Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವೀರಶೈವ ಲಿಂಗಾಯಿತರನ್ನು ಧರ್ಮದ...

ವೀರಶೈವ ಲಿಂಗಾಯಿತರನ್ನು ಧರ್ಮದ ಹೆಸರಿನಲ್ಲಿ ವಿಭಜಿಸಲು ಬಿಡುವುದಿಲ್ಲ: ಡಾ.ಹಾಲೆನೂರು ಲೇಪಾಕ್ಷ

ವಾರ್ತಾಭಾರತಿವಾರ್ತಾಭಾರತಿ12 July 2023 3:59 PM IST
share
ವೀರಶೈವ ಲಿಂಗಾಯಿತರನ್ನು ಧರ್ಮದ ಹೆಸರಿನಲ್ಲಿ ವಿಭಜಿಸಲು ಬಿಡುವುದಿಲ್ಲ: ಡಾ.ಹಾಲೆನೂರು ಲೇಪಾಕ್ಷ

ತುಮಕೂರು.ಜು.12:ವೀರಶೈವ ಬೇರೆ, ಲಿಂಗಾಯಿತ ಬೇರೆ ಎಂದು ವೀರಶೈವ ಲಿಂಗಾಯಿತ ಧರ್ಮವನ್ನು ಒಡೆಯಲು ಯತ್ನಿಸುವವರ ವಿರುದ್ದ ಸಮುದಾಯದ ಒಳಪಂಗಡಗಳನ್ನು ಒಗ್ಗೂಡಿಸುವುದು, ಹಾಗೂ ಈ ಸಮುದಾಯದಲ್ಲಿರುವ ಬಡವರಿಗೆ ಸಹಾಯ ಮಾಡುವ ಉದ್ದೇಶದಿಂದ ಅಖಿಲ ಭಾರತೀಯ ವೀರಶೈವ ಲಿಂಗಾಯಿತ ಜಾಗೃತಿ ಸೇವಾ ಮಹಾಸಂಘ(ರಿ)ವನ್ನು ಸ್ಥಾಪಿಸಲಾಗಿದೆ ಎಂದು ಸಂಘದ ರಾಷ್ಟ್ರೀಯ ಅಧ್ಯಕ್ಷ ಡಾ.ಹಾಲೆನೂರು ಲೇಪಾಕ್ಷ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ವೀರಶೈವ ಲಿಂಗಾಯಿತ ಪ್ರತ್ಯೇಕ ಧರ್ಮಕ್ಕೆ ನಮ್ಮ ಬೆಂಬಲವಿದೆ.ಆದರೆ ವೀರಶೈವ ಬೇರೆ, ಲಿಂಗಾಯಿತ ಬೇರೆ ಧರ್ಮ ಎಂಬುದಕ್ಕೆ ನಮ್ಮ ವಿರೋಧವಿದೆ. ಧರ್ಮ ಒಡೆಯುವುದಕ್ಕೆ ಅವಕಾಶ ನೀಡದಂತೆ ತಡೆಯುವ ನಿಟ್ಟಿನಲ್ಲಿ ಸುಮಾರು ಆರು ತಿಂಗಳ ಹಿಂದೆ ರಾಜ್ಯದ ಮೂವತ್ತು ಜಿಲ್ಲೆಗಳ ಸಮುದಾಯದ ಯುವಜನರು,ಹಿರಿಯರು ನಾಲ್ಕೈದು ಬಾರಿ ಸಭೆ ಸೇರಿ ಚರ್ಚಿಸಿದ ನಂತರ ಅಖಿಲ ಭಾರತೀಯ ವೀರಶೈವ ಲಿಂಗಾಯಿತ ಜಾಗೃತಿ ಸೇವಾ ಸಂಘವನ್ನು ಹುಟ್ಟು ಹಾಕಿದ್ದು, ಶ್ರೀಸಿದ್ದಗಂಗಾ ಶ್ರೀಗಳ ಆಶೀರ್ವಾದ, ಮಾರ್ಗದರ್ಶನ ಪಡೆದು ಇಂದು ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿದೆ ಎಂದರು.

ರಾಜ್ಯದಲ್ಲಿ ಕೆಲವರು ವೀರಶೈವ ಲಿಂಗಾಯಿತ ಬೇರೆ ಎಂದು ಸಮಾಜದ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ವೀರಶೈವ ಲಿಂಗಾಯಿತ ಎರಡು ಒಂದೇ. ಅನಾದಿ ಕಾಲದಿಂದಲೂ ಅವರವರ ಆಚಾರ,ವಿಚಾರಗಳನ್ನು ಮತ್ತೊಬ್ಬರಿಗೆ ತೊಂದರೆ ಯಾಗದ ರೀತಿಯಲ್ಲಿ ಆಚರಿಸಿಕೊಂಡು ಬರುತ್ತಿದ್ದೇವೆ.ನಮ್ಮಲ್ಲಿಯೂ 130ಕ್ಕೂ ಹೆಚ್ಚು ಒಳಪಂಗಡಗಳಿವೆ.ಅವುಗಳನ್ನು ಒಗ್ಗೂಡಿಸುವುದು. ಅವರಲ್ಲಿ ಶೇ65ರಷ್ಟು ಜನರು ಬಡವರಾಗಿದ್ದು,ಅವರ ಶೈಕ್ಷಣಿಕವಾಗಿ,ಅರ್ಥಿಕವಾಗಿ,ಔದ್ಯೋಗಿಕವಾಗಿ ಮೇಲೆತ್ತುವ ಉದ್ದೇಶವನ್ನು ಅ.ಭಾ.ವೀ.ಲಿ.ಜಾ.ಸೇ.ಮಸಂ(ರಿ) ಹೊಂದಿದೆ ಎಂದರು.

