ಯಶವಂತಪುರ ಬಿಜೆಪಿ ನಾಯಕ ಸಿ.ಎಂ.ಮಾರೇಗೌಡ ಉಚ್ಛಾಟನೆ

ಬೆಂಗಳೂರು, ಆ.20: ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅಸಮಾಧಾನ ಶಮನಕ್ಕೆ ಮುಂದಾಗಿರುವ ರಾಜ್ಯ ಬಿಜೆಪಿ ನಾಯಕರು, ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಯಶವಂತಪುರ ಮಂಡಲ ಮಾಜಿ ಅಧ್ಯಕ್ಣ ಸಿ.ಎಂ.ಮಾರೇಗೌಡರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.
2023ರ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿಧಾನಸಭಾ ಕ್ಷೇತ್ರದ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿ ಸೋಮಶೇಖರ್ ವಿರುದ್ಧ, ಪಕ್ಷ ವಿರೋಧಿ ಚಟುವಟಿಕೆ ಮಾಡಿರುವುದಾಗಿ ತಿಳಿದು ಬಂದಿರುತ್ತದೆ. ಇದರಿಂದ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದೀರಿ ಎಂದು ಪರಿಗಣಿಸಿ, ಯಶವಂತಪುರ ಮಂಡಲ ಮಾಜಿ ಅಧ್ಯಕ್ಷ ಸಿ.ಎಂ.ಮಾರೇಗೌಡ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ಎಂದು ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ನಾರಾಯಣ್ ಆದೇಶ ಹೊರಡಿಸಿದ್ದಾರೆ.
Next Story





