Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಕಾಲಂ 9
  5. ಪ್ರಚಾರಕ್ ಪ್ರಧಾನಿಗಳೇ, ಸ್ವಾತಂತ್ರ್ಯ...

ಪ್ರಚಾರಕ್ ಪ್ರಧಾನಿಗಳೇ, ಸ್ವಾತಂತ್ರ್ಯ ಹೋರಾಟದಲ್ಲಿ ಆರೆಸ್ಸೆಸ್ ಮತ್ತು ಸಾವರ್ಕರ್ ಕೊಡುಗೆಯೇನು?

ವಾರ್ತಾಭಾರತಿವಾರ್ತಾಭಾರತಿ21 Aug 2025 9:34 AM IST
share
ಪ್ರಚಾರಕ್ ಪ್ರಧಾನಿಗಳೇ, ಸ್ವಾತಂತ್ರ್ಯ ಹೋರಾಟದಲ್ಲಿ ಆರೆಸ್ಸೆಸ್ ಮತ್ತು ಸಾವರ್ಕರ್ ಕೊಡುಗೆಯೇನು?

ಭಾಗ- 2

ಉಪ್ಪಿನ ಸತ್ಯಾಗ್ರಹ, ಕರ ನಿರಾಕರಣ ಚಳವಳಿ, ಇಂತಹ ಯಾವುದೇ ಹೋರಾಟಗಳಲ್ಲಿ ಆರೆಸ್ಸೆಸ್ ಕಾರ್ಯಕರ್ತರು ವ್ಯಕ್ತಿಗತ ನೆಲೆಯಲ್ಲಿ ಭಾಗವಹಿಸಬಹುದೇ ವಿನಾ ಸಂಘದ ಸದಸ್ಯರಾಗಿ ಭಾಗವಹಿಸಕೂಡದೆಂಬ ಹೆಡ್ಗೆವಾರ್ ನಿರ್ದೇಶನವಿತ್ತಿದ್ದರು.

ಹೀಗಾಗಿ ಆರೆಸ್ಸೆಸ್ ಎಂದೂ ಸಕಲ ಧರ್ಮೀಯರು ಸಮಾನವಾಗಿ ಭಾವೈಕ್ಯದಿಂದ ಬದುಕುವ ಸ್ವತಂತ್ರ ಭಾರತದ ಕನಸನ್ನೇ ಕಂಡಿರಲಿಲ್ಲ. ಅದರ ರಾಷ್ಟ್ರದ ಕನಸು ಸಾವರ್ಕರ್ ಪ್ರಣೀತ ‘ಸಾಂಸ್ಕೃತಿಕ ರಾಷ್ಟ್ರೀಯತೆ’. ಅಂದರೆ ಒಂದೇ ಧರ್ಮ, ಒಂದೇ ಸಂಸ್ಕೃತಿ ಮತ್ತು ಒಂದೇ ಭಾಷೆ ಇರುವವರು ಮಾತ್ರ ಒಟ್ಟುಗೂಡಿ ಒಂದು ರಾಷ್ಟ್ರವಾಗಲು ಸಾಧ್ಯ. ಅಂತಹ ರಾಷ್ಟ್ರದ ಬುನಾದಿ ಏಕ ಸಂಸ್ಕೃತಿಯೇ ಹೊರತು ಒಂದೇ ಭೂ ಭಾಗದಲ್ಲಿ ಹುಟ್ಟಿದ ಸಹೋದರತ್ವವಲ್ಲ ಹಾಗೂ ಭಾರತ ಅಂತಹ ಸಾಂಸ್ಕೃತಿಕ ರಾಷ್ಟ್ರವಾಗಬೇಕೆಂದರೆ ಅನ್ಯಧರ್ಮೀಯ ‘ಕಲ್ಮಶ’ವನ್ನು ಭಾರತೀಯ ಸ್ರವಂತಿಯಿಂದ ಹೊರಗೆ ಹಾಕಬೇಕು. ಹಾಗೆ ಆಗಬೇಕೆಂದರೆ ಹಿಂದೂಗಳು ಬ್ರಿಟಿಷರಿಗೆ ಸಹಕರಿಸಿ ಸೈನಿಕ ತರಬೇತಿ ಪಡೆದುಕೊಳ್ಳಬೇಕು. ಅವರ ಭೌತಿಕ ಸಹಾಯವಿಲ್ಲದೆ ಈ ಕಾರ್ಯ ಸಾಧ್ಯವಿಲ್ಲ. ಹೀಗಾಗಿ ಬ್ರಿಟಿಷರ ವಿರುದ್ಧ ಹೋರಾಡಲೇ ಬಾರದೆಂಬುದು ಆರೆಸ್ಸೆಸ್‌ನ ರಾಜಕೀಯ ತೀರ್ಮಾನವಾಗಿತ್ತು.

