Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. Mysore Dasara 2026 | ವಿಶ್ವವಿಖ್ಯಾತ...

Mysore Dasara 2026 | ವಿಶ್ವವಿಖ್ಯಾತ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ

ಮುಖ್ಯಮಂತ್ರಿ ಉಪಸ್ಥಿತಿಯಲ್ಲಿ ಅಭಿನವ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿಯಿಂದ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ11 Oct 2026 12:42 PM IST
share
Mysore Dasara 2026 | ವಿಶ್ವವಿಖ್ಯಾತ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ

ಮೈಸೂರು, ಅ.11: ವಿಶ್ವವಿಖ್ಯಾತ ಮೈಸೂರು ದಸರಾ-2026 ಕ್ಕೆ ಚಾಮುಂಡಿ ಬೆಟ್ಟದಲ್ಲಿ ರವಿವಾರ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

ಚಾಮುಂಡಿ ಬೆಟ್ಟದ ಶ್ರೀಚಾಮುಂಡೇಶ್ವರಿ ದೇವಸ್ಥಾನದ ಪಕ್ಕದಲ್ಲಿ ಹಾಕಿದ್ದ ಬೃಹತ್ ವೇದಿಕೆಯಲ್ಲಿ ಬೆಳ್ಳಿ ರಥದಲ್ಲಿ ಅಲಂಕೃತಗೊಂಡಿದ್ದ ಶ್ರೀಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಬೆಳಗ್ಗೆ 11:50ರಿಂದ 12:13 ರೊಳಗೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ ಕೊಪ್ಪಳ ಸಂಸ್ಥಾನ ಶ್ರೀ ಗವಿಮಠದ ಅಭಿನವ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರುಗಳು, ಸಂಸದರು, ಶಾಸಕರುಗಳು ಹಾಜರಿದ್ದರು.

ಮೈಸೂರಿನಿಂದ ಆಗಮಿಸಿ ಅಭಿನವ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ಅವರನ್ನು ಚಾಮುಂಡೇಶ್ವರಿ ದೇವಸ್ಥಾನ ಮತ್ತು ಜಿಲ್ಲಾಡಳಿತದ ವತಿಯಿಂದ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪತ್ನಿ ಸಮೇತ ಆಗಮಿಸಿ ನಂದಿ ಕಂಬದ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಅಭಿನವ ಶ್ರೀಗವಿಸಿದ್ದೇಶ್ವರ ಸ್ಚಾಮಿಜಿ ಅವರನ್ನು ಒಟ್ಟಿಗೆ ಕರೆದುಕೊಂಡು ಬಂದರು. ಬಳಿಕ ನಾಡ ಅಧಿದೇವತೆ ಶ್ರೀಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸಿದರು. ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ವಿಶೇಷ ಪೂಜೆ ಸಲ್ಲಿಸಿ ಆಶೀರ್ವದಿಸಿದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಡಿನಲ್ಲಿ ಬರಗಾಲ ಹೋಗಿ ಮಳೆ ಬೆಳೆ ಆಗಿ ಸುಭಿಕ್ಷದಿಂದ ಎಲ್ಲರು ಇರುವಂತೆ ಮಾಡು ತಾಯಿ ಎಂದು ದೇವರಲ್ಲಿ ಬೇಡಿಕೊಂಡರು. ಈ ವೇಳೆ ಅಭಿನವ ಶ್ರೀಗವಿಸಿದ್ದೇಶ್ವರ ಸ್ವಾಮೀಜಿ ಹಾಗೂ ಮುಖ್ಯಮಂತ್ರಿಗೆ ಕಲಾತಂಡಗಳ ಸಮೇತ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಈ ವೇಳೆ ಸಾಂಸ್ಕೃತಿಕ ಕಲಾತಂಡಗಳ ವೈಭವ ಕಳೆಗಟ್ಟಿತು.

ಹಲವು ಮಠಗಳ ಮಠಾಧೀಶರು, ಕ್ರೈಸ್ತ ಧರ್ಮ ಗುರುಗಳು, ಮೌಲ್ವಿಗಳು, ಬೌದ್ಧ ಬಿಕ್ಕುಗಳು, ಸಿಖ್ಖರು, ವಿವಿಧ ಧರ್ಮಗುರುಗಳು, ಸಾಧು ಸಂತರು ದಸರಾ ಉದ್ಘಾಟನೆಗೆ ಅಗಮಿಸಿದ್ದು ವಿಶೇಷವಾಗಿತ್ತು.

