Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಹಿಳೆಯ ಅಪಹರಣ ಪ್ರಕರಣ | ಎಸ್‌ಐಟಿ...

ಮಹಿಳೆಯ ಅಪಹರಣ ಪ್ರಕರಣ | ಎಸ್‌ಐಟಿ ಕಸ್ಟಡಿಗೆ ಎಚ್‌.ಡಿ.ರೇವಣ್ಣ ; ನ್ಯಾಯಾಲಯ ಆದೇಶ

ವಾರ್ತಾಭಾರತಿವಾರ್ತಾಭಾರತಿ5 May 2024 8:13 PM IST
share
ಮಹಿಳೆಯ ಅಪಹರಣ ಪ್ರಕರಣ | ಎಸ್‌ಐಟಿ ಕಸ್ಟಡಿಗೆ ಎಚ್‌.ಡಿ.ರೇವಣ್ಣ ; ನ್ಯಾಯಾಲಯ ಆದೇಶ

ಬೆಂಗಳೂರು : ಸಂತ್ರಸ್ತ ಮಹಿಳೆಯ ಅಪಹರಣ ಆರೋಪ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ)ದಿಂದ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಮೇ 8ರ ವರೆಗೆ ‘ಎಸ್‌ಐಟಿ’ ಕಸ್ಟಡಿಗೆ ನೀಡಿ 17ನೆ ಎಸಿಎಂಎಂ ನ್ಯಾಯಾಲಯ ನ್ಯಾಯಾಧೀಶ ರವೀಂದ್ರ ಕುಮಾರ್ ಬಿ. ಕಟ್ಟೀಮನಿ ಆದೇಶ ಹೊರಡಿಸಿದ್ದಾರೆ.

ಮೈಸೂರಿನ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪಹರಣ ಪ್ರಕರಣದಲ್ಲಿ ಎರಡು ದಿನಗಳ ಹಿಂದೆಷ್ಟೇ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ನಿವಾಸದಲ್ಲಿದ್ದ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ತನಿಖಾಧಿಕಾರಿಗಳು ಬಂಧಿಸಿದ್ದರು.

ಬಳಿಕ ಸಿಐಡಿಯಲ್ಲಿರುವ ಎಸ್‌ಐಟಿ ಕಚೇರಿಯಲ್ಲಿ ರೇವಣ್ಣ ಅವರನ್ನು ತನಿಖಾಧಿಕಾರಿಗಳು ವಿಚಾರಣೆಗೊಳಪಡಿಸಿದ್ದರು. ಹೆಚ್ಚಿನ ತನಿಖೆ ಅಗತ್ಯತೆ ಹಿನ್ನೆಲೆ ರವಿವಾರ ಅವರನ್ನು ಕೋರಮಂಗಲದ ಎನ್.ಜಿ.ವಿ.ಯಲ್ಲಿರುವ 17ನೆ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ರವೀಂದ್ರ ಕುಮಾರ್ ಬಿ. ಕಟ್ಟೀಮನಿ ಅವರ ನಿವಾಸದ ಮುಂದೆ ಹಾಜರುಪಡಿಸಿದ್ದರು.

ಈ ವೇಳೆ ಪ್ರಕರಣದಲ್ಲಿ ರೇವಣ್ಣ ಅವರ ಹೆಚ್ಚಿನ ವಿಚಾರಣೆ ಅಗತ್ಯವಿರುವುದರಿಂದ 5 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ಮನವಿ ಸಲ್ಲಿಸಿದ್ದರು. ಮತ್ತೊಂದೆಡೆ, ಎಸ್‌ಐಟಿ ಕಸ್ಟಡಿಗೆ ನೀಡದಂತೆ ರೇವಣ್ಣ ಅವರ ಪರ ವಕೀಲ ಮೂರ್ತಿ ಡಿ.ನಾಯ್ಕ್ ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಮೇ 8ರ ವರೆಗೆ ರೇವಣ್ಣ ಅವರನ್ನು ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.

ಮಂಗಳೂರಿನತ್ತ ಪ್ರಜ್ವಲ್ ರೇವಣ್ಣ?: ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದು, ರವಿವಾರ ತಡರಾತ್ರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ಅಧಿಕಾರಿಗಳು ಬಂಧಿಸಲಿದ್ದು, ಹಾಸನಕ್ಕೆ ಕರೆತರುವ ಸಾಧ್ಯತೆ ಇದೆ.

ಗೊಂದಲದ ಹೇಳಿಕೆ ನೀಡುತ್ತಿರುವ ಸಂತ್ರಸ್ತೆ: ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಮಹಿಳೆಯನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.ಆದರೆ. ಸಂತ್ರಸ್ತೆ ಯಾರು ನನ್ನನ್ನು ಅಪಹರಣ ಮಾಡಿಲ್ಲ ನಾನೇ ಹೋಗಿದ್ದು ಎಂದು ಒಂದು ಬಾರಿ ಹೇಳಿದರೆ, ಇನ್ನೊಂದು ಸಲ ಯಾರೋ ಸ್ಥಳೀಯರು ಬಂದು ಕರೆದುಕೊಂಡು ಹೋಗಿದ್ದಾರೆ ಎಂದು ಹೇಳುತ್ತಿದ್ದಾರೆ. ಹೀಗಾಗಿ ಸಂತ್ರಸ್ತೆಯ ಉತ್ತರಗಳಿಗೆ ಅಧಿಕಾರಿಗಳಲ್ಲಿ ಗೊಂದಲ ಮೂಡಿದೆ ಎನ್ನಲಾಗಿದೆ.

Tags

Woman abduction caseHD RevannaSITಎಸ್‌ಐಟಿ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X