Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಕಾಲಂ 9
  5. ಪ್ರಚಾರಕ್ ಪ್ರಧಾನಿಗಳೇ, ಸ್ವಾತಂತ್ರ್ಯ...

ಪ್ರಚಾರಕ್ ಪ್ರಧಾನಿಗಳೇ, ಸ್ವಾತಂತ್ರ್ಯ ಹೋರಾಟದಲ್ಲಿ ಆರೆಸ್ಸೆಸ್ ಮತ್ತು ಸಾವರ್ಕರ್ ಕೊಡುಗೆಯೇನು?

ವಾರ್ತಾಭಾರತಿವಾರ್ತಾಭಾರತಿ22 Aug 2025 11:12 AM IST
share
ಪ್ರಚಾರಕ್ ಪ್ರಧಾನಿಗಳೇ, ಸ್ವಾತಂತ್ರ್ಯ ಹೋರಾಟದಲ್ಲಿ ಆರೆಸ್ಸೆಸ್ ಮತ್ತು ಸಾವರ್ಕರ್ ಕೊಡುಗೆಯೇನು?

ಭಾಗ- 3

ಆರೆಸ್ಸೆಸ್ ಮತ್ತು ಹಿಂದೂ ಮಹಾಸಭಾಗಳ ಈ ಜಂಟಿ ದೇಶವಿರೋಧಿ ಭಯೋತ್ಪಾದಕ ದ್ವೇಷ ರಾಜಕಾರಣದ ಉತ್ತುಂಗವೇ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ನಾಥೂರಾಮ್ ಗೋಡ್ಸೆ ಜನನ ಮತ್ತು ಗಾಂಧಿ ಹತ್ಯೆ. ಅದು ಗಾಂಧಿ ಹತ್ಯೆಗೆ ನಿಲ್ಲದೆ ಈವರೆಗೂ ಹತ್ತು ಹಲವು ಆಯಾಮ ಮತ್ತು ವಿಸ್ತಾರಗಳನ್ನು ಪಡೆದುಕೊಂಡು ಬೆಳೆಯುತ್ತಲೇ ಇದೆ.

ದೇಶ ವಿಭಜನೆಯ ಕಾಲದ ಪ್ರಕ್ಷುಬ್ಧ ಪರಿಸ್ಥಿತಿಯನ್ನು ಆರೆಸ್ಸೆಸ್ ಹೇಗೆ ದ್ವೇಷ ಭಯೋತ್ಪಾದನೆಗೆ ಬಳಸಿಕೊಂಡಿತು ಎಂಬುದನ್ನು ದಾಖಲಿಸಿದ್ದು ಯಾರೋ ಎಡಪಂಥೀಯ ಇತಿಹಾಸಕಾರರಲ್ಲ.

ಆಗ ಭಾರತದ ಪ್ರಥಮ ರಾಷ್ಟ್ರಪತಿಯಾಗಿದ್ದ ಬಾಬು ರಾಜೇಂದ್ರ ಪ್ರಸಾದ್ ಅವರು. ಬಾಬು ರಾಜೇಂದ್ರ ಪ್ರಸಾದ್ ಅವರು ಗೃಹಮಂತ್ರಿ ಸರ್ದಾರ್ ಪಟೇಲ್ ಅವರಿಗೆ ಬರೆದ ಈ ಪತ್ರವನ್ನು ಗಮನಿಸಿ...

‘‘ಆರೆಸ್ಸೆಸಿಗರು ದೇಶಾದ್ಯಂತ ಗಲಭೆ ಸೃಷ್ಟಿಸುವ ಯೋಜನೆಗಳನ್ನು ಮಾಡುತ್ತಿದ್ದಾರೆಂಬ ಮಾಹಿತಿ ನನಗೆ ಬಂದಿದೆ.