ಆದ್ದರಿಂದಲೇ ಆರೆಸ್ಸೆಸ್ ಎಂದಿಗೂ ಬ್ರಿಟಿಷ್ ವಸಾಹತುಶಾಹಿ ವಿರೋಧಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಯೇ ಇಲ್ಲ. ಆದರೂ ಇದೀಗ ತಾವೇ ನಿಜವಾದ ಸ್ವಾತಂತ್ರ್ಯ ಹೋರಾಟಗಾರರೆಂದು ಸುಳ್ಳು ಇತಿಹಾಸ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಅದರ ಭಾಗವಾಗಿ:

ಆರೆಸ್ಸೆಸ್ ಸಂಸ್ಥಾಪಕ ಹೆಡ್ಗೆವಾರ್ 1920ರಲ್ಲಿ ಮತ್ತು 1930ರಲ್ಲಿ ಹೋರಾಟದಲ್ಲಿ ಭಾಗವಹಿಸಿ ಸೆರೆವಾಸ ಅನುಭವಿಸಿರಲಿಲ್ಲವೇ? ನಾಗಪುರದಲ್ಲಿ ಕಾಂಗ್ರೆಸ್ ಸಮಾವೇಶ ಸಂಘಟಿಸಿರಲಿಲ್ಲವೇ? ಇವೆಲ್ಲವೂ ಸ್ವಾತಂತ್ರ್ಯ ಹೋರಾಟವಲ್ಲವೇ? ಎಂಬ ಕುತಂತ್ರಿ ಪ್ರಶ್ನೆಗಳನ್ನು ಸಂಘಿಗಳು ಕೇಳುತ್ತಾರೆ.

ಆದರೆ ವಾಸ್ತವ ಬೇರೆಯೇ ಇದೆ.

ಭಾರತ ನ್ಯಾಷನಲ್ ಕಾಂಗ್ರೆಸ್ ಸ್ಥಾಪನೆಯಾದದ್ದು 1885ರಲ್ಲಿ. ಭಾರತದ ಸ್ವಾತಂತ್ರ್ಯ ಹೋರಾಟದ ಇತರ ಧಾರೆಗಳಾದ ಆಝಾದ್ - ಭಗತ್ ಸಿಂಗ್‌ರ ಹಿಂದೂಸ್ಥಾನ್ ಸೋಷಿಯಲಿಸ್ಟ್ ರಿಪಬ್ಲಿಕ್, ಭಾರತ ಕಮ್ಯುನಿಸ್ಟ್ ಪಕ್ಷ ಇತ್ಯಾದಿಗಳು ಸ್ಥಾಪನೆಯಾದದ್ದು ಆ ನಂತರದಲ್ಲಿ. ಆರೆಸ್ಸೆಸ್ ಸ್ಥಾಪನೆಯಾದದ್ದು 1925ರಲ್ಲಿ. ಹೀಗಾಗಿ ಬಹುಪಾಲು ಎಲ್ಲಾ ಧಾರೆಗಳ ಸ್ವಾತಂತ್ರ್ಯ ಹೋರಾಟಗಾರರೂ ತಮ್ಮ ಸಂಘಟನೆಗಳು ಹುಟ್ಟಿಕೊಳ್ಳುವ ಮುನ್ನ ಪ್ರಾರಂಭದ ದಿನಗಳಲ್ಲಿ ಕಾಂಗ್ರೆಸ್‌ನ ಭಾಗವಾಗಿದ್ದದ್ದು ಸಹಜ.

ಹಾಗೆಯೇ ಹೆಡ್ಗೆವಾರ್ ಅವರು 1925ರಲ್ಲಿ ಆರೆಸ್ಸೆಸ್ ಸ್ಥಾಪಿಸುವ ಮುನ್ನ ಬಾಲಗಂಗಾಧರ ತಿಲಕರ ಮಾರ್ಗದರ್ಶನದಲ್ಲಿ ನಾಗಪುರದ ಕಾಂಗ್ರೆಸ್ ಅಧಿವೇಶನವನ್ನು ಸಂಘಟಿಸಿದರು. 1920ರಲ್ಲಿ ಅಸಹಕಾರ ಚಳವಳಿಯ ಭಾಗವಾಗಿ ಒಂದೂವರೆ ವರ್ಷ ಸೆರೆವಾಸವನ್ನು ಅನುಭವಿಸಿದ್ದು ನಿಜ.

