ಅಮೆರಿಕದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
PC: NDTV
ನ್ಯೂಯಾರ್ಕ್ : ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ನ್ಯೂಯಾರ್ಕ್ನ ಟೈಮ್ಸ್ ವೃತ್ತದಲ್ಲಿ ದಿನವಿಡೀ ಯೋಗಾಸನ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ನೂರಾರು ಆಸಕ್ತರು ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ನ್ಯೂಯಾರ್ಕ್ನಲ್ಲಿನ ಭಾರತದ ಕಾನ್ಸುಲೇಟ್ ಜನರಲ್ ಮತ್ತು ನ್ಯೂಯಾರ್ಕ್ನ ಟೈಮ್ಸ್ ಸ್ಕ್ವೇರ್ ಅಲಯನ್ಸ್ ನ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕಿ ರಿಚಾ ಧೆಕ್ನೆ ನೇತೃತ್ವದಲ್ಲಿ ಯೋಗ ಮತ್ತು ಧ್ಯಾನ ಕಾರ್ಯಕ್ರಮ ನಡೆಯಿತು. ವಾಷಿಂಗ್ಟನ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದ ಉಪ ರಾಯಭಾರ ಅಧಿಕಾರಿ ಶ್ರೀಪ್ರಿಯಾ ರಂಗನಾಥನ್ ಸಹಿತ ಹಲವರು ಪಾಲ್ಗೊಂಡಿದ್ದರು. ಇಸ್ರೇಲ್ ರಾಜಧಾನಿ ಟೆಲ್ಅವೀವ್, ಸಿಂಗಪುರ, ಶ್ರೀಲಂಕಾ, ನೇಪಾಳ ಸೇರಿದಂತೆ ಹಲವು ದೇಶಗಳಲ್ಲಿ ಯೋಗ ದಿನವನ್ನು ಆಚರಿಸಿರುವುದಾಗಿ ವರದಿಯಾಗಿದೆ.
Next Story