ಅವರಲ್ಲಿ ಹಲವರು ಮುಸ್ಲಿಮರಂತೆ ಕಾಣುದ ದಿರಿಸನ್ನು ಧರಿಸಿ ಹಿಂದೂಗಳ ಮೇಲೆ ದಾಳಿ ನಡೆಸಿ ಹಿಂದೂಗಳನ್ನು ಪ್ರಚೋದಿಸುತ್ತಿದ್ದಾರೆ. ಅದೇರೀತಿ ಅವರಲ್ಲಿ ಕೆಲವರು ಮುಸ್ಲಿಮರ ಮೇಲೆ ದಾಳಿ ಮಾಡಿ ಮುಸ್ಲಿಮರನ್ನು ಪ್ರಚೋದಿಸುತ್ತಿದ್ದಾರೆ.

ಹಿಂದೂ-ಮುಸ್ಲಿಮರ ನಡುವೆ ಈ ರೀತಿ ಯೋಜಿತ ಅಶಾಂತಿ ಉಂಟುಮಾಡುತ್ತಿರುವುದು ಮುಂದೆ ದೊಡ್ಡ ಕೋಲಾಹಲವನ್ನೇ ಸೃಷ್ಟಿಸಲಿದೆ.’’

- ಬಾಬು ರಾಜೇಂದ್ರ ಪ್ರಸಾದ್, ಮಾರ್ಚ್ 14, 1948

(Nehru-Patel: Agreement Within Difference?Select Documents & Correspondences 19331950, NBT, Delhi, p. 43.)

ಭಾರತೀಯ ಸಂವಿಧಾನ ಸ್ವೀಕರಿಸಲು ಅನರ್ಹ- ಆರೆಸ್ಸೆಸ್

1949ರ ನವಂಬರ್ 26ರಂದು ಸಂವಿಧಾನ ಬರಹ ಮುಗಿದು ನಾಡಿಗೆ ಅರ್ಪಣೆಯಾದ ಕೇವಲ ನಾಲ್ಕು ದಿನಗಳ ನಂತರ 1949ರ ನವೆಂಬರ್ 30ರಂದು ಆರೆಸ್ಸೆಸ್‌ನ ಮುಖಪತ್ರಿಕೆಯಾದ ‘ಆರ್ಗನೈಸರ್’ನಲ್ಲಿ ಸಂವಿಧಾನವನ್ನು ಹೀಗಳೆಯುತ್ತಾ ಹೀಗೆ ಬರೆದುಕೊಳ್ಳುತ್ತದೆೆ:

‘‘ಭಾರತದ ಸಂವಿಧಾನದ ಬಗ್ಗೆ ಅತ್ಯಂತ ಹೀನಾಯವಾದದ್ದು ಏನೆಂದರೆ ಅದರಲ್ಲಿ ಭಾರತೀಯವಾದದ್ದು ಏನೂ ಇಲ್ಲ. ವಾಸ್ತವವಾಗಿ ನಮ್ಮ ಮನುಸ್ಮತಿ ಅತ್ಯಂತ ಪ್ರಾಚೀನವಾಗಿದ್ದು ಜಗತ್ತಿನ ಜನರೆಲ್ಲಾ ಸ್ವಪ್ರೇರಿತರಾಗಿ ಅದರ ಬಗ್ಗೆ ಅಪಾರ ಆದರವನ್ನು ವ್ಯಕ್ತಪಡಿಸುತ್ತಾರೆ. ಆದರೆ ನಮ್ಮ ಸಂವಿಧಾನ ಪಂಡಿತರಿಗೆ ಅದು ಏನೂ ಅಲ್ಲ’’ ಎಂದು ಟೀಕಿಸುತ್ತದೆ.