ಆದರೆ ಅಸಹಕಾರ ಚಳವಳಿಯಲ್ಲಿ ಗಾಂಧಿಯವರು ಹಿಂದೂ-ಮುಸ್ಲಿಮ್ ಏಕತೆಯನ್ನು ಚಳವಳಿಯ ಮುಖ್ಯ ಭೂಮಿಕೆಯಾಗಿಸಿದ್ದು ಹೆಡ್ಗೆವಾರ್‌ಗೆ ಅಪಾರ ಅಸಮಾಧಾನ ಉಂಟುಮಾಡಿತು ಹಾಗೂ ಸೆರೆವಾಸದಿಂದ ಹೊರಬಂದ ಕೂಡಲೇ ಸ್ವಾತಂತ್ರ್ಯ ಹೋರಾಟಕ್ಕೆ ಪರ್ಯಾಯವಾದ ಹಿಂದೂ ರಾಷ್ಟ್ರ ಚಳವಳಿ ಕಟ್ಟಲು ರತ್ನಗಿರಿಯಲ್ಲಿದ್ದ ಸಾವರ್ಕರ್ ಅವರನ್ನು ಭೇಟಿ ಮಾಡಿ ದೀಕ್ಷೆ ಪಡೆದರು. ಅದರ ಮುಂದುವರಿಕೆಯಾಗಿಯೇ 1925ರಲ್ಲಿ ಆರೆಸ್ಸೆಸ್ ಕಟ್ಟಿದರು.

ಅವರು ಕಟ್ಟಿದ ಆರೆಸ್ಸೆಸ್‌ನ ಘೋಷಿತ ಉದ್ದೇಶ ಬ್ರಿಟಿಷರನ್ನು ಭಾರತ ಬಿಟ್ಟು ಓಡಿಸುವ ಸ್ವಾತಂತ್ರ್ಯ ಹೋರಾಟವಾಗಿರಲೇ ಇಲ್ಲ.

ಹೆಡ್ಗೇವಾರರ ಜೀವನ ಚರಿತ್ರೆಯನ್ನು ಬರೆದಿರುವ ಆರೆಸ್ಸೆಸ್ ನಾಯಕ ಹೂ.ವೆ. ಶೇಷಾದ್ರಿಯವರು ತಮ್ಮ ‘Dr. Hedgewar-The Epoch Maker’ ಪುಸ್ತಕದಲ್ಲಿ ದಾಖಲಿಸಿರುವಂತೆ:

‘‘After establishing Sangh, Doctor Saheb in his speeches used to talk only of Hindu organization. Direct comment on Government used to be almost nil.’’

(ಸಂಘವನ್ನು ಸ್ಥಾಪಿಸಿದ ನಂತರ ಅವರು ಕೇವಲ ಹಿಂದೂ ಸಂಘಟನೆಯ ಬಗ್ಗೆ ಮಾತ್ರ ಮಾತಾಡುತ್ತಿದ್ದರು. ಬ್ರಿಟಿಷ್ ಸರಕಾರದ ಬಗ್ಗೆ ಒಂದಿನಿತೂ ಪ್ರಸ್ತಾಪಿಸುತ್ತಿರಲಿಲ್ಲ.)

ಅಷ್ಟು ಮಾತ್ರವಲ್ಲ, ಸ್ವಾತಂತ್ರ್ಯ ಹೋರಾಟವನ್ನು ಬ್ರಿಟಿಷ್ ವಿರೋಧಿ ಹೋರಾಟವಾಗಿಸಿರುವ ಬಗ್ಗೆ ಖೇದ ವ್ಯಕ್ತಪಡಿಸಿದ್ದರು.

1929ರಲ್ಲಿ ಕಾಂಗ್ರೆಸ್‌ನ ಲಾಹೋರ್ ಅಧಿವೇಶನ ‘ಸಂಪೂರ್ಣ ಸ್ವಾತಂತ್ರ್ಯ’ದ ಠರಾವನ್ನು ಅನುಮೋದಿಸಿತು. ಅದರ ಭಾಗವಾಗಿ 1930ರ ಜನವರಿ 26ರಂದು ದೇಶದೆಲ್ಲೆಡೆ ಕಾಂಗ್ರೆಸ್ ಕರೆಯ ಭಾಗವಾಗಿ ತ್ರಿವರ್ಣ ಧ್ವಜ ಹಾರಿಸಲು ಕರೆ ನೀಡಲಾಗಿತ್ತು. ದಂಡಿ ಸತ್ಯಾಗ್ರಹ ನಡೆದಿತ್ತು.

