Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ಅಂಬೇಡ್ಕರ್ ಜೀವನ ದೃಷ್ಟಿಯನ್ನು ಆಧರಿಸಿದ...

ಅಂಬೇಡ್ಕರ್ ಜೀವನ ದೃಷ್ಟಿಯನ್ನು ಆಧರಿಸಿದ ಕೃತಿ

ಡಾ. ಎ.ಆರ್. ಗೋವಿಂದ ಸ್ವಾಮಿಡಾ. ಎ.ಆರ್. ಗೋವಿಂದ ಸ್ವಾಮಿ14 Jan 2024 10:44 AM IST
share
ಅಂಬೇಡ್ಕರ್ ಜೀವನ ದೃಷ್ಟಿಯನ್ನು ಆಧರಿಸಿದ ಕೃತಿ

ಮಹಾನಾಯಕ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ದೃಷ್ಟಿಯನ್ನು ಆಧರಿಸಿದ ಮಹತ್ವಪೂರ್ಣ ಪುಸ್ತಕ ಖ್ಯಾತ ಲೇಖಕ ಡಾ. ಡಿ. ಪರಮೇಶ ನಾಯಕ್ ವಿರಚಿತ ‘ಡಾ. ಬಿ.ಆರ್ ಅಂಬೇಡ್ಕರ್ ಭರವಸೆಯ ಚಿಹ್ನೆ: ಭಾರತದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಅವರ ದೂರದೃಷ್ಟಿ’ (DR.B.R.AMBEDKAR SYMBOL OF HOPE : HIS VISION OF DEVELOPMENT FOR SC, ST & OBC`S IN INDIA). ಇತ್ತೀಚೆಗೆ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಈ ಪುಸ್ತಕದ ಶೀರ್ಷಿಕೆಯೇ ತಿಳಿಸುವಂತೆ ಭಾರತದಲ್ಲಿರುವ ಶೇ.85ಕ್ಕೂ ಹೆಚ್ಚು ಜನಸಂಖ್ಯೆಯು ಎಸ್ಸಿ, ಎಸ್ಟಿ, ಒಬಿಸಿಗಳಿಂದಲೇ ಕೂಡಿರುವಂತಹದ್ದು. ಹಾಗಾಗಿ ಇವರ ಏಳಿಗೆಯೇ ದೇಶದ ಏಳಿಗೆ ಎಂಬ ಭರವಸೆಯನ್ನು ಅಂಬೇಡ್ಕರ್ ಅವರು ಹೊಂದಿದ್ದರು ಎಂಬುದರ ಚರ್ಚೆ ಇಲ್ಲಿದೆ. ಈ ಪುಸ್ತಕ 12 ಅಧ್ಯಾಯಗಳಿಂದ ಮೂಡಿ ಬಂದಿದೆ.

ಈ ಪುಸ್ತಕದಲ್ಲಿ ಸಮಾನತೆ ಮತ್ತು ಸಾಮಾ ಜಿಕ ನ್ಯಾಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಡಾ.ಬಿ.ಆರ್.ಅಂಬೇಡ್ಕರ್ರ ಸ್ಫೂರ್ತಿದಾಯಕ ಪ್ರಯಾಣವನ್ನು ಆಧರಿಸಿದೆ. ಶತಶತಮಾನದಿಂದಲೂ ಭಾರತ ದೇಶದಲ್ಲಿರುವ ಜಾತಿ ವ್ಯವಸ್ಥೆಯನ್ನು ಮೀರಿ ಸಮಾನತೆ ಹಾಗೂ ಸಾಮಾಜಿಕ ನ್ಯಾಯವನ್ನು ಹೊಂದಲು ಅಂಬೇಡ್ಕರ್ ಅವರ ಶ್ರಮ ಹಾಗೂ ಹೋರಾಟವನ್ನು ಉಲ್ಲೇಖಿಸಲಾಗಿದೆ.

ಅಸ್ಪಶ್ಯತೆ, ಜಾತಿ ವ್ಯವಸ್ಥೆಯಿಂದ ನಡೆಯುತ್ತಿರುವ ಅಮಾನವೀಯವಾದ ಕೃತ್ಯಗಳು ಹಾಗೂ ಸಂದರ್ಭಗಳನ್ನು, ಆದಿವಾಸಿಗಳು ಎದುರಿಸುತ್ತಿರುವ ಸವಾಲುಗಳು, ಹಿಂದುಳಿದ ವರ್ಗದ ಜನರ ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿರುವಿಕೆಯ ಚರ್ಚೆ ಇದೆ.

