ಆದಾಯಕ್ಕಿಂತ ದುಪ್ಪಟ್ಟು ಆಸ್ತಿ; ತಹಶೀಲ್ದಾರ್ ಅಜಿತ್ ಕುಮಾರ್ ರೈ ಬಂಧನ

ಬೆಂಗಳೂರು, ಜೂ.29: ಆದಾಯಕ್ಕಿಂತ ದುಪ್ಪಟ್ಟುಆಸ್ತಿ ಹೊಂದಿರುವ ಪ್ರಕರಣ ಸಂಬಂಧ ಲೋಕಾಯುಕ್ತ ದಾಳಿಗೆ ಗುರಿಯಾಗಿದ್ದ ಕೆ.ಆರ್. ಪುರ ತಾಲ್ಲೂಕಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ನನ್ನು ಬಂಧಿಸಲಾಗಿದೆ.
‘’ಬುಧವಾರ ತಡ ರಾತ್ರಿ ಆರೋಪಿಯನ್ನು ವಶಕ್ಕೆ ಪಡೆದಿದ್ದೆವು. ಗುರುವಾರ ಬೆಳಿಗ್ಗೆ ಬಂಧಿಸಿದ್ದೇವೆ' ಎಂದು ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಎಸ್ಪಿ ಕೆ.ವಿ. ಅಶೋಕ್ ತಿಳಿಸಿದ್ದಾರೆ.
ಈವರೆಗೆ 150 ಎಕರೆಗೂ ಹೆಚ್ಚು ಬೇನಾಮಿ ಆಸ್ತಿಗಳ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯು ಆಸ್ತಿಗಳ ಮೂಲ ಮತ್ತು ಖರೀದಿ ಕುರಿತು ಸರಿಯಾದ ಮಾಹಿತಿ ಒದಗಿಸುತ್ತಿಲ್ಲ. ಈ ಕಾರಣದಿಂದ ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನೂ, ಅಜಿತ್ ಭಾರೀ ಪ್ರಮಾಣದ ಬೇನಾಮಿ ಆಸ್ತಿಗಳನ್ನು ಹೊಂದಿರುವ ದಾಖಲೆಗಳು ಪತ್ತೆಯಾಗಿವೆ.
Next Story





