Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಜಾತಿಗಣತಿ ವರದಿ’ಯ ವಿವರಗಳು ಸಾರ್ವಜನಿಕ...

‘ಜಾತಿಗಣತಿ ವರದಿ’ಯ ವಿವರಗಳು ಸಾರ್ವಜನಿಕ ಚರ್ಚೆಗೆ ಬರಬೇಕು : ಸಚಿವ ಯತೀಂದ್ರ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ27 Sept 2026 7:59 PM IST
share
‘ಜಾತಿಗಣತಿ ವರದಿ’ಯ ವಿವರಗಳು ಸಾರ್ವಜನಿಕ ಚರ್ಚೆಗೆ ಬರಬೇಕು : ಸಚಿವ ಯತೀಂದ್ರ ಸಿದ್ದರಾಮಯ್ಯ

ಚನ್ನಪಟ್ಟಣ : ಜಾತಿಗಣತಿ ವರದಿಯ ವಿವರಗಳು ಬಹಿರಂಗಗೊಂಡು, ಸಾರ್ವಜನಿಕ ಚರ್ಚೆಗೆ ಬರಬೇಕು. ಸಮಾಜದ ಪ್ರತಿಯೊಂದು ವರ್ಗದ ನೈಜ ಸ್ಥಿತಿ ಸಾರ್ವಜನಿಕವಾಗಿ ತಿಳಿಯುವಂತಾಗಬೇಕು. ಆ ಅಂಕಿ, ಅಂಶಗಳ ಆಧಾರದ ಮೇಲೆಯೆ ಸರಕಾರವು ಸಮಗ್ರ ಸಾಮಾಜಿಕ ನ್ಯಾಯದ ಸೂಕ್ತ ನೀತಿ ನಿಯಮಗಳನ್ನು ರೂಪಿಸಲು ಸಾಧ್ಯ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ರವಿವಾರ ಚನ್ನಪಟ್ಟಣದ ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಶತಮಾನೋತ್ಸವ ಭವನದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ‘ ಡಾ.ಯತೀಂದ್ರ ಸಿದ್ದರಾಮಯ್ಯ ಅಭಿಮಾನಿ ಬಳಗ'ದ ವತಿಯಿಂದ ಜಿಲ್ಲೆಯ ಕುರುಬ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಆಯೋಜಿಸಲಾಗಿದ್ದ 2ನೆ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ನೈಜ ಸಾಮಾಜಿಕ ನ್ಯಾಯವನ್ನು ತರಬೇಕಾದರೆ ಮೊದಲು ಸಮಾಜದ ನೈಜ ಸ್ಥಿತಿಗತಿಗಳ ಸ್ಪಷ್ಟ ಚಿತ್ರಣ ಲಭ್ಯವಾಗಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಜಾತಿಗಣತಿ ವರದಿ ಜಾರಿಯಾಗಬೇಕು ಎಂಬುದು ತಮ್ಮ ಸ್ಪಷ್ಟ ನಿಲುವಾಗಿದೆ. ಸಾಮಾಜಿಕ ನ್ಯಾಯದ ನೀತಿಗಳನ್ನು ರೂಪಿಸಲು ಪ್ರತಿಯೊಂದು ಸಮುದಾಯದ ನಿಖರ ಜನಸಂಖ್ಯೆ, ಸಮುದಾಯಗಳ ಆರ್ಥಿಕ ಸ್ಥಿತಿಗತಿ ಹಾಗೂ ಶಿಕ್ಷಣದ ಪ್ರಮಾಣ ತಿಳಿದುಕೊಳ್ಳಬೇಕಿದೆ ಎಂದು ಅವರು ಹೇಳಿದರು.