‘‘ಭಾರತದ ಸಂವಿಧಾನದಲ್ಲಿ ಸನಾತನ ಭಾರತದಲ್ಲಿ ವಿಕಸನಗೊಂಡ ಸಂವಿಧಾನದ ಉಲ್ಲೇಖವೇ ಇಲ್ಲ. ಈಗಲೂ ಜಗತ್ತಿನಾದ್ಯಂತ ಮನುಸ್ಮತಿಯು ಅಪಾರವಾದ ಗೌರವವನ್ನೂ ಮತ್ತು ಎಲ್ಲರ ಸ್ವಪ್ರೇರಿತ ಮನ್ನಣೆಯನ್ನೂ ಪಡೆದುಕೊಳ್ಳುತ್ತದೆ. ಆದರೆ ನಮ್ಮ ಸಂವಿಧಾನ ಪಂಡಿತರಿಗೆ ಇದರ ಬಗ್ಗೆ ಅರಿವೇ ಇಲ್ಲ.’’

ಎಂದು ಸಮಾನತೆಯ ಸಂವಿಧಾನದ ಬದಲಿಗೆ ತಾರತಮ್ಯದ ಮನುಸ್ಮತಿಯನ್ನು ಎತ್ತಿಹಿಡಿಯುತ್ತದೆ.

ಗೋಳ್ವಾಲ್ಕರ್ ಅವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಅಂಬೇಡ್ಕರ್ ಅವರ ಜಾತಿ ವಿನಾಶ ಯೋಜನೆಯ ವಿರುದ್ಧ ಹೀಗೆ ಕಿಡಿ ಕಾರುತ್ತಾರೆ:

‘‘ಈ ಜಾತಿ ವಿನಾಶದ ಪ್ರತಿಪಾದನೆಗಳು ಭಾರತದ ರಾಜಕೀಯವನ್ನು ಕುಲಗೆಡಿಸುತ್ತಿದೆ... ಆದ್ದರಿಂದ ಕೆಲವರು ಭಾವಿಸುವಂತೆ ಆರೆಸ್ಸೆಸ್ ಭಾರತವನ್ನು ಕೇವಲ ಇನ್ನೂರು ವರ್ಷ ಹಿಂದಕ್ಕೆ ತೆಗೆದುಕೊಂಡು ಹೋಗಲು ಬಯಸುತ್ತದೆ ಎಂಬುದು ಸುಳ್ಳು. ವಾಸ್ತವವಾಗಿ ನಾವು ಭಾರತವನ್ನು ಇನ್ನಷ್ಟು ಹಿಂದಕ್ಕೆ, ಕನಿಷ್ಠ ಸಾವಿರ ವರ್ಷದ ಹಿಂದಿನ ಉಜ್ವಲ ಯುಗಕ್ಕೆ ಕೊಂಡೊಯ್ಯಲು ಬಯಸುತ್ತೇವೆ’’

(The Organiser, 26 January 1962)

ಭಾರತದ ಧ್ವಜ V/S ಭಗವಾಧ್ವಜ

1928ರ ಸುಮಾರಿಗೆ ಅರೆಸ್ಸೆಸ್ ಭಗವಾಧ್ವಜವನ್ನು ತನ್ನ ಲಾಂಚನವನ್ನಾಗಿ ಸ್ವೀಕರಿಸಿತು. ಕೇಸರಿ ಬಣ್ಣದ ಹಾಗೂ ತ್ರಿಕೋನಾಕೃತಿಯ ಭಗವಾಧ್ವಜವನ್ನೇ ಆರೆಸ್ಸೆಸ್ ಏಕೆ ತನ್ನ ಬಾವುಟವನ್ನಾಗಿ ಸ್ವೀಕರಿಸಿತು?

ಈ ಬಗ್ಗೆ ಹೆಡ್ಗೆವಾರ್‌ರ ಸಹಚರನಾಗಿದ್ದ ಎನ್.ಎಚ್. ಪಾಲ್ಕರ್ ಅವರು ತಮ್ಮ ‘SAFRRON FLAG’ ಪುಸ್ತಕದಲ್ಲಿ ಏಕೆ ಮತ್ತು ಹೇಗೆ ಭಗವಾಧ್ವಜವು ಆರೆಸ್ಸೆಸ್ ಆಶಯದ ಹಿಂದೂ ರಾಷ್ಟ್ರದ ಪ್ರತೀಕವಾಗಿದೆ ಎಂದು ವಿವರಿಸುತ್ತಾರೆ.

