Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೆಹಲಿಯಲ್ಲಿ ಉಗ್ರ ದಾಳಿಯ ಸಂಚು ವಿಫಲ;...

ದೆಹಲಿಯಲ್ಲಿ ಉಗ್ರ ದಾಳಿಯ ಸಂಚು ವಿಫಲ; ಇಬ್ಬರ ಬಂಧನ

ವಾರ್ತಾಭಾರತಿವಾರ್ತಾಭಾರತಿ22 May 2025 7:28 AM IST
share
ದೆಹಲಿಯಲ್ಲಿ ಉಗ್ರ ದಾಳಿಯ ಸಂಚು ವಿಫಲ; ಇಬ್ಬರ ಬಂಧನ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಭಯೋತ್ಪಾದಕ ದಾಳಿ ನಡೆಸುವ ಐಎಸ್ಐ ಸಂಚನ್ನು ಭಾರತದ ಗುಪ್ತಚರ ಏಜೆನ್ಸಿಗಳು ವಿಫಲಗೊಳಿಸಿವೆ. ಮೂರು ತಿಂಗಳ ಯೋಜಿತ ಕಾರ್ಯಾಚರಣೆಯಲ್ಲಿ ಐಎಸ್ಐ ಯತ್ನವನ್ನು ವಿಫಲಗೊಳಿಸಿ, ದಾಳಿ ನಡೆಸಲು ತೀವ್ರ ತರಬೇತಿ ಪಡೆದ ಇಬ್ಬರನ್ನು ಬಂಧಿಸಲಾಗಿದೆ. ದಾಳಿ ನಡೆಸುವ ಹೊಣೆ ಹೊತ್ತಿದ್ದ ಪಾಕಿಸ್ತಾನದ ಅನ್ಸಾರುಲ್ ಮಿಯಾ ಅನ್ಸಾರಿ ಕೂಡಾ ಬಂಧಿತರಲ್ಲಿ ಸೇರಿದ್ದಾನೆ. ಈತ ಭಾರತ ಸಶಸ್ತ್ರ ಪಡೆಗಳ ಬಗ್ಗೆ ಸೂಕ್ಷ್ಮ ಮಾಹಿತಿಗಳನ್ನು ಕಲೆ ಹಾಕುತ್ತಿದ್ದ ಎನ್ನಲಾಗಿದೆ.

ಈ ಕುರಿತ ತನಿಖೆಯು ಪಾಕಿಸ್ತಾನದ ಹೈಕಮಿಷನ್ ನ ಕೆಲ ಸಿಬ್ಬಂದಿಯತ್ತ ಕೂಡಾ ಸಂಶಯದ ದೃಷ್ಟಿ ಬೀರಿದೆ. ಐಎಸ್ಐ ಅಧಿಕಾರಿಗಳಾದ ಮುಝಮ್ಮಿಲ್ ಮತ್ತು ಇಷಾನುರ್ರಹಮಾನ್ ಅಲಿಯಾಸ್ ಡ್ಯಾನಿಷ್ ಭಾರತೀಯ ಯುಟ್ಯೂಬರ್ ಗಳು ಮತ್ತು ಪ್ರಭಾವಿಗಳನ್ನು ಈ ಉದ್ದೇಶಕ್ಕೆ ಬಳಸುತ್ತಿದ್ದರು ಎಂದು ತಿಳಿದು ಬಂದಿದೆ.

ಭಾರತದ ಸೂಕ್ಷ್ಮ ದಾಖಲೆಗಳು/ ಚಿತ್ರಗಳು/ ಗೂಗಲ್ ಮಾಹಿತಿಗಳನ್ನು ಕಲೆಹಾಕಲು ಐಎಸ್ಐ ಬೇಹುಗಾರರನ್ನು ನೇಪಾಳ ಮೂಲಕ ದೆಹಲಿಗೆ ಕಳುಹಿಸಿದೆ ಎಂಬ ಮಾಹಿತಿಯನ್ನು ಆಧರಿಸಿ ಕಳೆದ ಜನವರಿಯಲ್ಲಿ ಈ ಕಾರ್ಯಾಚರಣೆ ಆರಂಭವಾಗಿತ್ತು. ಈ ಸಂಚಿನಲ್ಲಿ ದೆಹಲಿಯ ಮೇಲೆ ದಾಳಿ ನಡೆಸಲು ಉದ್ದೇಶಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಸಶಸ್ತ್ರ ಪಡೆಗಳ ವರ್ಗೀಕೃತ ಮಾಹಿತಿಯನ್ನು ಈ ಉದ್ದೇಶಕ್ಕೆ ಬಳಸಿಕೊಳ್ಳಲು ಸಂಚು ರೂಪಿಸಲಾಗಿತ್ತು.

ಆದರೆ ಗುಪ್ತಚರ ಅಧಿಕಾರಿಗಳು ಫೆಬ್ರವರಿ ಮಧ್ಯಭಾಗದವರೆಗೆ ಯಾವುದೇ ಮಾಹಿತಿ ಬಹಿರಂಗಪಡಿಸಿರಲಿಲ್ಲ. ದೆಹಲಿಗೆ ಆಗಮಿಸಿದ ಐಎಸ್ಐ ಏಜೆಂಟ್ ಮಿಲಿಟರಿ ದಾಖಲೆಗಳ ಬಗ್ಗೆ ರಹಸ್ಯ ಮಾಹಿತಿಯನ್ನು ಸಂಗ್ರಹಿಸಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ತಕ್ಷಣ ಬಲೆಬೀಸಿದ ಭದ್ರತಾ ಪಡೆಗಳು ಫೆಬ್ರವರಿ 15ರಂದು ಅನ್ಸಾರಿಯನ್ನು ನೇಪಾಳ ಮೂಲಕ ಪಾಕಿಸ್ತಾನಕ್ಕೆ ಹಿಂದಿರುಗುವ ಮಾರ್ಗಮಧ್ಯದಲ್ಲಿ ಕೇಂದ್ರ ದೆಹಲಿಯಲ್ಲಿ ಸೂಕ್ಷ್ಮ ದಾಖಲೆಗಳ ಜತೆಗೆ ಬಂಧಿಸಲಾಗಿತ್ತು. ಈತನ ವಿರುದ್ಧ ರಹಸ್ಯ ದಾಖಲೆಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ರಾಂಚಿ ನಿವಾಸಿ ಅಖ್ಲಾಕ್ ಆಝಮ್ ಎಂಬಾತ ಕೂಡಾ ಇದರಲ್ಲಿ ಷಾಮೀಲಾಗಿರುವುದು ತನಿಖೆಯಿಂದ ಅನಾವರಣಗೊಂಡಿತ್ತು. ಇಬ್ಬರೂ ಪಾಕಿಸ್ತಾನದ ವ್ಯಕ್ತಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದರು. ಆಝಮ್ ನನ್ನು ಮಾರ್ಚ್ನಲ್ಲಿ ಬಂಧಿಸಲಾಗಿತ್ತು. ಇವರ ಮೊಬೈಲ್ ಸಾಧನಗಳ ವಿಶ್ಲೇಷಣೆಯಿಂದ ಇಡೀ ಸಂಚು ಬಹಿರಂಗಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X