Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರತಿ ಮಸೀದಿಯ ಮೌಲಾನಾಗಳಿಗೆ ಕನ್ನಡ...

ಪ್ರತಿ ಮಸೀದಿಯ ಮೌಲಾನಾಗಳಿಗೆ ಕನ್ನಡ ಬೋಧನೆ: ಝಮೀರ್ ಅಹ್ಮದ್ ಖಾನ್

ವಾರ್ತಾಭಾರತಿವಾರ್ತಾಭಾರತಿ5 Aug 2025 9:53 PM IST
share
ಪ್ರತಿ ಮಸೀದಿಯ ಮೌಲಾನಾಗಳಿಗೆ ಕನ್ನಡ ಬೋಧನೆ: ಝಮೀರ್ ಅಹ್ಮದ್ ಖಾನ್

ಬೆಂಗಳೂರು: ರಾಜ್ಯದ ಪ್ರತಿ ಮಸೀದಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೌಲಾನಾಗಳಿಗೂ ಕನ್ನಡ ಬೋಧನೆಯನ್ನು ಮಾಡಲಾಗುವುದು ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಝೆಡ್. ಝಮೀರ್ ಅಹ್ಮದ್ ಖಾನ್ ಪ್ರಕಟಿಸಿದ್ದಾರೆ.

ಮಂಗಳವಾರ ನಗರದ ಶೇಷಾದ್ರಿಪುರಂ ಮುಖ್ಯ ರಸ್ತೆಯಲ್ಲಿರುವ ಕೆಎಂಡಿಸಿ ಭವನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿದ್ದ, ‘ಮದ್ರಸಾ ಶಿಕ್ಷಕರಿಗೆ ಕನ್ನಡ ಕಲಿಸುವ ಅಭಿಯಾನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯದ ವಿವಿಧ ಮದ್ರಸಾಗಳ 200 ಶಿಕ್ಷಕರಿಗೆ ಕನ್ನಡವನ್ನು ಮೊದಲ ಹಂತವಾಗಿ ಕಲಿಸಿಕೊಡಲಾಗುವುದು.ಅದರಂತೆ ಒಟ್ಟು 36 ಗಂಟೆಗಳ ಕನ್ನಡ ಕಲಿಕೆಯನ್ನು 3 ತಿಂಗಳೊಳಗೆ ಹೇಳಿಕೊಡಲಾಗುವುದು. ಮುಂದಿನ ಹಂತದಲ್ಲಿ ಪ್ರತಿ ಮದ್ರಸಾಗಳ ಶಿಕ್ಷಕರಿಗೆ ಕನ್ನಡ ಕಲಿಸುವ ಕಾರ್ಯಕ್ರಮ ವಿಸ್ತರಿಸಲಾಗುವುದು. ಆನಂತರ, ಮುಂಬರುವ ದಿನಗಳಲ್ಲಿ ಪ್ರತಿ ಮಸೀದಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೌಲಾನಾಗಳಿಗೂ ಕನ್ನಡ ಕಲಿಕಾ ತರಗತಿ ನಡೆಸಲಾಗುವುದು ಎಂದರು.

ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ನಮಗೆ ನೀಡಿರುವ ಸಂವಿಧಾನದಿಂದ ನಾವು ಇಂದು ಅಸ್ತಿತ್ವದಲ್ಲಿದ್ದೇವೆ. ರಾಜ್ಯದಲ್ಲಿ ಕಲಬುರಗಿ, ಯಾದಗಿರಿ, ಬೀದರ್ ಮುಂತಾದ ಜಿಲ್ಲೆಗಳಲ್ಲಿ ಬಹುತೇಕರಿಗೆ ಕನ್ನಡ ಮಾತನಾಡಲು ಬರುವುದಿಲ್ಲ. ಕರ್ನಾಟಕದಲ್ಲಿ ಆಡು ಭಾಷೆ ಹಾಗೂ ಆಡಳಿತ ಭಾಷೆ ಕನ್ನಡದಲ್ಲಿರುವುದರಿಂದ ಕನ್ನಡ ಕಲಿಯುವುದು ಅತ್ಯವಶ್ಯಕವಾಗಿದೆ ಎಂದು ಅವರು ಉಲ್ಲೇಖಿಸಿದರು.

ಕನ್ನಡ ಓದು, ಬರಹವನ್ನು ಕಲಿತರೆ ಕನ್ನಡದಲ್ಲಿ ವ್ಯವಹರಿಸಲು ಸುಲಭವಾಗುತ್ತದೆ. ಇದರಿಂದ ಬಹುಸಂಖ್ಯಾತರು ಹಾಗೂ ಅಲ್ಪಸಂಖ್ಯಾತರ ನಡುವಿನ ಭೇದ ಹೋಗಲಾಡಿಸಿ, ಕನ್ನಡ ಭಾಷೆಯನ್ನು ಬಲಪಡಿಸದಂತಾಗುತ್ತದೆ ಎಂದ ಅವರು, ನಾನು ಸಹ ಈಗಲೂ ಕನ್ನಡ ಕಲಿಕೆ ಮಾಡುತ್ತಿದ್ದು, ಈ ಅಭಿಯಾನದಲ್ಲಿ ವಿದ್ಯಾರ್ಥಿ ಆಗಿಯೂ ಪಾಲ್ಗೊಳ್ಳಲಿದ್ದೇನೆ ಎಂದು ಹೇಳಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹ್ಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್, ವಾರ್ತಾಭಾರತಿ ಪತ್ರಿಕೆಯ ಪ್ರಧಾನ ಸಂಪಾದಕರೂ ಆದ ಆಯೋಗದ ಸದಸ್ಯ ಅಬ್ದುಸ್ಸಲಾಮ್ ಪುತ್ತಿಗೆ, ಕಾರ್ಯದರ್ಶಿ ಡಾ.ಮಾಜುದ್ದೀನ್ ಖಾನ್, ಮೌಲಾನಾ ಸೈಯದ್ ಶಬ್ಬೀರ್ ಅಹ್ಮದ್ ನದ್ವಿ, ಮುಫ್ತಿ ಶಂಸುದ್ದೀನ್ ಬಜ್ಲಿ, ನಿವೃತ್ತ ಡಿಸಿಪಿ ಜಿ.ಎ.ಬಾವಾ ಸೇರಿದಂತೆ ಪ್ರಮುಖರಿದ್ದರು.











share
ವಾರ್ತಾಭಾರತಿ
ವಾರ್ತಾಭಾರತಿ
Next Story
X