ಆರೆಸ್ಸೆಸ್ ಪ್ರಕಾರ ಭಗವಾಧ್ವಜವನ್ನು ವೇದಗಳ ಕಾಲದಲ್ಲಿ ಅರುಣಕೇತು ಎಂದು ಕರೆಯುತ್ತಿದ್ದರು.

ಆದರೆ ಆ ನಂತರ ಭಗವಾಧ್ವಜದ ಬಳಕೆಯು ಪ್ರಧಾನವಾಗಿ ಆಗಿರುವುದು ಬುದ್ಧ ಭಾರತದ ವಿರುದ್ಧ ಶಂಕರಾಚಾರ್ಯರ ನೇತೃತ್ವದಲ್ಲಿ ಸಾಧಿಸಲಾದ ಬ್ರಾಹ್ಮಣ್ಯದ ಪುನರುತ್ಥಾನದಲ್ಲಿ. ಅರ್ಥಾತ್ ಭಗವಾಧ್ವಜವು ಮಹಿಳೆ, ಶೂದ್ರ ಮತ್ತು ದಲಿತರ ಮೇಲೆ ಬ್ರಾಹ್ಮಣ್ಯದ ವಿಜಯದ ಪ್ರತೀಕವಾಗಿದೆ.

ಆದರೆ ಬ್ರಾಹ್ಮಣ್ಯದ ಪುನರುತ್ಥಾನವನ್ನು ಹಿಂದುತ್ವದ ವಿಜಯವೆಂದು ನಂಬಿಸುವ ಆರೆಸ್ಸೆಸ್ ಮತ್ತವರ ಸಿದ್ಧಾಂತಿಗಳು ಭಾರತದ ಮೇಲೆ ನಡೆದ ಎಲ್ಲಾ ಪರಕೀಯರ ದಾಳಿಗಳನ್ನು ಎದುರಿಸಲು ಹಿಂದೂ ರಾಜರು ಇದೇ ಬಾವುಟವನ್ನೇ ಬಳಸಿದ್ದರು ಎಂದು ಯಾವುದೇ ಪುರಾವೆಯಿಲ್ಲದೆ ಪ್ರತಿಪಾದಿಸುತ್ತಾರೆ. ಅದು ಸಹಜವೇ ಆಗಿದೆ. ಏಕೆಂದರೆ ಸಂಘಪರಿವಾರದ ಯಾವುದೇ ಪ್ರತಿಪಾದನೆಗಳಿಗೆ ಅವರ ನಂಬಿಕೆ ಪುರಾವೆ ಹೊರತು ಸಾಕ್ಷ್ಯಾಧಾರಗಳು ಇರುವುದಿಲ್ಲ.

ಅವರ ಪ್ರಕಾರ ಈ ದೇಶದ ಗುಲಾಮಗಿರಿಯೆಂದರೆ ಬ್ರಿಟಿಷ್ ದಾಸ್ಯವಲ್ಲ. ಮುಸ್ಲಿಮ್ ಆಳ್ವಿಕೆ ಮತ್ತು ಮುಸ್ಲಿಮರು ಈ ದೇಶದವರಲ್ಲ. ಹಾಗೆಯೇ ಕ್ರಿಶ್ಚಿಯನ್ನರು ಕೂಡ. ಈ ದೇಶದ ಚರಿತ್ರೆಯಲ್ಲಿ ನಾವು ವೈಭವದ ಯುಗವೆಂದು ಪರಿಗಣಿಸಬೇಕಿರುವುದು ಹಾಗೂ ಪುನರ್ ಸ್ಥಾಪಿಸಬೇಕಿರುವುದು ಬುದ್ಧಧರ್ಮವನ್ನು ನಾಶ ಮಾಡಿದ ಗುಪ್ತರ ಕಾಲದ ಬ್ರಾಹ್ಮಣ್ಯವನ್ನು. ಹೀಗಾಗಿ ಭಗವಾಧ್ವಜವೇ ಅವರ ಚರಿತ್ರೆ ಹಾಗೂ ಭವಿಷ್ಯದ ಆಶಯಗಳ ಸಂಕೇತ.

