Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟೋಕಿಯೋ ಕನ್ನಡ ಬಳಗದ ಬೆಳ್ಳಿಹಬ್ಬ...

ಟೋಕಿಯೋ ಕನ್ನಡ ಬಳಗದ ಬೆಳ್ಳಿಹಬ್ಬ ಸಂಭ್ರಮ: ನ. 22ರಂದು ಕನ್ನಡ ರಾಜ್ಯೋತ್ಸವ, ನಾವಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ13 Oct 2026 9:20 AM IST
share
ಟೋಕಿಯೋ ಕನ್ನಡ ಬಳಗದ ಬೆಳ್ಳಿಹಬ್ಬ ಸಂಭ್ರಮ: ನ. 22ರಂದು ಕನ್ನಡ ರಾಜ್ಯೋತ್ಸವ, ನಾವಿಕೋತ್ಸವ

ಮಂಗಳೂರು: ಜಪಾನ್‌ನ ಟೋಕಿಯೊದಲ್ಲಿ ನೆಲೆಸಿರುವ ಕನ್ನಡಿಗರ ಸಂಘಟನೆ ‘ಟೋಕಿಯೊ ಕನ್ನಡ ಬಳಗ’ದ 25ನೇ ವರ್ಷದ ಬೆಳ್ಳಿಹಬ್ಬದ ಅಂಗವಾಗಿ ನವೆಂಬರ್ 22ರಂದು ಟೋಕಿಯೊದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಉತ್ತರ ಅಮೆರಿಕದ ಕನ್ನಡಿಗರ ಸಂಘಟನೆ ‘ನಾರ್ತ್ ಅಮೆರಿಕಾ ವಿಶ್ವ ಕನ್ನಡಿಗರು’ (ನಾವಿಕ)ದ ನಾವಿಕೋತ್ಸವ ಜಂಟಿಯಾಗಿ ನಡೆಯಲಿದೆ.

ವಿಶ್ವದ ವಿವಿಧ ದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಉದ್ದೇಶದಿಂದ ಆಯೋಜಿಸಲಾಗಿರುವ ಈ ಸಮಾರಂಭಕ್ಕೆ ‘ಕಿಝುನ’ (KIZUNA) ಎಂದು ಹೆಸರಿಡಲಾಗಿದೆ. ಜಪಾನಿ ಭಾಷೆಯಲ್ಲಿ ಕಿಝುನ ಎಂದರೆ ಗಡಿಗಳನ್ನು ಮೀರಿದ ಬಾಂಧವ್ಯ ಎಂದರ್ಥ. ಕನ್ನಡದ ನುಡಿ, ಸಂಸ್ಕೃತಿ ಮತ್ತು ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ ಸಂಭ್ರಮಿಸುವ ಈ ಉತ್ಸವದಲ್ಲಿ ವಿವಿಧ ದೇಶಗಳ ಕನ್ನಡಿಗರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಎಲ್ಲ ಕನ್ನಡಿಗರಿಗೆ ಆಹ್ವಾನ ನೀಡಿರುವ ನಾವಿಕ ಅಧ್ಯಕ್ಷೆ ಡಾ. ಅನು ಭಟ್ ಅವರು" ಟೋಕಿಯೊ ಕನ್ನಡ ಬಳಗದ ಬೆಳ್ಳಿಹಬ್ಬದ ಸಂದರ್ಭದಲ್ಲಿ ನಾವಿಕೋತ್ಸವವನ್ನು ಜಂಟಿಯಾಗಿ ಆಚರಿಸುತ್ತಿರುವುದು ಹೆಮ್ಮೆ ಮತ್ತು ಸಂತೋಷದ ಸಂಗತಿ ಎಂದಿದ್ದಾರೆ. ವಿಶ್ವದ ವಿವಿಧ ದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಬಾಂಧವ್ಯದ ಸೇತುವೆಯಡಿ ಒಂದೇ ವೇದಿಕೆಗೆ ತರುವ ಈ ಉತ್ಸವದಲ್ಲಿ ಕುಟುಂಬ ಸಮೇತರಾಗಿ ಭಾಗವಹಿಸಿ ಕನ್ನಡದ ಭಾಷೆ, ಸಂಸ್ಕೃತಿ, ಸ್ನೇಹ ಮತ್ತು ಹೆಮ್ಮೆಯನ್ನು ಸಂಭ್ರಮಿಸುವಂತೆ ಅವರು ಮನವಿ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಎನ್‌ಆರ್‌ಐ ವೇದಿಕೆಯ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ, ಜನಪ್ರಿಯ ನಟ ಡಾ. ಶ್ರೀನಾಥ್ ಮತ್ತು ಅವರ ಪತ್ನಿ ಗೀತಾ ಶ್ರೀನಾಥ್ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎ. ದಯಾನಂದ ಸೇರಿದಂತೆ ಹಲವು ಸಚಿವರು ಮತ್ತು ಗಣ್ಯರು ಭಾಗವಹಿಸಲಿದ್ದಾರೆ.

ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಜ್ಞಾನ ವಿನಿಮಯ ಮತ್ತು ಚಿಂತನ-ಮಂಥನಕ್ಕೂ ಆದ್ಯತೆ ನೀಡಲಾಗಿದೆ. ಕಲೆ, ವಾಣಿಜ್ಯ, ವೈದ್ಯಕೀಯ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಕುರಿತು ವಿಶೇಷ ಉಪನ್ಯಾಸಗಳು, ಚರ್ಚೆಗಳು ಹಾಗೂ ವಿಚಾರಗೋಷ್ಠಿಗಳು ನಡೆಯಲಿವೆ. ಜಾಗತಿಕ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಿರುವ ಕನ್ನಡಿಗರು ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ. ಯುವ ಪೀಳಿಗೆಗೆ ಪ್ರೇರಣೆ ನೀಡುವ ಕಾರ್ಯಕ್ರಮಗಳೂ ನಡೆಯಲಿವೆ.

ʼಟೋಕಿಯೊ ಕನ್ನಡ ಬಳಗ’ ಬೆಳ್ಳಿಹಬ್ಬದ ವರ್ಷದಲ್ಲಿ ನಾವಿಕದೊಂದಿಗೆ ಇಂತಹ ಮಹತ್ವದ ಕಾರ್ಯಕ್ರಮ ಆಯೋಜಿಸುತ್ತಿರುವುದು ಟೋಕಿಯೊ ಕನ್ನಡ ಬಳಗಕ್ಕೆ ವಿಶೇಷ ಉತ್ಸಾಹ ತಂದಿದೆ. ಕಾರ್ಯಕ್ರಮದ ಪ್ರತಿಯೊಂದು ಅಂಶವನ್ನೂ ಸ್ಮರಣೀಯವಾಗಿಸಲು ವಿವಿಧ ತಂಡಗಳು ಕಾರ್ಯನಿರ್ವಹಿಸುತ್ತಿವೆ ಎಂದು ಬಳಗದ ಮೀಡಿಯಾ ಲೀಡ್ ಗಣೇಶ ಮೇಗೂರ್ ತಿಳಿಸಿದ್ದಾರೆ.

ಈ ಜಾಗತಿಕ ಕನ್ನಡ ಹಬ್ಬದಲ್ಲಿ ಪಾಲ್ಗೊಳ್ಳುವಂತೆ ಎಲ್ಲ ಕನ್ನಡಿಗರಿಗೆ ಸಂಘಟಕರು ಪತ್ರಿಕಾ ಪ್ರಕಟನೆ ಮೂಲಕ ಆಹ್ವಾನ ನೀಡಿದ್ದಾರೆ.

Tags

TokyoKannada BalagaSilver JubileeKannada RajyotsavaNavikotsava
share
ವಾರ್ತಾಭಾರತಿ
ವಾರ್ತಾಭಾರತಿ
Next Story
X