Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಪೋಡಿ ಮುಕ್ತ ಗ್ರಾಮ’ ಸಾಧಿಸುವವರೆಗೆ...

‘ಪೋಡಿ ಮುಕ್ತ ಗ್ರಾಮ’ ಸಾಧಿಸುವವರೆಗೆ ಸುಮ್ಮನಿರುವುದಿಲ್ಲ: ಸಚಿವ ಕೃಷ್ಣ ಬೈರೇಗೌಡ ಭರವಸೆ

ವಾರ್ತಾಭಾರತಿವಾರ್ತಾಭಾರತಿ4 Dec 2023 10:38 PM IST
share
‘ಪೋಡಿ ಮುಕ್ತ ಗ್ರಾಮ’ ಸಾಧಿಸುವವರೆಗೆ ಸುಮ್ಮನಿರುವುದಿಲ್ಲ: ಸಚಿವ ಕೃಷ್ಣ ಬೈರೇಗೌಡ ಭರವಸೆ

ಬೆಳಗಾವಿ: ರಾಜ್ಯಾದ್ಯಂತ ಪೋಡಿಗೆ ಸಂಬಂಧಿಸಿದಂತೆ ಶೇ.70ರಷ್ಟು ಬಗೆಹರಿಸಬಹುದಾದ ಸಮಸ್ಯೆಯಾಗಿದ್ದು ನಾವೇ ಪ್ರತಿ ಹಳ್ಳಿಗೂ ಹೋಗಿ ‘ಪೋಡಿ ಮುಕ್ತ ಗ್ರಾಮ’ ಯೋಜನೆಯನ್ನು ಅಭಿಯಾನದ ರೀತಿಯಲ್ಲಿ ನಡೆಸಲಿದ್ದೇವೆ. ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಸಂಕಲ್ಪ ಮಾಡಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು.

ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಡಾ.ಅಶ್ವತ್ಥ ನಾರಾಯಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪೋಡಿ ಬಾಕಿ ಪ್ರಕರಣಗಳಿಂದಾಗಿ ರೈತರಿಗೆ ಸಾಕಷ್ಟು ಸಮಸ್ಯೆಯಾಗಿದೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಜನತಾದರ್ಶನ ಕಾರ್ಯಕ್ರಮದಲ್ಲೂ ರೈತರ ಪೋಡಿ ಸಮಸ್ಯೆಗಳ ಸಂಖ್ಯೆಯೇ ಹೆಚ್ಚಾಗಿ ಕಂಡು ಬಂದಿದೆ ಎಂದರು.

ಹೀಗಾಗಿ ಪೋಡಿ ಮುಕ್ತ ಗ್ರಾಮಕ್ಕೆ ನಮ್ಮ ಸರಕಾರ ಸಂಕಲ್ಪ ಮಾಡಿದೆ. ಅಭಿಯಾನದ ಮಾದರಿಯಲ್ಲಿ ಶೀಘ್ರ ನಾವೇ ಗ್ರಾಮಗಳಿಗೆ ತೆರಳಿ ರೈತರಿಗೆ ಪೋಡಿ ಮಾಡಿಕೊಡುತ್ತೇವೆ. 2015ರಲ್ಲಿ ಪೋಡಿ ಮುಕ್ತ ಗ್ರಾಮ ಯೋಜನೆ ಆರಂಭವಾದದ್ದು. ಆ ವರ್ಷ 1791 ಹಳ್ಳಿಗಳನ್ನು ಪೋಡಿ ಮುಕ್ತ ಗ್ರಾಮ ಎಂದು ಘೋಷಿಸಲಾಗಿತ್ತು. 2017 ರಲ್ಲಿ 1634, 2018 ರಲ್ಲಿ 4337. 2019 ರಲ್ಲಿ 4647, 2020 ರಲ್ಲಿ 2977, 2021ರಲ್ಲಿ 1016 ಹಾಗೂ 2022ರಲ್ಲಿ 228 ಗ್ರಾಮಗಳನ್ನು ಪೋಡಿ ಮುಕ್ತ ಮಾಡಲಾಗಿದೆ. ಈವರೆಗೆ ಒಟ್ಟಾರೆ 16,430 ಗ್ರಾಮಗಳನ್ನು ಪೋಡಿ ಮುಕ್ತ ಮಾಡಲಾಗಿದೆ. ಇನ್ನೂ 16,085 ಗ್ರಾಮಗಳು ಬಾಕಿ ಇವೆ ಎಂದು ಅವರು ಹೇಳಿದರು.

