ಮಳೆಯಾಗುವ ಮುನ್ಸೂಚನೆ; ಕರಾವಳಿ, ಮಲೆನಾಡು ಭಾಗದಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ

ಸಾಂದರ್ಭಿಕ ಚಿತ್ರ
ಬೆಂಗಳೂರು : ಮುಂದಿನ ಎರಡು ದಿನ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯಿದ್ದು, ಕರಾವಳಿ ಭಾಗದಲ್ಲಿ ನ.4ರಂದು ಹಾಗೂ ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನ.6ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಕರ್ನಾಟಕದಲ್ಲಿ ನ.5ರಂದು ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಸಿಡಿಲಿನೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಕರ್ನಾಟಕ ನ.6ರವರೆಗೆ ಒಂದೆರಡು ಕಡೆಗಳಲ್ಲಿ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆ ಇರಲಿದೆ.
ರಾಜ್ಯದ ಕೆಲವೆಡೆ ಬಿಸಿಲಿನ ವಾತಾವರಣ ಹಾಗೂ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡು ಭಾಗದಲ್ಲಿ ಅಲ್ಲಲ್ಲಿ ಭಾರಿ ಮಳೆ, ಉತ್ತರ ಒಳನಾಡು ಭಾಗದಲ್ಲಿ ಮಳೆಯ ಚಟುವಟಿಕೆ ಕಡಿಮೆ ಇರುವ ನಿರೀಕ್ಷೆಯಿದ್ದು, ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಹಗುರದಿಂದ ಸಾದಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