ತಾರತಮ್ಯ ವಿರುದ್ಧದ ಹೋರಾಟವನ್ನು ಚರ್ಚಿಸಲಾಗಿದೆ. ಜೀವನದುದ್ದಕ್ಕೂ ತಾರತಮ್ಯ/ ಜಾತಿ ವ್ಯವಸ್ಥೆ ವಿರುದ್ಧ ನಿರಂತರವಾಗಿ ಹೋರಾಟ ನಡೆಸುತ್ತಲೇ ಬಂದ ಬಾಬಾ ಸಾಹೇಬರು ಎಲ್ಲರಿಗೂ ಸಮಾನ ಹಕ್ಕುಗಳು ಮತ್ತು ಅವಕಾಶಗಳು ಸಿಗಬೇಕೆಂದು ಅಚಲಸಂಕಲ್ಪ ಹೊಂದಿದ್ದರ ಬಗ್ಗೆ ಲೇಖಕರು ಬೆಳಕು ಚಲ್ಲಿದ್ದಾರೆ.

ಶಿಕ್ಷಣ ಮತ್ತು ಸಬಲೀಕರಣದಿಂದ ಅಸಮಾನತೆ ಎಂಬುದು ಸಂಪೂರ್ಣವಾಗಿ ಹೋಗಲಾಡಬೇಕು. ಅದರ ಜೊತೆಯಲ್ಲಿ ಈ ಸಮುದಾಯಗಳು ಅಭಿವೃದ್ಧಿಯಾಗಬೇಕು ಎಂಬುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಶಿಕ್ಷಣ ಎಂಬುದು ಹುಲಿಯ ಹಾಲಿದ್ದಂತೆ ಅದನ್ನು ಕುಡಿದವರು ಘರ್ಜಿಸಲೇಬೇಕುಎಂದು ಹೇಳುವುದರ ಮೂಲಕ ದೇಶದಲ್ಲಿನ ಅಸಮಾನತೆ ನಿವಾರಣೆಗೆ ಶಿಕ್ಷಣವೇ ಮೂಲ ಮದ್ದು ಎಂದು ಹೇಳಿರುವುದನ್ನು ಚರ್ಚಿಸಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ್ ಅವರು ಮೀಸಲಾತಿ ಮತ್ತು ಸಾಮಾಜಿಕ ನ್ಯಾಯ ಬಗ್ಗೆ ಶತಮಾನಗಳಿಂದಲೂ ತಳ ಸಮುದಾಯಗಳಿಗೆ ಆದಂತಹ ಅನ್ಯಾಯಗಳನ್ನು ಸರಿಪಡಿಸಿ ಸಮಾನ ಅವಕಾಶಗಳನ್ನು ಒದಗಿಸುವುದರ ಬಗ್ಗೆ ಹಾಗೂ ಇವುಗಳ ಹಿಂದಿನ ತಾರ್ಕಿಕತೆ ಮತ್ತು ಅನುಷ್ಠಾನದ ನಡುವೆ ನಡೆದಂತಹ ಚರ್ಚೆಗಳಿವೆ. ಇದರಿಂದ ಅಲ್ಪಮಟ್ಟಿಗೆ ಸಾಮಾಜಿಕ ನ್ಯಾಯ ದೊರಕುತ್ತಿರುವುದು ಹಾಗೂ ಕ್ರಮೇಣ ಅಸಮಾನತೆ ಎಂಬುದು ನಿವಾರಣೆಯಾಗುತ್ತದೆ ಎಂಬುದರ ಸ್ಥೂಲ ಚರ್ಚೆ ಇಲ್ಲಿದೆ. ದೇಶ ಸಂಪೂರ್ಣ ಸಮಾನತೆ ಕಂಡಾಗ ಬಾಬಾಸಾಹೇಬರ ಕನಸು ನನಸಾಗುತ್ತದೆ ಎಂಬುದನ್ನು ಲೇಖಕರು ವಿವರಿಸಿದ್ದಾರೆ.

ಶಿಕ್ಷಣದ ಮೂಲಕ ಸಬಲೀಕರಣ, ಸಾಮಾಜಿಕ ಕಟ್ಟುಪಾಡುಗಳಿಗೆ ಸವಾಲು ಹಾಕುವ, ಭಯ ಹುಟ್ಟಿಸುವ ಸಾಧನವಾಗಿ ಶಿಕ್ಷಣಕ್ಕೆ ಒತ್ತು ನೀಡಿದ್ದರು. ಕೆಳಸಮುದಾಯದಲ್ಲಿ ಆತ್ಮವಿಶ್ವಾಸವನ್ನು ಮೂಡಿಸುವ ಮತ್ತು ಹೊಸ ನಾಯಕರನ್ನು ಸೃಷ್ಟಿಸುವ ಸಾಧನವಾಗಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಬಾಬಾಸಾಹೇಬರು ನಂಬಿದ್ದರು. ಈಗಾಗಲೇ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದ ದೇಶಗಳಲ್ಲೂ ಅಸಮಾನತೆ ಎಂಬುದು ಇದೆ. ಆ ದೇಶಗಳು ಕೂಡ ಅಂಬೇಡ್ಕರ್ ಚಿಂತನೆ ಮತ್ತು ಆಶಯಗಳಿಂದ ಪ್ರೇರಿತರಾಗಿ ಹೋರಾಟಗಳು ನಡೆಯುತ್ತಿರುವುದು ಹಾಗೂ ನಡೆಸುತ್ತಿರುವುದರ ಬಗ್ಗೆ ಲೇಖಕರು ಎಲ್ಲಿ ಚರ್ಚಿಸಿರುವುದನ್ನು ಕಾಣುತ್ತೇವೆ.

