಾನು ಹೆಚ್ಚಿಗೆ ಮಾತನಾಡುವುದಿಲ್ಲ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X