ಅದೇ ರೀತಿ, ಉನ್ನತ ಶಿಕ್ಷಣದಲ್ಲಿ ಹಿಂದುಳಿದ ವರ್ಗಗಳ ಪ್ರವೇಶಾವಕಾಶ, ಸರಕಾರಿ ಉದ್ಯೋಗಗಳಲ್ಲಿ ಸಮುದಾಯಗಳಿಗೆ ದೊರೆತಿರುವ ಪ್ರಾತಿನಿಧ್ಯ, ಶಾಸನಸಭೆ, ಸ್ಥಳೀಯ ಸಂಸ್ಥೆಗಳು ಹಾಗೂ ಸಾರ್ವಜನಿಕ ರಂಗದಲ್ಲಿ ಲಭಿಸಿರುವ ರಾಜಕೀಯ ಅವಕಾಶಗಳ ಬಗ್ಗೆ ತಿಳಿದುಕೊಳ್ಳಲು ಜಾತಿಗಣತಿ ವರದಿಯು ಮುಖ್ಯವಾಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಜಾತಿಗಣತಿ ವರದಿಯು ಯಾವುದೇ ನಿರ್ದಿಷ್ಟ ಸಮುದಾಯದ ವಿರುದ್ಧವಾದುದಲ್ಲ. ಎಲ್ಲ ಜಾತಿ, ಸಮುದಾಯಗಳಿಗೂ ಸಮಾನ ಅವಕಾಶ ಮತ್ತು ನ್ಯಾಯ ಸಿಗಬೇಕು ಎಂಬುದಷ್ಟೇ ಇದರ ಮುಖ್ಯ ಉದ್ದೇಶವಾಗಿದೆ. ಅವಕಾಶಗಳ ಹಂಚಿಕೆಯಲ್ಲಿ ಯಾವುದೇ ಸಮುದಾಯವು ಶಾಶ್ವತವಾಗಿ ಹೊರಗುಳಿಯಬಾರದು. ಹಿಂದುಳಿದವರನ್ನು ಮುನ್ನೆಲೆಗೆ ತರಲು ಮತ್ತು ಅವಕಾಶಗಳಿಂದ ವಂಚಿತರಾದವರ ಕೊರತೆಯನ್ನು ಸರಿಪಡಿಸಲು ನಿಖರ ಅಂಕಿ,ಅಂಶಗಳ ಅಗತ್ಯವಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಪ್ರತಿಪಾದಿಸಿದರು.

ಶಿಕ್ಷಣ ಎನ್ನುವುದು ಕೇವಲ ವೈಯಕ್ತಿಕ ಬೆಳವಣಿಗೆಗೆ ಸೀಮಿತವಾಗದೆ, ಸಮಗ್ರ ಸಮುದಾಯದ ಅಭಿವೃದ್ಧಿಗೆ ಬಳಕೆಯಾಗಬೇಕು. ಶಿಕ್ಷಣವು ಇಡೀ ಸಮಾಜವನ್ನು ಪರಿವರ್ತಿಸುವ ಮಹತ್ತರ ಶಕ್ತಿಯನ್ನು ಹೊಂದಿದ್ದು, ಹಿಂದುಳಿದ ವರ್ಗಗಳು ಹಾಗೂ ಅಹಿಂದ ಸಮುದಾಯಗಳ ಸರ್ವಾಂಗೀಣ ಪ್ರಗತಿಗೆ ಶಿಕ್ಷಣವೇ ದಾರಿ ಎಂದು ಅವರು ತಿಳಿಸಿದರು.

ಒಬ್ಬ ಮಗು ಶಿಕ್ಷಣ ಪಡೆದರೆ ಆ ಮಗುವಿನ ಕುಟುಂಬದ ಭವಿಷ್ಯವೆ ಬದಲಾಗುತ್ತದೆ. ಅದೇ ರೀತಿ ಸಾವಿರಾರು ಮಕ್ಕಳು ಅಕ್ಷರಸ್ಥರಾದರೆ ಆಡಳಿತ ಮತ್ತು ಸಾಮಾಜಿಕ ರಂಗದಲ್ಲಿ ಸಮುದಾಯದ ಸ್ಥಾನಮಾನವೆ ಎತ್ತರಕ್ಕೆ ಏರುತ್ತದೆ. ಈ ಹಿನ್ನೆಲೆಯಲ್ಲಿ ಕುರುಬ ಸಮುದಾಯವೂ ಸೇರಿದಂತೆ ಎಲ್ಲ ಹಿಂದುಳಿದ ಜಾತಿಗಳು ಮತ್ತು ಅಹಿಂದ ವರ್ಗಗಳಿಗೆ ಶಿಕ್ಷಣ ಅತ್ಯಂತ ಅಗತ್ಯವಾಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಪ್ರತಿಪಾದಿಸಿದರು.

