Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿದ್ಯಾರ್ಥಿ ದಿಗಂತ್ ನಾಪತ್ತೆ...

ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ಮತೀಯ ಬಣ್ಣ ಬಳಿಯಲು ಯತ್ನಿಸಿದ ಕ್ರಮವನ್ನು ವಿರೋಧಿಸಿ ಪ್ರತಿಭಟನೆ

ಉದ್ರೇಕಕಾರಿ ಭಾಷಣ ಬಿಗಿದ ಬಿಜೆಪಿ ಶಾಸಕರ ಸಹಿತ ಸಂಘಪರಿವಾರದ ಮುಖಂಡರ ಮೇಲೆ ಸುಮೋಟೋ ಪ್ರಕರಣ ದಾಖಲಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ12 March 2025 2:25 PM IST
share
ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ಮತೀಯ ಬಣ್ಣ ಬಳಿಯಲು ಯತ್ನಿಸಿದ ಕ್ರಮವನ್ನು ವಿರೋಧಿಸಿ ಪ್ರತಿಭಟನೆ

ಮಂಗಳೂರು: ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ಮತೀಯ ಬಣ್ಣ ಬಳಿದು ಅಶಾಂತಿ ಉಂಟುಮಾಡಲು ಯತ್ನಿಸಿದ ಕೋಮುವಾದಿಗಳ ಕ್ರಮವನ್ನು ವಿರೋಧಿಸಿ ಡಿವೈಎಫ್ಐ, ಎಸ್ ಎಫ್ಐ,ಜನವಾದಿ ಮಹಿಳಾ ಸಂಘಟನೆ ನೇತೃತ್ವದಲ್ಲಿ ಬುಧವಾರ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.

ದಿಗಂತ್ ನಾಪತ್ತೆ ವಿಚಾರದಲ್ಲಿ ಉದ್ರೇಕಕಾರಿ ಭಾಷಣ ಬಿಗಿದ ಬಿಜೆಪಿ ಶಾಸಕರ ಸಹಿತ ಸಂಘಪರಿವಾರದ ಮುಖಂಡರ ಮೇಲೆ ಸುಮೋಟೋ ಪ್ರಕರಣದಡಿ ಕಾನೂನು ಕ್ರಮಕ್ಕೆ ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿವೈಎಫ್ ಐ ಜಿಲ್ಲಾ ಕಾರ್ಯದರ್ಶಿ ಬಿ.ಕೆ.ಇಮ್ತಿಯಾಝ್ ಅವರು, ಸಂಘ ಪರಿವಾರದ ಸಂಘಟನೆಗಳು ನಿರಂತರ ಕೋಮು ಪ್ರಚೋದನಕಾರಿ ಭಾಷಣಗಳನ್ನು ಮಾಡುತ್ತಾ ಜಿಲ್ಲೆಯಲ್ಲಿ ಮತೀಯ ಸಂಘರ್ಷಕ್ಕೆ ಕುಮ್ಮಕ್ಕು ನೀಡುತ್ತಿದ್ದರೂ ಅವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲು ವಿಫಲರಾಗಿರುವುದರಿಂದ ಮತ್ತೆ ಮತ್ತೆ ಕೋಮು ಸಂಘರ್ಷ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಆಪಾದಿಸಿದರು.

ಸಾಮಾಜಿಕ ಹೋರಾಟಗಾರರ ಮೇಲೆ ಕೇಸು ದಾಖಲಿಸುವ ಪೊಲೀಸರಿಗೆ ಸಂಘ ಪರಿವಾರದವರ ಮೇಲೆ ಕೇಸು ದಾಖಲಿಸುವ ಧೈರ್ಯ ಯಾಕಿಲ್ಲ ಎಂದು ಪ್ರಶ್ನಿಸಿದರು.

ಚಕ್ರವರ್ತಿ ಸೂಲಿಬೆಲೆಗೆ ಜನಸಂಖ್ಯೆಯ ಅನುಪಾತದ ಅರಿವಿಲ್ಲ; ಸಮಾಜ ಒಡೆಯಲು ಸುಳ್ಳು ಬೊಗಳೆ ಬಿಡುತ್ತಿದ್ದಾರೆ. ಘರ್ ವಾಪಸಿ ಬಿಜೆಪಿ ಸಂಘ ಪರಿವಾರದ ಉನ್ನತ ನಾಯಕರ ಕುಟುಂಬಗಳಿಂದ ಮೊದಲು ಮಾಡಲಿ ಎಂದು ವಾಗ್ದಾಳಿ ನಡೆಸಿದರು.

ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, ಸಂಘಪರಿವಾರ ಹಾಗೂ ಬಿಜೆಪಿ ಶಾಸಕರು ವಿದ್ಯಾರ್ಥಿ ದಿಗಂತ್ ಪ್ರಕರಣದಲ್ಲಿ ಬೆತ್ತಲಾಗಿದ್ದಾರೆ. ಇವರು ಪ್ರತೀ ಬಾರಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಪ್ರಯತ್ನದಲ್ಲಿ ಮತೀಯ ಸಂಘರ್ಷಗಳಿಗೆ ಪ್ರಚೋದನೆ ನೀಡುತ್ತಿದ್ದಾರೆ. ಉತ್ತರ ಕನ್ನಡದ ಪರೇಶ್ ಮೇಸ್ತ, ತೀರ್ಥಹಳ್ಳಿಯ ನಂದಿತಾ, ಕೊಣಾಜೆಯ ಕಾರ್ತಿಕ್ ರಾಜ್ ಈಗ ದಿಗಂತ್ ಪ್ರಕರಣಗಳೆಲ್ಲವನ್ನು ಗಮನಿಸಿದರೆ ಇವರ ನೈಜ ಉದ್ದೇಶ ಬಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದ್ವೇಷ ಭಾಷಣ ನಡೆಸುವವರ ಮೇಲೆ ಕ್ರಮಕೈಗೊಳ್ಳಲಿದೆ ಎಂದು ಭರವಸೆ ವ್ಯಕ್ತಪಡಿಸಿದರೂ ಜಿಲ್ಲೆಯಲ್ಲಿ ಸಂಘಪರಿವಾದ ಮುಖಂಡರ ಮೇಲೆ ಒಂದೇ ಒಂದು ಪ್ರಕರಣ ದಾಖಲಿಸಲು ಹಿಂಜರಿಯುತ್ತಿರುವ ನಡೆ ಅತ್ಯಂತ ಖಂಡನೀಯ. ಪೊಲೀಸ್ ಇಲಾಖೆ ಕೂಡಲೇ ಶಾಸಕ‌ ಭರತ್ ಶೆಟ್ಟಿ, ಹರೀಶ್ ಪೂಂಜಾ ಮತ್ತು ಸಂಘಪರಿವಾರದ ನಾಯಕರ ಮೇಲೆ ಸುಮೋಟೋ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಜೆಎಮ್ಎಸ್ ಜಿಲ್ಲಾಧ್ಯಕ್ಷೆ ಜಯಂತಿ ಬಿ ಶೆಟ್ಟಿ, ಕಾರ್ಮಿಕ ಮುಖಂಡರಾದ ಸುನೀಲ್ ಕುಮಾರ್ ಬಜಾಲ್ ಮಾತನಾಡಿದರು.

ಪ್ರತಿಭಟನೆಯಲ್ಲಿ ಡಿವೈಎಫ್ಐ ಜಿಲ್ಲಾ ಮುಖಂಡರಾದ ರಿಜ್ವಾನ್ ಹರೇಕಳ, ರಝಾಕ್ ಮುಡಿಪು, ನವೀನ್ ಕೊಂಚಾಡಿ, ತಯ್ಯೂಬ್ ಬೆಂಗರೆ, ಜಗದೀಶ್ ಬಜಾಲ್, ಜೆಎಮ್ಎಸ್ ನ ಭಾರತೀ ಬೋಳಾರ, ಪ್ರಮೀಳಾ, ಅಸುಂತ ಡಿಸೋಜ, ಯೋಗಿತಾ, ಅಮ್ಮೆಮ್ಮಾರ್ ಪಂಚಾಯತ್ ಮಾಜಿ ಸದಸ್ಯ ಹನೀಫ್, ಬಶೀರ್ ತಂಡೇಲ್, ವಿ.ಎಚ್ ಕರೀಂ, ಹೈದರ್ ಅಮ್ಮೆಮ್ಮಾರ್,‌‌ ಅಶ್ರಫ್ ಅಸ್ರ, ಬೀದಿಬದಿ ವ್ಯಾಪಾರ ಸಂಘಟನೆಯ ಮುಝಾಫರ್, ನೌಶಾದ್ ಕಣ್ಣೂರು, ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ, ಶೇಖರ್ ಕುಂದರ್, ಆಸೀಫ್ ಬಂದರು, ನೌಶಾದ್ ಬೆಂಗರೆ, ಯೋಗೀಶ್ ಜಪ್ಪಿನಮೊಗರು, ಅನ್ಸಾರ್ ಫೈಸಲ್ ನಗರ, ರಫೀಕ್ ಪಿ.ಜಿ, ಮುಹಾಝ್, ಮುಂತಾದವರು ಉಪಸ್ಥಿತರಿದ್ದರು.

ಜಿಲ್ಲಾ ಕೋಶಾಧಿಕಾರಿ ಮನೋಜ್ ವಾಮಂಜೂರು ಸ್ವಾಗತಿಸಿ ಎಸ್ಎಫ್ಐ ಜಿಲ್ಲಾಧ್ಯಕ್ಷರಾದ ವಿನುಶ ರಮಣ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X