ʼಝಮೀರ್ ಅಹ್ಮದ್ ನನ್ನ ವಿರುದ್ಧ ಕೆಲಸ ಮಾಡಿದ್ದಾನೆʼ : ಸಿದ್ದರಾಮಯ್ಯನವರದ್ದು ಎನ್ನಲಾದ ಹೇಳಿಕೆಯ ವಿಡಿಯೋ ವೈರಲ್

ಸಿದ್ದರಾಮಯ್ಯ, ಝಮೀರ್ ಅಹ್ಮದ್
ಬೆಂಗಳೂರು : ಸಿದ್ದರಾಮಯ್ಯನವರ ‘ಪರಮಾಪ್ತ’ ಎಂದೇ ಗುರುತಿಸಿಕೊಂಡಿದ್ದ ಝಮೀರ್ ಅಹ್ಮದ್ ಖಾನ್ ವಿರುದ್ಧವೇ ಈಗ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾದ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಝಮೀರ್ ಅಹ್ಮದ್ ಖಾನ್ ಅವರಿಗೆ ಪ್ರಮುಖ ಹುದ್ದೆ ನೀಡುವಂತೆ ಅವರ ಬೆಂಬಲಿಗರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ ವೇಳೆ, ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿರುವುದಾಗಿ ಹೇಳಲಾಗುತ್ತಿದೆ. ಈ ವೇಳೆ, “ಅವರು ನನ್ನ ಆಪ್ತ ಎಂದು ಎಲ್ಲರೂ ಹೇಳುತ್ತಾರೆ. ಆದರೆ ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ” ಎಂದು ಸಿದ್ದರಾಮಯ್ಯ ಹೇಳಿದ್ದರು ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಹಿಂದೆ ಝಮೀರ್ ಅಹ್ಮದ್ ಖಾನ್ ಅವರದ್ದು ಎನ್ನಲಾದ ಆಡಿಯೋವೊಂದು ವೈರಲ್ ಆಗಿದ್ದ ಹಿನ್ನೆಲೆ, ಇದೀಗ ಹರಿದಾಡುತ್ತಿರುವ ವಿಡಿಯೋ ಮತ್ತಷ್ಟು ರಾಜಕೀಯ ಚರ್ಚೆಗೆ ಕಾರಣವಾಗಿದೆ.
Next Story




