ಥಾಣೆ: ಭಾರೀ ಮಳೆಗೆ ರೆಸ್ಟೋರೆಂಟ್ ಮೇಲ್ಛಾವಣಿ ಕುಸಿತ; ಮೂವರಿಗೆ ಗಾಯ

Photo: PTI
ಥಾಣೆ: ಭಾರೀ ಮಳೆಗೆಮಹಾರಾಷ್ಟ್ರದ ಥಾಣೆ ನಗರದಲ್ಲಿ ರೆಸ್ಟೋರೆಂಟ್ ಮೇಲ್ಛಾವಣಿ ಕುಸಿದು ಮೂವರು ಗಾಯಗೊಂಡಿದ್ದಾರೆ ಎಂದು ಮಹಾನಗರಪಾಲಿಕೆಯ ಅಧಿಕಾರಿಗಳು ರವಿವಾರ ತಿಳಿಸಿದ್ದಾರೆ.
ಘೋಡ್ಬಂದರ್ ರಸ್ತೆಯಲ್ಲಿರುವ ರೆಸ್ಟೋರೆಂಟ್ ನಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಥಾಣೆ ಮಹಾನಗರ ಪಾಲಿಕೆಯ ವಿಪತ್ತು ನಿಯಂತ್ರಣ ಕೋಶದ ಮುಖ್ಯಸ್ಥ ಯಾಸಿನ್ ತದ್ವಿ ತಿಳಿಸಿದ್ದಾರೆ.
ಇಬ್ಬರು ಮಹಿಳೆಯರು ಹಾಗೂ ಪುರುಷ ಗಾಯಗೊಂಡಿದ್ದು, ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ರವಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ 12 ಗಂಟೆಗಳ ಅವಧಿಯಲ್ಲಿ ನಗರದಲ್ಲಿ 58.90 ಮಿ.ಮೀ ಮಳೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Next Story