ಲಿಂಗರಾಜು ಮತ್ತು ತಂಡದವರು ಶುಶ್ರಾವ್ಯ ಗೀತೆಗಳನ್ನು ಹಾಡುವ ಮೂಲಕ ಭಕ್ತಿಭಾವ ಮೆರೆದರು.

ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ಧರಾಮಯ್ಯ ಅವರ ಸೂಚನೆ ಮೇರೆಗೆ ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪಾ ಕಾರ್ಯಕ್ರಮದ ಎಲ್ಲಾ ವ್ಯವಸ್ಥೆಯನ್ನು ನೋಡಿಕೊಂಡರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮೈಸೂರು ನಗರ ಪೊಲೀಸರು ಎಲ್ಲಾ ಕಡೆಗಳಲ್ಲಿ ಪೊಲೀಸ್ ಬಿಗಿ ಭದ್ರತೆ ವ್ಯವಸ್ಥೆ ಕಲ್ಪಿಸಿದ್ದಾರೆ.

ಮುರಿದು ಬಿದ್ದ ನಂದಿ ಕಂಬ:

ದಸರಾ ಉದ್ಘಾಟನೆಗೂ ಮುನ್ನ ಚಾಮುಂಡಿ ಬೆಟ್ಟದಲ್ಲಿ ಸಾಂಸ್ಕೃತಿಕ ಕಲಾತಂಡಗಳ ವೈಭವ ಮೇಳೈಸುತ್ತಿತ್ತು. ಈ ವೇಳೆ ನಂದಿ ಕಂಬದ ಧ್ವಜವನ್ನು ಕುಣಿಸಲಾಗುತ್ತಿತ್ತು. ಈ ವೇಳೆ ನಂದಿ ಕಂಬ ಅರ್ಧಕ್ಕೆ ಮುರಿದು ಬಿತ್ತು. ಆದರೆ ಯಾರಿಗೂ ಅಪಾಯ ಸಂಭವಿಸಲಿಲ್ಲ, ತಕ್ಷಣ ಅಲ್ಲಿದ್ದವರು ಅದನ್ನು ಎತ್ತಿ ಬೇರೆ ಕಂಬಗಳನ್ನು ಜೋಡಿಸಿದರು.

ಸಚಿವರಾದ ರಾಮಲಿಂಗ ರೆಡ್ಡಿ, ಈಶ್ವರ್ ಬಿ.ಖಂಡ್ರೆ, ಶಿವರಾಜ್ ತಂಗಡಗಿ, ಬಸವಣಪ್ಪ, ಬಾಲಕೃಷ್ಣ, ಪುಟ್ಟರಂಗಶೆಟ್ಟಿ, ಅಜಯ್ ಸಿಂಗ್, ರಿಝ್ವಾನ್ ಹರ್ಷದ್, ಮಾಜಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಸಂಸದ ಸುನೀಲ್ ಬೋಸ್, ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ, ಶಾಸಕರುಗಳಾದ ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಕೆ.ಹರೀಶ್ ಗೌಡ, ಟಿ.ಎಸ್.ಶ್ರೀವತ್ಸ, ಡಿ.ರವಿಶಂಕರ್, ದರ್ಶನ್ ಧ್ರುವನಾರಾಯಣ್, ಎ.ಆರ್.ಕೃಷ್ಣಮೂರ್ತಿ, ಗಣೇಶ್ ಪ್ರಸಾದ್, ರಾಘವೇಂದ್ರ ಹಿಟ್ನಾಳ್, ವಿಧಾನ ಪರಿಷತ್ ಸದಸ್ಯರಾದ ಸಿ.ಎನ್.ಮಂಜೇಗೌಡ, ಡಾ.ಡಿ.ತಿಮ್ಮಯ್ಯ, ಕೆ.ಶಿವಕುಮಾರ್, ವಿವೇಕಾನಂದ, ರಘು ಕೌಟಿಲ್ಯ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರುಗಳು ಆಗಮಿಸಿದ್ದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ, ಜಿ.ಪಂ. ಸಿಇಓ ಎಸ್ .ಯುಕೇಶ್ ಕುಮಾರ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಮಹಾನಗರ ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿಸಿಎಫ್ ಪ್ರಭುಗೌಡ, ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Tags

Mysore Dasara 2026Grandly Inaugurated
share
ವಾರ್ತಾಭಾರತಿ
ವಾರ್ತಾಭಾರತಿ
Next Story
X