ಹಿಂದುಳಿದ ಸಮುದಾಯಗಳ ಪೈಕಿ ಕುರುಬ ಸಮುದಾಯವು ಜನಸಂಖ್ಯೆಯ ದೃಷ್ಟಿಯಿಂದ ದೊಡ್ಡದಾಗಿದ್ದು, ಸಾಮಾಜಿಕ ಮತ್ತು ರಾಜಕೀಯವಾಗಿಯೂ ಹೆಚ್ಚಿನ ಶಕ್ತಿಯನ್ನು ಹೊಂದಿದೆ. ಈ ಶಕ್ತಿಗೆ ತಕ್ಕಂತೆ ಸಮುದಾಯದ ಮೇಲೆ ದೊಡ್ಡ ಮಟ್ಟದ ಸಾಮಾಜಿಕ ಹೊಣೆಗಾರಿಕೆಯೂ ಇದೆ ಎಂದು ಅವರು ಹೇಳಿದರು.

ಪ್ರತಿಯೊಬ್ಬರೂ ಕೇವಲ ತಮ್ಮ ಸ್ವಂತ ಅಥವಾ ಸ್ವ-ಸಮುದಾಯದ ಅಭಿವೃದ್ಧಿಗೆ ಮಾತ್ರ ಸೀಮಿತವಾಗದೆ, ತಮ್ಮ ಸುತ್ತಲಿನ ಎಲ್ಲ ಹಿಂದುಳಿದ ಮತ್ತು ಅಹಿಂದ ಸಮುದಾಯಗಳನ್ನು ಜೊತೆಯಲ್ಲಿ ಕೊಂಡೊಯ್ಯುವ ಮೂಲಕ ಸರ್ವಜನರ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದು ಯತೀಂದ್ರ ಸಿದ್ದರಾಮಯ್ಯ ಕರೆ ನೀಡಿದರು.

ಇದೇ ವೇಳೆ ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳನ್ನು ಸಚಿವರು ಅಭಿನಂದಿಸಿದರು.

ಸಮಾರಂಭದಲ್ಲಿ ರಾಷ್ಟ್ರಪತಿ ಪದಕ ಪುರಸ್ಕೃತ ಹಿಂದುಪುರ ರೈಲ್ವೆ ನಿರೀಕ್ಷಕ ಎಚ್.ಕೆ.ದೊಡ್ಡಯ್ಯ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಈ ವೇಳೆ ಶಾಸಕ ಸಿ.ಪಿ.ಯೋಗೇಶ್ವರ್, ಗ್ಯಾರಂಟಿ ಯೋಜನೆಗಳ ಅನುಷ್ಠಾ ನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ, ಕುರುಬರ ಸಂಘದ ನಿಕಟಪೂರ್ವ ರಾಜ್ಯಾಧ್ಯಕ್ಷ ಬಿ.ಸುಬ್ರಮಣ್ಯ, ಸಾಹಸ ನಿರ್ದೇಶಕ ಅಪ್ಪು ವೆಂಕಟೇಶ್ ಸೇರಿದಂತೆ ಚನ್ನಪಟ್ಟಣ, ರಾಮನಗರ, ಮಾಗಡಿ ಮತ್ತು ಕನಕಪುರ ತಾಲೂಕುಗಳ ಕುರುಬ ಸಂಘದ ಪದಾಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Tags

Yathindra Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X