ಟಿ.ನರಸೀಪುರ ಪ್ರಕರಣ | ಪ್ರತಾಪ್ ಸಿಂಹ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಂಧನ ಭೀತಿ

ಪ್ರತಾಪ್ ಸಿಂಹ
ಬೆಂಗಳೂರು : ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಇದರಿಂದಾಗಿ ಮಾಜಿ ಸಂಸದರಿಗೆ ಬಂಧನ ಭೀತಿ ಎದುರಾಗಿದೆ.
ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪ್ರತಾಪ್ ಸಿಂಹ ವಿರುದ್ದ ಪ್ರಕರಣ ದಾಖಲಾಗಿತ್ತು. ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಟಿ.ನರಸೀಪುರ ಠಾಣೆ ಸಬ್ ಇನ್ಸ್ಪೆಕ್ಟರ್ ದೂರು ನೀಡಿದ್ದರು.
ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರತಾಪ್ ಸಿಂಹ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣ ಗಂಭೀರತೆಯಿಂದ ಕೂಡಿದ್ದು ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರತಾಪ್ ಸಿಂಹ ಅರ್ಜಿಯನ್ನು ವಜಾ ಮಾಡಿದೆ.
ಹೀಗಾಗಿ ಪ್ರತಾಪ್ ಸಿಂಹ ಅವರಿಗೆ ಸದ್ಯ ಬಂಧನದ ಭೀತಿ ಎದುರಾಗಿದೆ. ಸದ್ಯ ಪ್ರತಾಪ್ ಸಿಂಹ ವಿರುದ್ದ ಟಿ.ನರಸೀಪುರ ಠಾಣೆಯಲ್ಲಿ ಇದು ಸೇರಿ ಎರಡು ಪ್ರಕರಣ ದಾಖಲಾಗಿದ್ದು, ಎರಡನ್ನೂ ರದ್ದುಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.