ಅಂಬೇಡ್ಕರ್ ಅವರು ಜೀವನದು ದ್ದಕ್ಕೂ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿದ್ದಾರೆ. ಇವರ ಆಲೋಚನೆ, ದೃಷ್ಟಿಕೋನಗಳು ಕಾಲವನ್ನು ಮೀರಿದವಾಗಿದ್ದವು. ಆರ್ಥಿಕ ಅಭಿವೃದ್ಧಿ, ಕೈಗಾರಿಕೀರಣ, ರಾಜಕೀಯ ಭಾಗವಹಿಸುವಿಕೆ ಮತ್ತು ಸಾಮಾಜಿಕ ಏಕೀಕರಣದ ಬಗ್ಗೆ ಇಂದಿನ ಸಂದರ್ಭಕ್ಕೆ ಸಂಬಂಧಿಸಿದಂತೆ ಮೊದಲೇ ಯೋಚಿಸಿದ್ದರು ಎಂಬುದನ್ನು ಇಲ್ಲಿ ಕಾಣುತ್ತೇವೆ.

ಒಟ್ಟಾರೆಯಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆ ಹಾಗೂ ಸಂವಿಧಾನದ ಆಶಯದ ಅಡಿಯಲ್ಲಿ ಭಾರತದಲ್ಲಿ ಹಲವಾರು ರಾಜಕೀಯ ನಾಯಕರು ತಳ ಸಮುದಾಯದವರ ಏಳಿಗೆಗಾಗಿ ಶ್ರಮಿಸಿರುವುದನ್ನು ಲೇಖಕರು ಇಲ್ಲಿ ಉಲ್ಲೇಖಿಸಿದ್ದಾರೆ.

ಉಳುವವನೇ ಭೂಮಿಯ ಒಡೆಯ, ಭೂಹೀನರಿಗೆ ಭೂಮಿ ನೀಡುವುದು, ಮಹಿಳಾ ಸಬಲೀಕರಣದ ಕಾರ್ಯಕ್ರಮಗಳು, ಗೃಹ ಕೈಗಾರಿಕೆಗಳಿಗೆ ಪ್ರೋತ್ಸಾಹ ಮುಂತಾದ ಯೋಜನೆಗಳು ಅಂಬೇಡ್ಕರ್ ಚಿಂತನೆಯ ಹಿನ್ನೆಲೆಯಲ್ಲಿ ಬಂದಂತಹವುಗಳಾಗಿವೆ ಹಾಗೂ ಕರ್ನಾಟಕದಲ್ಲಿ ಸಿದ್ದರಾಮಯ್ಯನವರ 2 ಸರಕಾರಗಳು ತಂದಂತಹ ಭಾಗ್ಯಗಳು, ಗ್ಯಾರಂಟಿ ಯೋಜನೆಗಳು-ಸುಸ್ಥಿರ ಅಭಿವೃದ್ಧಿಯ ಗುರಿಗಳನ್ನು ಒಳಗೊಂಡಿದೆ ಎಂದರೆ ತಪ್ಪಾಗಲಾರದು. ಈ ಯೋಜನೆಗಳು ಮತ್ತು ಅಂಬೇಡ್ಕರ್ ಅವರ ಚಿಂತನೆಗಳು ಹಾಗೂ ಸಂವಿಧಾನದ ಆಶಯಗಳಂತೆ ಅನುಷ್ಠಾನ ಮಾಡಿರುವುದನ್ನು ಮೌಲ್ಯಯುತವಾಗಿ ಈ ಕೃತಿಯಲ್ಲಿ ಚರ್ಚಿಸಿರುವುದು ಶ್ಲಾಘನೀಯ.

share
ಡಾ. ಎ.ಆರ್. ಗೋವಿಂದ ಸ್ವಾಮಿ
ಡಾ. ಎ.ಆರ್. ಗೋವಿಂದ ಸ್ವಾಮಿ
Next Story
X