Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ ಝೀರೊ ಕರೆಂಟ್ ಝೀರೋ ಬಿಲ್;...

ರಾಜ್ಯದಲ್ಲಿ ಝೀರೊ ಕರೆಂಟ್ ಝೀರೋ ಬಿಲ್; ನವೆಂಬರ್ ಗೆ ಕತ್ತಲೆಗೆ ಕರ್ನಾಟಕ : ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ8 Sept 2023 3:34 PM IST
share
ರಾಜ್ಯದಲ್ಲಿ ಝೀರೊ ಕರೆಂಟ್ ಝೀರೋ ಬಿಲ್; ನವೆಂಬರ್ ಗೆ ಕತ್ತಲೆಗೆ ಕರ್ನಾಟಕ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರೆಂಟಿ ಗಳ ಹೆಸರಲ್ಲಿ ದೋಖಾ, ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ ಎಂದು ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ವೈಫಲ್ಯಗಳ ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಸರ್ವೋಚ್ಚ ನಾಯಕ ಯಡಿಯೂರಪ್ಪ ಅವರ ನೇತರತ್ವದಲ್ಲಿ ಸರ್ಕಾರದ ವಿರುದ್ದ ರಣಕಹಳೆ ಊದಿದ್ದೇವೆ.‌ ಇದನ್ನು ಮುಂದಿನ ಒಂದುವರ್ಷ ರಾಜ್ಯದ ಎಲ್ಲ ಮನೆಗಳಿಗೆ ತಲುಪಿಸಿ ಮತ್ತೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಹೋರಾಟ ಆರಂಭಿಸಿದ್ದೇವೆ ಎಂದರು.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನವರು, ಗ್ಯಾರೆಂಟಿಗಳ ಹೆಸರಿನಲ್ಲಿ ಸಹಿ ಮಾಡಿ ಕೊಟ್ಟರು, ಅದರೆ, ಈಗ ಯಾವುದೂ ಸಮರ್ಪಕ ಜಾರಿಮಾಡಿಲ್ಲ. ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಇವರು ಕೊಡುತ್ತಿರುವ ಐದು ಕೆಜಿ ಅಕ್ಕಿ ನರೇಂದ್ರ ಮೋದಿಯವರು ಕೊಡುತ್ತಿದ್ದಾರೆ. ಅಕ್ಕಿ ಬದಲು ಹಣ ಕೊಡುತ್ತೇವೆ ಅಂತ ಹೇಳಿ, ಗ್ರಾಮೀಣ ಮಹಿಳೆಯ ಅರ್ಧ ದಿನದ ಕೂಲಿಯಷ್ಟು ಹಣ ಕೊಡುತ್ತಿಲ್ಲ. ಅನ್ನ ಭಾಗ್ಯದಲ್ಲಿ ದ್ರೋಹ ಮಾಡಿದ್ದಾರೆ‌ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ 200 ಯುನಿಟ್ ಫ್ರೀ ಕರೆಂಟ್ ಕೊಡುವುದಾಗಿ ಹೇಳಿ ಈಗ ರಾಜ್ಯದಲ್ಲಿ ಕರೆಂಟ್ ಸಿಗದ ಪರಿಸ್ಥಿತಿ ನಿರ್ಮಾಣ ಆಗಿದೆ. ಝೀರೋ ಕರೆಂಟ್ ಝೀರೋ ಬಿಲ್ ಯೋಜನೆ ಜಾರಿಗೆ ಬರುತ್ತದೆ. ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ. ನವೆಂಬರ್ ನಿಂದ ರಾಜ್ಯದಲ್ಲಿ ಕತ್ತಲೆ ಆವರಿಸುತ್ತದೆ ಎಂದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೂರು ತಿಂಗಳಲ್ಲಿ ಭ್ರಷ್ಟಾಚಾರ ಜೋರಾಗಿದೆ. ಅಧಿಕಾರಿಗಳ ಹುದ್ದೆ ಹರಾಜು ಆಗುತ್ತಿವೆ. ವಿಧಾನಸೌಧ, ಕುಮಾರಕೃಪಾದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಅಂತ ಕಾಂಗ್ರೆಸ್ ನಾಯಕರೇ ಹೇಳುತ್ತಿದ್ದಾರೆ ಎಂದರು.

ಬಿಜೆಪಿ ಕಾರ್ಯಕರ್ತರನ್ನು ಸಣ್ಣ ಪುಟ್ಟ ವಿಷಯಗಳಿಗೆ ಬಂಧನ ಮಾಡುತ್ತಿದ್ದಾರೆ. ಹಾಸನದ ಕಾರ್ಯಕರ್ತರನ್ನು ಬೆಂಗಳೂರಿಗೆ ತಂದು ವಿಚಾರಣೆ ನಡೆಸುತ್ತಿದ್ದಾರೆ‌. ಪೊಲಿಸ್ ಅಧಿಕಾರಿಗಳು ಕಾನೂನು ಪ್ರಕಾರ ಕೆಲಸ ಮಾಡಬೇಕು. ಮೂರು ತಿಂಗಳಲ್ಲಿ 172 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂತ್ರಿಗಳು ರೈತರು ಐದು ಲಕ್ಷ ಪರಿಹಾರಕ್ಕಾಗಿ ಸಾಯುತ್ತಾರೆ ಎಂದು ಹೇಳಿದ್ದಾರೆ. ಯಾರಾದರೂ ರೈತರು ಹಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರಾ ? ಯಡಿಯೂರಪ್ಪ ಅವರ ಕಾಲದಲ್ಲಿ ರೈತರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಪ್ರಧಾನಮಂತ್ರಿ ‌ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ ರೈತರಿಗೆ ನಾಲ್ಕು ಸಾವಿರ ರೂ ಕೊಡುವುದನ್ನು ನಿಲ್ಲಿಸಿದ್ದಾರೆ. ನಾನು ಜಾರಿಗೆ ತಂದಿದ್ದ ರೈತ ವಿದ್ಯಾನಿಧಿ ಯೋಜನೆ ರದ್ದುಪಡಿಸಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯ ಬಿಜೆಪಿಯವರು ನೀಚರು ಅಂತ ಹೇಳುತ್ತಾರೆ. ನೀವು ಒಂದು ಅಗುಳು ಅಕ್ಕಿಯನ್ನು ನೀಡಿಲ್ಲ. ಜನರಿಗೆ ಅಕ್ಕಿ ಕೊಡುತ್ತಿರುವ ಮೋದಿಯವರು ನೀಚರಾ? ಒಂದು ಕಾಳು ಅಕ್ಕಿ ಕೊಡದ ನಿವು ನೀಚರಾ ಅಂತ ರಾಜ್ಯದ ಜನರು ಲೋಕಸಭೆ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.‌ಯಡಿಯೂರಪ್ಪ, ಡಿ.ವಿ. ಸದಾನಂದಗೌಡ , ಮಾಜಿ ಸಚಿವರಾದ ಆರ್ ಅಶೋಕ್, ಗೋಪಾಲಯ್ಯ, ಮುನಿರತ್ನ, ಬೈರತಿ ಬಸವರಾಜ, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಮಾಜಿ ಸಚಿವರು ಶಾಸಕರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X