ಆಗ, ಹೆಡ್ಗೆವಾರ್, ಸಿ.ಪಿ. ಭಿಶ್ಕರ್ ಹಾಗೂ ಹೂ.ವೆ. ಶೇಷಾದ್ರಿಯವರು ದಾಖಲಿಸಿರುವಂತೆ:

‘‘ಯಾವ ಕಾರಣಕ್ಕೂ ಆರೆಸ್ಸೆಸ್ ಈ ಹೋರಾಟದಲ್ಲಿ ಭಾಗವಹಿಸಬಾರದು, ಜನವರಿ 26ರಂದು ತ್ರಿವರ್ಣ ಧ್ವಜದ ಬದಲು ಭಗವಾಧ್ವಜವನ್ನು ಹಾರಿಸಬೇಕು, ಅತಿ ಆಸಕ್ತಿ ಇದ್ದವರು ವೈಯಕ್ತಿಕವಾಗಿ ಬೇಕಿದ್ದರೆ ಚಳವಳಿಯಲ್ಲಿ ಭಾಗವಹಿಸಬಹುದು’’ ಎಂದು ಸುತ್ತೋಲೆ ಹೊರಡಿಸಿದರು.

ಕಾರ್ಯಕರ್ತರ ಅಪಾರ ಒತ್ತಡ ಹಾಗೂ ದೇಶದ ಭಾವನೆಯನ್ನು ಗಮನಿಸಿ ಹೆಡ್ಗೆವಾರರು ತಮ್ಮ ಸರಸಂಘಚಾಲಕ ಹುದ್ದೆಗೆ ತಾತ್ಕಾಲಿಕವಾಗಿ ರಾಜೀನಾಮೆ ನೀಡಿ, ಅದರ ಜವಾಬ್ದಾರಿಯನ್ನು ಪರಾಂಜಪೆ ಎನ್ನುವವರಿಗೆ ವಹಿಸಿ ತಾವು ವೈಯಕ್ತಿಕ ನೆಲೆಯಲ್ಲಿ ಜಂಗಲ್ ಸತ್ಯಾಗ್ರಹದಲ್ಲಿ ಭಾಗವಹಿಸಿ ಜೈಲು ಶಿಕ್ಷೆ ಅನುಭವಿಸಿದರು. ದಂಡಿ ಸತ್ಯಾಗ್ರಹದಲ್ಲಲ್ಲ. ಅವರ ಜೀವನ ಚರಿತ್ರೆಕಾರರ ಪ್ರಕಾರ ಅವರು ಜೈಲಿಗೆ ಹೋಗಿದ್ದು ದೇಶಾದ್ಯಂತ ಜೈಲಿಗೆ ಬರುತ್ತಿದ್ದ ಯುವಕರ ಸಂಪರ್ಕ ಪಡೆದುಕೊಂಡು ಹಿಂದೂ ರಾಷ್ಟ್ರದ ಉದ್ದೇಶಕ್ಕೆ ಸಂಘಟಿಸುವುದಕ್ಕಾಗಿತ್ತು.

ಆದ್ದರಿಂದ ಆರೆಸ್ಸೆಸ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಬಾರದು ಎನ್ನುವುದು ಆರೆಸ್ಸೆಸ್‌ನ ಸಂಸ್ಥಾಪಕರ ಆದೇಶವೇ ಆಗಿತ್ತು.

1942ರಲ್ಲಿ ಕ್ವಿಟ್ ಇಂಡಿಯಾ ಚಳವಳಿ ನಡೆದಾಗಲಂತೂ ಆರೆಸ್ಸೆಸ್‌ನ ಹಿರಿಯ ಸೋದರ ಸಂಘಟನೆಯಾದ ಹಿಂದೂ ಮಹಾ ಸಭಾ ಮತ್ತು ಆರೆಸ್ಸೆಸ್‌ನ ಪಿತಾಮಹ ಸಾವರ್ಕರ್ ಸ್ವಾತಂತ್ರ್ಯ ಹೋರಾಟಕ್ಕೆ ದ್ರೋಹ ಬಗೆದು ಬ್ರಿಟಿಷ್ ಸರಕಾರದ ಜೊತೆ ಸೇರಿಕೊಂಡಿದ್ದರು. ಅದೂ ಮುಸ್ಲಿಮ್ ಲೀಗ್ ಜೊತೆಗೆ.

ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ತಮ್ಮ ಪ್ರಾಣವನ್ನೇ ಬಲಿ ನೀಡಿದ ಆಝಾದ್, ಭಗತ್ ಸಿಂಗ್‌ರಂಥ ಕ್ರಾಂತಿಕಾರಿಗಳ ಬಗ್ಗೆಯೂ ಆರೆಸ್ಸೆಸ್‌ಗೆ ಕೀಳು ಅಭಿಪ್ರಾಯವಿತ್ತು. ಆರೆಸ್ಸೆಸ್‌ನ ಎರಡನೇ ಸರಸಂಘ ಚಾಲಕ ಗೋಳ್ವಾಲ್ಕರ್ ಅವರು ‘ಆರ್ಗನೈಸರ್’ ಪತ್ರಿಕೆಗೆ ಬರೆದ ಲೇಖನದಲ್ಲಿ:

‘‘ಭಗತ್ ಸಿಂಗ್ ಇನ್ನಿತ್ಯಾದಿ ಕ್ರಾಂತಿಕಾರಿಗಳದ್ದು ತಪ್ಪು ಆದರ್ಶ. ಅವರಲ್ಲಿ ಲೋಪವಿದ್ದುದರಿಂದಲೇ ಅವರು ಯಶಸ್ವಿಯಾಗಲಿಲ್ಲ. ಅವರು ಭಾರತದ ಯುವಕರಿಗೆ ಮಾರ್ಗದರ್ಶಿಯಲ್ಲ’’ ಎಂದು ಹೇಳಿದ್ದರು.

ಹೀಗಾಗಿ ಆರೆಸ್ಸೆಸ್ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಎಂದೂ ಭಾಗವಹಿಸಿರಲಿಲ್ಲ ಎನ್ನುವುದು ಯಾರೋ ಆರೆಸ್ಸೆಸ್ ವಿರೋಧಿಗಳು ಹೇಳುತ್ತಿರುವ ಸುಳ್ಳುಗಳಲ್ಲ.

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಬಾರದೆಂಬುದು ಆರೆಸ್ಸೆಸ್‌ನ ನಾಯಕರ ಆದೇಶವೇ ಆಗಿತ್ತು.

ದೇಶ ವಿಭಜನೆಯ ನಂತರ ದೇಶಕ್ಕೆ ಕೊಳ್ಳಿ ಇಡುವ ಕೆಲಸ

ವಾಸ್ತವದಲ್ಲಿ ದೇಶ ವಿಭಜನೆಗೆ ಜಿನ್ನಾ ನೇರ ಕಾರ್ಯಾಚರಣೆಗೆ ಕರೆಕೊಟ್ಟು ಬಂಗಾಳ ಪ್ರಾಂತದಲ್ಲಿ ಹಿಂದೂಗಳು ಮುಸ್ಲಿಮರನ್ನು ಮತ್ತು ಮುಸ್ಲಿಮರು ಹಿಂದೂಗಳನ್ನು ಕಗ್ಗೊಲೆ ಮಾಡುತ್ತಿದ್ದಾಗ ಬಿಜೆಪಿಯ ಆದ್ಯ ಗುರು ಹಾಗೂ ಆಗ ಹಿಂದೂ ಮಹಾಸಭಾದ ನಾಯಕರಾಗಿದ್ದ ಶಾಮ ಪ್ರಸಾದ್ ಮುಖರ್ಜಿ ಜಿನ್ನಾರ ಮುಸ್ಲಿಮ್ ಲೀಗ್ ನೇತೃತ್ವದ ಮಂತ್ರಿಮಂಡಲದಲ್ಲಿ ಮಂತ್ರಿಯಾಗಿಯೇ ಮುಂದುವರಿದಿದ್ದರು.

ಅದೇ ರೀತಿ ಸಿಂಧ್ ಪ್ರಾಂತದಲ್ಲೂ ಮುಸ್ಲಿಮ್‌ಲೀಗ್ ಮತ್ತು ಹಿಂದೂ ಮಹಾಸಭಾಗಳ ಜಂಟಿ ಮಂತ್ರಿಮಂಡಲ ಹಿಂದೂ-ಮುಸ್ಲಿಮ್ ನರಮೇಧಕ್ಕೆ ಪ್ರತ್ಯಕ್ಷ ಕುಮ್ಮಕ್ಕು ಕೊಟ್ಟಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X