ಆದ್ದರಿಂದ ಅವರು ಪ್ರತಿಪಾದಿಸುತ್ತಿರುವುದು ಸನಾತನ ಭಗವಾಧ್ವಜವನ್ನೂ ಅಲ್ಲ. ಆರೆಸ್ಸೆಸ್ ಮಾರ್ಪಡಿಸಿರುವ ಭಗವಾಧ್ವಜವನ್ನು! ಹೀಗೆ ಸ್ವತಂತ್ರ ಭಾರತದ ಧ್ವಜ ಮತ್ತು ಭಗವಾಧ್ವಜಗಳು ಎರಡು ತದ್ವಿರುದ್ಧ ಆಶಯ, ಚರಿತ್ರೆ ಮತ್ತು ಭವಿಷ್ಯಗಳ ಪ್ರತೀಕಗಳೇ ಆಗಿವೆ. ಆದ್ದರಿಂದಲೇ ಸಂಘಪರಿವಾರವು ಸ್ವಾತಂತ್ರ್ಯ ಹೋರಾಟದುದ್ದಕ್ಕೂ ಆ ನಂತರವೂ ಸ್ವತಂತ್ರ ಭಾರತ ಧ್ವಜಕ್ಕೆ ನಿರಂತರ ಅವಮಾನವನ್ನೇ ಮಾಡುತ್ತಲೇ ಬಂದಿದೆ.

1947ರ ನವೆಂಬರ್‌ನಲ್ಲಿ ಸಂಘಪರಿವಾರದ ಮುಖಪತ್ರಿಕೆ ಆರ್ಗನೈಸರ್‌ನಲ್ಲಿ ಬರೆಯಲಾದ ಸಂಪಾದಕೀಯವೊಂದು:

‘‘ವಿಧಿಯಾಟದ ಭಾಗವಾಗಿ ಅಧಿಕಾರ ಪಡೆದುಕೊಂಡಿರುವ ಇಂದಿನ ಸರಕಾರವು ತ್ರಿವರ್ಣ ಧ್ವಜವನ್ನು ಭಾರತದ ರಾಷ್ಟ್ರಧ್ವಜವನ್ನಾಗಿ ಅಂಗೀಕರಿಸಿದೆ. ಆದರೆ ಭಾರತದ ಜನರೆಂದೂ ತ್ರಿವರ್ಣ ಧ್ವಜವನ್ನು ತಮ್ಮ ಬಾವುಟವನ್ನಾಗಿ ಅಂಗೀಕರಿಸಲಾರರು. ಏಕೆಂದರೆ ಮೂರು ಎಂಬ ಸಂಖ್ಯೆ ಭಾರತೀಯರ ಪಾಲಿಗೆ ಕೆಟ್ಟ ಶಕುನವಾಗಿದೆ’’ ಎಂದೆಲ್ಲ ಬರೆಯುತ್ತದೆ.

ತ್ರಿಶೂಲ, ತ್ರಿಮೂರ್ತಿ ಎಂದೆಲಾ ತ್ರಿವಳಿಗಳನ್ನೇ ಆರಾಧಿಸುವ ಹಿಂದೂ ಧರ್ಮದ ವಕ್ತಾರರು ನೀಡಿದ ಹೇಳಿಕೆಯಿದು.