ಹಿಂದಿನ ವರ್ಷಗಳ ಸಾಧನೆಗೆ ಹೋಲಿಸಿದರೆ 3 ವರ್ಷದಿಂದ ಪೋಡಿ ಮುಕ್ತ ಗ್ರಾಮ ಯೋಜನೆಯ ಸಾಧನೆ ಸಮಾಧಾನಕರವಾಗಿಲ್ಲ. ಹೀಗಾಗಿ ಸಾಧ್ಯವಾದಷ್ಟು ಶೀಘ್ರದಲ್ಲಿ ಈ ಪ್ರಕರಣಗಳನ್ನೂ ಇತ್ಯರ್ಥ ಮಾಡಲು ಕಂದಾಯ ಇಲಾಖೆ ಬದ್ದವಾಗಿದೆ. ಈ ಬಗ್ಗೆ ಸರ್ವೇ ಇಲಾಖೆಗೂ ಅಗತ್ಯ ಸೂಚನೆ ನೀಡಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಪೋಡಿ ಸಮಸ್ಯೆಯ ಹಿಂದಿನ ಕಾರಣಗಳ ಬಗ್ಗೆಯೂ ಸದನದಲ್ಲಿ ಚರ್ಚಿಸಿದ ಕೃಷ್ಣ ಬೈರೇಗೌಡ, ರೈತರ ಹೆಸರಲ್ಲಿ ಆರ್‍ಟಿಸಿ ಇದೆ. ಆದರೆ, ಸರ್ವೇ, ನಕ್ಷೆ ಮತ್ತು ಹಕ್ಕಿನ ದಾಖಲೆಗಳನ್ನು ನೀಡಲಾಗಿಲ್ಲ. ಅಲ್ಲದೆ, ಭೂಮಿಯ ವಿಸ್ತೀರ್ಣಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಪಹಣಿಗಳಿರುವುದು ಪೋಡಿ ಸಮಸ್ಯೆ ಬಗೆಹರಿಯದೆ ಇರುವುದಕ್ಕೆ ಮುಖ್ಯ ಕಾರಣ. ಆದರೂ, ರಾಜ್ಯಾದ್ಯಂತ ಇರುವ ಶೇ.70 ರಷ್ಟು ಪ್ರಕರಣಗಳಲ್ಲಿ ಸಮಸ್ಯೆ ಬಗೆಹರಿಸಬಹುದು ಎಂದರು.

ಈ ಪ್ರಕರಣಗಳಲ್ಲಿ ಯಾವುದಾದರೂ ಮಾರ್ಗ ಹುಡುಕಿ ರೈತರ ಸಮಸ್ಯೆಯನ್ನು ತುರ್ತು ಬಗೆಹರಿಸಿ ಎಂದು ನಾನು ಈಗಾಗಲೇ ನಮ್ಮ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆದರೆ, ಉಳಿದ ಶೇ.30 ರಷ್ಟು ಪ್ರಕರಣಗಳಲ್ಲಿ ಸಮಸ್ಯೆ ಬಗೆಹರಿಸುವುದು ಅಷ್ಟು ಸುಲಭದ ಕೆಲಸವಲ್ಲ. ಪರಿಹಾರ ಕೆಲಸಕ್ಕೆ ಕೈಹಾಕುತ್ತಿದ್ದಂತೆ ತಕರಾರುಗಳು ಎದುರಾಗುತ್ತವೆ ಇವನ್ನೂ ಎದುರಿಸಲು ನಾವು ಸಿದ್ದರಿದ್ದೇವೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ನಿಯಮ ಮೀರಿ ಬರ ಪೀಡಿತ ತಾಲೂಕುಗಳ ಎಂದು ಘೋಷಣೆ ಕಷ್ಟ

ಕೇಂದ್ರ ಸರಕಾರದ ಬರ ಕೈಪಿಡಿ-2020ರ ಅನ್ವಯ ಚಿಕ್ಕಮಗಳೂರು ತಾಲೂಕು ಬರ ಘೋಷಣೆ ಅರ್ಹತೆ ಪಡೆದಿಲ್ಲ. ನಿಯಮ ಮೀರಿ ಬರ ಪೀಡಿತ ಎಂದು ಘೋಷಣೆ ಮಾಡುವುದು ಕಷ್ಟ. ಹೀಗಾಗಿ ಮತ್ತೊಮ್ಮೆ ಪರಿಶೀಲನೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಸೋಮವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯರಾದ ತಮ್ಮಯ್ಯ ಡಿ.ಎಚ್. ಮತ್ತು ನಯನಾ ಮೋಟಮ್ಮ ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬರ ಘೋಷಣೆ ನಮ್ಮ ಆಯ್ಕೆಯಲ್ಲ. ಕೇಂದ್ರದ ಮಾನದಂಡಗಳ ಅನ್ವಯ ಶೇ.60ರಷ್ಟು ಮಳೆ ಕೊರತೆ, ಕನಿಷ್ಠ ಮೂರು ವಾರಗಳ ಅವಧಿಯಲ್ಲಿ ಖುಷ್ಕ ವಾತಾವರಣವನ್ನು ಆಧರಿಸಿ, ಆಯಾ ತಾಲೂಕುಗಳಲ್ಲಿನ ಮಳೆ ಪ್ರಮಾಣ ನೋಡಿ, ಬರ ಘೋಷಣೆ ಮಾಡಲಾಗುತ್ತಿದೆ ಎಂದು ಸ್ಪಷ್ಪಪಡಿಸಿದರು.

ಚಿಕ್ಕಮಗಳೂರು ಜಿಲ್ಲೆಯ 9 ತಾಲೂಕುಗಳ ಪೈಕಿ 8 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಆದರೇ, ಚಿಕ್ಕಮಗಳೂರು ತಾಲೂಕನ್ನು ಮಾತ್ರ ಬರ ಪೀಡಿತ ಎಂದು ಘೋಷಣೆ ಮಾಡಿಲ್ಲ ಎಂದು ಸದಸ್ಯರಾದ ತಮ್ಮಯ್ಯ, ನಯನಾ ಮೋಟಮ್ಮ ಆಕ್ಷೇಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X