ಅಣ್ಣನ ನಿಧನದ ಬಳಿಕ ರಾಜಕೀಯಕ್ಕೆ ಬಂದ ಯತೀಂದ್ರ; ಈಗ ಡಿಕೆಶಿ ಸಂಪುಟದಲ್ಲಿ ಸಚಿವ

ಡಾ.ಯತೀಂದ್ರ ಸಿದ್ದರಾಮಯ್ಯ
ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದು, ಸಿಎಂ ಡಿಕೆಶಿ ಸಚಿವ ಸಂಪುಟದಲ್ಲಿ ಮಾಜಿ ಸಿದ್ದರಾಮಯ್ಯರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಕೂಡಾ ಸ್ಥಾನ ಪಡೆದಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿರುವ ಡಾ.ಯತೀಂದ್ರ ಸಿದ್ದರಾಮಯ್ಯ, 2018ರಲ್ಲಿ ಮೊದಲ ಬಾರಿ ವರುಣಾ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸಿದ್ದಾರೆ.
ಸಿದ್ದರಾಮಯ್ಯ ಮತ್ತು ಪಾರ್ವತಿ ದಂಪತಿಯ ದ್ವಿತೀಯ ಪುತ್ರನಾಗಿ 1980ರ ಜೂನ್ 27ರಂದು ಜನಿಸಿದ ಡಾ.ಯತೀಂದ್ರ ಸಿದ್ದರಾಮಯ್ಯ, ಬೆಂಗಳೂರಿನ ಶೇಷಾದ್ರಿಪುರಂ ಶಾಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಕಾಲೇಜು ಮುಗಿಸಿ, ಬೆಂಗಳೂರಿನ ಮೆಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್. ಪೂರೈಸಿದ್ಣಾರೆ.
ಬೆಳಗಾವಿಯ ಕೆ.ಎಲ್.ಇ. ವಿಶ್ವವಿದ್ಯಾನಿಲಯದಲ್ಲಿ ಪ್ಯಾಥಲಜಿ ವಿಭಾಗದಲ್ಲಿ ಎಂ.ಡಿ. ಮುಗಿಸಿದ ಅವರು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.
2016ರ ವರೆಗೆ ಡಾ.ಯತೀಂದ್ರ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದೇ ಅಪರೂಪವಾಗಿತ್ತು. ಅಣ್ಣ ರಾಕೇಶ್ ಸಿದ್ದರಾಮಯ್ಯರ ನಿಧನದ ಬಳಿಕ ಅವರು ರಾಜಕೀಯ ಪ್ರವೇಶಿಸಿದರು. 2016ರ ಜುಲೈ 30ರಂದು ವಿದೇಶ ಪ್ರವಾಸದಲ್ಲಿ ರಾಕೇಶ್ ಸಿದ್ದರಾಮಯ್ಯ ಅನಾರೋಗ್ಯಕ್ಕೀಡಾಗಿ ಮೃತಪಟ್ಟರು. ಆ ಬಳಿಕ ಅಪ್ಪನಿಗೆ ನೆರವಾಗಲೆಂದು ಡಾ.ಯತೀಂದ್ರ ಸಿದ್ದರಾಮಯ್ಯ ರಾಜಕೀಯಕ್ಕೆ ಧುಮುಕಿದರು.
2018 ರಲ್ಲಿ ಮೊದಲ ಬಾರಿಗೆ ವರುಣಾ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ, ವಿಧಾನಸಭೆ ಪ್ರವೇಶಿಸಿದ ಡಾ.ಯತೀಂದ್ರ ಸಿದ್ದರಾಮಯ್ಯ, ಬದಲಾದ ರಾಜಕೀಯ ಸನ್ನಿವೇಶದಲ್ಲಿ 2023ರಲ್ಲಿ ತಂದೆಗೆ ವರುಣಾ ವಿಧಾನಸಭಾ ಕ್ಷೇತ್ರ ಬಿಟ್ಟುಕೊಟ್ಟರು. ಸದ್ಯ ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ತಂದೆ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದರು ವರುಣಾ ಕ್ಷೇತ್ರದ ಸಂಪೂರ್ಣ ಜವಾಬ್ದಾರಿಯನ್ನು ಯತೀಂದ್ರ ನೋಡುಕೊಳ್ಳುತ್ತಿದ್ದರು.
ಇದೀಗ ಮೊದಲ ಬಾರಿಗೆ ಸಚಿವರಾಗಿ ಪದಗ್ರಹಣ ಮಾಡಿದ್ದಾರೆ.