ಸ್ವಾತಂತ್ರ್ಯಾನಂತರದಲ್ಲೂ ಮುಂದುವರಿದ ದೇಶದ್ರೋಹ-ಧ್ವಜದ್ರೋಹ

ಹೀಗೆ ಭಾರತ ರಾಷ್ಟ್ರ ಮತ್ತು ರಾಷ್ಟ್ರಧ್ವಜದ ಬಗ್ಗೆ ಸಂಘಪರಿವಾರದ ತಿರಸ್ಕಾರ ಮತ್ತು ಭಾರತವನ್ನು ಹಿಂದೂರಾಷ್ಟ್ರ ಅರ್ಥಾತ್ ಬ್ರಾಹ್ಮಣ ರಾಷ್ಟ್ರವನ್ನಾಗಿ ಮಾಡುವ ಪ್ರಯತ್ನಗಳು 47ರ ನಂತರವೂ ಮುಂದುವರಿಯಿತು.

ಹಾಗೆ ನೋಡಿದರೆ 2002ರ ವರೆಗೂ ಆರೆಸ್ಸೆಸ್ ಕಚೇರಿಗಳ ಮೇಲೆ ಭಾರತದ ಬಾವುಟ ಹಾರಾಡಲೇ ಇರಲಿಲ್ಲ. 2001ರಲ್ಲಿ ‘ರಾಷ್ಟ್ರಪ್ರೇಮಿ ಯುವದಳ’ ಎಂಬ ಸಂಘಟನೆಯ ಕಾರ್ಯಕರ್ತರು ಆರೆಸ್ಸೆಸ್‌ನ ನಾಗಪುರದ ಪ್ರಧಾನ ಕಚೇರಿಯ ಮೇಲೆ ಬಲವಂತವಾಗಿ ರಾಷ್ಟ್ರಧ್ವಜವನ್ನು ಹಾರಿಸಿದರು. ಅವರನ್ನು ಹಿಡಿದು ಆರೆಸ್ಸೆಸ್‌ನ ‘ದೇಶಭಕ್ತ’ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದರು.

ಆ ನಂತರ 2002ರಲ್ಲಿ ಮೊದಲ ಬಾರಿಗೆ ಆರೆಸ್ಸೆಸ್‌ನ ಕಚೇರಿಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲಾಯಿತು.

ಏಕೆ ಹೀಗೆ?

2002ರಲ್ಲಿ ವಾಜಪೇಯಿ ಸರಕಾರ ರಾಷ್ಟ್ರಧ್ವಜವನ್ನು ಖಾಸಗಿಯವರು ಹಾರಿಸಬಹುದೆಂದು ಭಾರತದ ಧ್ವಜ ನಿಯಮಗಳಿಗೆ ತಿದ್ದುಪಡಿ ತರುವವರೆಗೆ ಖಾಸಗಿ ವ್ಯಕ್ತಿ-ಸಂಘಟನೆಗಳು ರಾಷ್ಟ್ರಧ್ವಜವನ್ನು ಹಾರಿಸುವಂತಿರಲಿಲ್ಲವಾದ್ದರಿಂದ ಆವರೆಗೆ ಆರೆಸ್ಸೆಸ್ ಕಚೇರಿಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿರಲಿಲ್ಲ ಎಂಬ ಸಬೂಬನ್ನು ಆರೆಸ್ಸೆಸ್ ನೀಡುತ್ತದೆ.

ಆದರೆ 1955ರ ಭಾರತದ ರಾಷ್ಟ್ರ ಧ್ವಜದ ನಿಯಮಗಳಾಗಲೀ, 1971ರ ನಿಯಮಗಳಾಗಲೀ ಖಾಸಗಿ ವ್ಯಕ್ತಿಗಳು ಮತ್ತು ಸಂಘಟನೆಗಳು ಪ್ರತಿದಿನ ರಾಷ್ಟ್ರಧ್ವಜವನ್ನು ಹಾರಿಸುವುದನ್ನು ಮಾತ್ರ ನಿಷೇಧಿಸುತ್ತವೆ.

