Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಟಾಪ್ ಸುದ್ದಿಗಳು
  3. ಅಸಮಾನತೆಯನ್ನು ಅಳಿಸಲು ಶ್ರಮಿಸದಿದ್ದರೆ...

ಅಸಮಾನತೆಯನ್ನು ಅಳಿಸಲು ಶ್ರಮಿಸದಿದ್ದರೆ ನಾವು ಜನಪ್ರತಿನಿಧಿ, ಅಧಿಕಾರಿಗಳಾಗಿ ಪ್ರಯೋಜನವೇನು?: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ18 Jun 2023 9:18 PM IST
share
ಅಸಮಾನತೆಯನ್ನು ಅಳಿಸಲು ಶ್ರಮಿಸದಿದ್ದರೆ ನಾವು ಜನಪ್ರತಿನಿಧಿ, ಅಧಿಕಾರಿಗಳಾಗಿ ಪ್ರಯೋಜನವೇನು?: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂ. 18: ‘ಉತ್ತರದಾಯಿತ್ವ ಇರುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಅಗತ್ಯ ನಮ್ಮ ದೇಶಕ್ಕೆ ಹೆಚ್ಚಾಗಿದೆ. ಉತ್ತರದಾಯಿತ್ವ ಇಲ್ಲದಿದ್ದರೆ ನಾವು ಈ ಸ್ಥಾನದಲ್ಲಿ, ಈ ಹುದ್ದೆಯಲ್ಲಿರಲು ಅನರ್ಹರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಇನ್‍ಸೈಟ್ ಐಎಎಸ್ ಅಕಾಡೆಮಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯುಪಿಎಸ್‍ಸಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳನ್ನು ಅಭಿನಂದಿಸಿ ಮಾತನಾಡಿದ ಅವರು, ‘ಸರಕಾರ ಮತ್ತು ಜನರ ನಡುವೆ ಸೇತುವೆಯಾಗಿ ಕೆಲಸ ಮಾಡುವ ಹೊಣೆಗಾರಿಕೆ ಐಎಎಸ್, ಕೆಎಎಸ್ ಅಧಿಕಾರಿಗಳು ಮತ್ತು ಸರಕಾರಿ ಅಧಿಕಾರಿಗಳ ಮೇಲಿರುತ್ತದೆ’ ಎಂದು ತಿಳಿಸಿದರು.


‘ಬಹುಸಂಖ್ಯಾತ ಸಮುದಾಯ ಅಕ್ಷರ ಕಲಿಕೆಯಿಂದ ವಂಚಿತವಾಗಿದೆ. ಇದಕ್ಕೆ ಸಮಾಜದಲ್ಲಿರುವ ಅಸಮಾನತೆ ಕಾರಣ. ಈ ಅಸಮಾನತೆಯನ್ನು ಅಳಿಸಲು ಸಾಧ್ಯವಾಗದಿದ್ದರೆ, ಆ ದಿಕ್ಕಿನಲ್ಲಿ ಶ್ರಮಿಸದಿದ್ದರೆ ನಾವು ಜನಪ್ರತಿನಿಧಿಗಳಾಗಿ, ಐಎಎಸ್-ಕೆಎಎಸ್ ಅಧಿಕಾರಿಗಳಾಗಿ ಏನು ಪ್ರಯೋಜನ’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

‘ಈ ಅಸಮಾನತೆ, ತಾರತಮ್ಯ ಅಳಿಸಲು ಯತ್ನಿಸದೇ ಹೋದರೆ ಈ ದೇಶದ ಜನರೇ ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯ ಸೌಧವನ್ನು ಧ್ವಂಸ ಮಾಡುತ್ತಾರೆ ಎನ್ನುವ ಎಚ್ಚರಿಕೆಯ ಮಾತನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ್ದರು’ ಎಂದು ಸ್ಮರಿಸಿದ ಸಿದ್ದರಾಮಯ್ಯ, ‘ಈ ಎಚ್ಚರಿಕೆಯ ಮಾತನ್ನು ನೆನಪಿನಲ್ಲಿ ಇಟ್ಟುಕೊಂಡು ಅಸಮಾನತೆ, ತಾರತಮ್ಯವನ್ನು ಅಳಿಸಬೇಕು. ಹಸಿದವರಿಗೆ ಮಾತ್ರ ಊಟದ ಮಹತ್ವ ಗೊತ್ತಿರುತ್ತದೆ. ಹಸಿವಿನಿಂದ ನರಳುವವರಿಗೆ ನೆರವಾದರೆ ಮಾತ್ರ ಐಎಎಸ್, ಕೆಎಎಸ್‍ನಲ್ಲಿ ಟಾಪರ್ಸ್ ಆಗಿರುವುದಕ್ಕೂ ಸಾರ್ಥಕತೆ ಬರುತ್ತದೆ ಎಂದು ಹೇಳಿದರು.



‘ಹೀಗಾಗಿ ಹಸಿವು ಗೊತ್ತಿರುವ ಹಳ್ಳಿ ಮಕ್ಕಳನ್ನು ಐಎಎಸ್‍ಗಳಾಗಿ ಮಾಡಿ ಎಂದು ಇನ್‍ಸೈಟ್ ಸಂಸ್ಥೆಗೆ ಸಿದ್ದರಾಮಯ್ಯ ಕಿವಿಮಾತು ಹೇಳಿದರು. ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಶ್ರೀಗಳು, ನಿವೃತ್ತ ನ್ಯಾ.ನಾಗಮೋಹನದಾಸ್, ಇನ್‍ಸೈಟ್ ಸಂಸ್ಥೆಯ ನಿರ್ದೇಶಕ ವಿನಯ್ ಕುಮಾರ್ ಹಾಗೂ ಮಧುಕರ್ ನಾಗಣ್ಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X