ಅರ್ಥಾತ್..

ರಾಷ್ಟ್ರೀಯ ದಿನಗಳಾದ ಸ್ವಾತಂತ್ರ್ಯ ದಿನ, ಗಣರಾಜ್ಯೋತ್ಸವ ದಿನ ಇನ್ನಿತ್ಯಾದಿ ಆರು ದಿನಗಳಂದು ಎಲ್ಲಾ ವ್ಯಕ್ತಿಗಳೂ ಹಾಗೂ ಸಂಘಟನೆಗಳು ತಮ್ಮ ಮನೆ ಮತ್ತು ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಲು ಅನುಮತಿಸುತ್ತದೆ.

ಆದರೂ ಆರೆಸ್ಸೆಸ್ ಕಚೇರಿಯ ಮೇಲೆ ರಾಷ್ಟ್ರಧ್ವಜದ ಬದಲಿಗೆ ಭಗವಾಧ್ವಜ ಮಾತ್ರ ಹಾರುತ್ತಿರುವುದಕ್ಕೆ ಕಾರಣ ಬಿಡಿಸಿ ಹೇಳಬೇಕಿಲ್ಲ.

2002ರ ತನಕ ತಮ್ಮ ಕಚೇರಿಗಳ ಮೇಲೆ ಉದ್ದೇಶಪೂರ್ವಕವಾಗಿ ರಾಷ್ಟ್ರಧ್ವಜ ಹಾರಿಸದ ಈ ಸಂಘಿಗಳು 1994ರಲ್ಲಿ ಹುಬ್ಬಳ್ಳಿಯಲ್ಲಿ ಅಂಜುಮನ್ ಮೈದಾನದ ಮೇಲೆ, ಶ್ರೀನಗರದ ಲಾಲ್ ಚೌಕಿನಲ್ಲಿ ರಾಷ್ಟ್ರಧ್ವಜ ಹಾರಿಸಲು ಮುಂದಾಗಿದ್ದರು.

ಅದರ ಹಿಂದೆ ಭಾರತದ ಧ್ವಜವನ್ನು ಕೂಡಾ ಭಗವಾಧ್ವಜದ ಉದ್ದೇಶಕ್ಕೆ ಪೂರಕವಾಗಿ ಬಳಸಿಕೊಳ್ಳುವ ಉದ್ದೇಶವೇ ಇತ್ತು. ರಾಷ್ಟ್ರಭಕ್ತಿಯಲ್ಲ.

ಇದು ಆರೆಸ್ಸೆಸ್. ಇದು ಸಾವರ್ಕರ್. ಇದು ಮೋದಿ ಭಾಷಣದ ತಾತ್ಪರ್ಯ.

ಇತಿಹಾಸದಲ್ಲಿ ಸಾವರ್ಕರ್‌ಗೆ ಮತ್ತು ಆರೆಸ್ಸೆಸ್‌ಗೆ ಇಲ್ಲದ ಪಾತ್ರವನ್ನು ಆರೋಪಿಸುವುದರ ಹಿಂದೆ ವರ್ತಮಾನದಲ್ಲಿ ತಾವು ನಡೆಸುತ್ತಿರುವ ಮತ್ತು ಭವಿಷ್ಯದಲ್ಲಿ ನಡೆಸಲಿರುವ ವಿನಾಶಕ್ಕೆ ಸಮರ್ಥನೆಯನ್ನು, ಸಮ್ಮತಿಯನ್ನು ರೂಢಿಸಿಕೊಳ್ಳುವ ಹುನ್ನಾರ ಇದೆಯೆಂಬುದನ್ನು ಭಾರತ ಅರೆಕ್ಷಣವೂ ಮರೆಯಬಾರದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X