ಸಮುದಾಯದಲ್ಲಿರುವ ಬಡ ಪ್ರತಿಭಾವಂತರನ್ನು ಗುರುತಿಸಿ,ಅವರ ಶೈಕ್ಷಣಿಕ ಉನ್ನತಿಗೆ ವಿದ್ಯಾರ್ಥಿ ವೇತನ ನೀಡುವುದು.ಉನ್ನತ ಶಿಕ್ಷಣ ಪಡೆದ ನಿರುದ್ಯೋಗಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೀಡಿ, ಉದ್ಯೋಗ ದೊರಕಿಸುವುದು ಸಂಘದ ಪ್ರಮುಖ ಉದ್ದೇಶವಾಗಿದೆ.ಈಗಾಗಲೇ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸಂಘಕ್ಕೆ ಪದಾಧಿಕಾರಿಗಳ ನೇಮಕ ಮಾಡಿದ್ದು, ನೆರೆಯ ಆಂಧ್ರ, ತಮಿಳು ನಾಡು,ಮಹಾರಾಷ್ಟ್ರ ರಾಜ್ಯಗಳಿಂದಲೂ ನಮ್ಮ ಸಮುದಾಯದ ಜನರು,ಸಂಘದೊಂದಿಗೆ ಕೈಜೋಡಿಸಿದ್ದಾರೆ.ಇದರ ಜೊತೆಗೆ ತ್ರಿವಿಧ ದಾಸೋಹಕ್ಕೆ ಹೆಸರಾದ ಶ್ರೀಸಿದ್ದಗಂಗಾ ಮಠದ ಶ್ರೀಸಿದ್ದಲಿಂಗಸ್ವಾಮೀಜಿ ಸೇರಿದಂತೆ ಹಲವಾರು ಸ್ವಾಮೀಜಿಗಳು ನಮಗೆ ಆಶೀರ್ವದಿಸಿದ್ದು,ಮಾರ್ಗದರ್ಶನ ಮಾಡುವ ಭರವಸೆ ನೀಡಿದ್ದಾರೆ.ಮುಂದಿನ ಎರಡು ತಿಂಗಳಲ್ಲಿ ಸಂಘವನ್ನು ಅದ್ದೂರಿಗೆ ಉದ್ಘಾಟಿಸಲಾಗುವುದು ಎಂದು ತಿಳಿಸಿದರು.

ಅಖಿಲ ಭಾರತೀಯ ವೀರಶೈವ ಲಿಂಗಾಯಿತಿ ಜಾಗೃತಿ ಸೇವಾ ಮಹಾಸಂಘ(ರಿ),ಯಾವುದೇ ಸಂಘದ ವಿರುದ್ದವಾಗಿ ಕಟ್ಟಿದಂತಹ ಸಂಘಟನೆಯಲ್ಲ.ವೀರಶೈವ ಲಿಂಗಾಯಿತ ಸಮುದಾಯದಲ್ಲಿರುವ ಬಡವರಿಗೆ ನೆರವಾಗಬೇಕು ಎಂಬ ಉದ್ದೇಶದಿಂದ ಕಟ್ಟಿದ ಸಂಘ. ಅಖಿಲ ಕರ್ನಾಟಕ ವೀರಶೈವ ಲಿಂಗಾಯಿತ ಮಹಾಸಭಾ ಉಳ್ಳವರ ಪರವಾಗಿದ್ದು,ಸಮುದಾಯದಲ್ಲಿನ ಬಡವರ ಬಗ್ಗೆ ಕಾಳಜಿ ವಹಿಸುತ್ತಿಲ್ಲ.ಹಾಗಾಗಿ ನಮ್ಮ ಸಮುದಾಯದಲ್ಲಿರುವ ಬಡವರಿಗೆ ಸೇವೆ ಸಲ್ಲಿಸುವುದು ನಮ್ಮ ಉದ್ದೇಶವಾಗಿದೆ ಎಂದರು.

ಅಖಿಲ ಭಾರತೀಯ ವೀರಶೈವ ಲಿಂಗಾಯಿತಿ ಜಾಗೃತಿ ಸೇವಾ ಮಹಾಸಂಘದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರದೀಪ್ಕುಮಾರ್ ಎನ್.ಬಿ. ಮಾತನಾಡಿ,ನಮ್ಮ ಸಂಘಟನೆಯನ್ನು ಹಂತಹಂತವಾಗಿ ವಿಸ್ತರಿಸುತ್ತಿದ್ದು, ಈಗಾಗಲೇ 14 ಜಿಲ್ಲೆಗಳಿಂದ ಸುಮಾರು 3500 ಜನರು ಸದಸ್ಯತ್ವ ಪಡೆದಿದ್ದಾರೆ. ಸೇವೆಯೇ ನಮ್ಮ ಪರಮ ಗುರಿಯಾಗಿದೆ.ಯುವಜನರಿಗೆ ಅದ್ಯತೆ ನೀಡುವುದು.ಸಾಧಕರನ್ನು ಗುರುತಿಸಿ ಸಮಾಜಕ್ಕೆ ಪರಿಚಯಿಸುವುದು.ಉಪಪಂಗಡಗಳನ್ನು ಒಗ್ಗೂಡಿಸಿ, ಒಂದು ವೇದಿಕೆ ತರುವುದು ಇದರ ಹಿಂದಿನ ಉದ್ದೇಶವಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್.ಪ್ರಕಾಶ್ ಮೂರ್ತಿ,ಯುವಘಟಕದ ರಾಷ್ಟ್ರೀಯ ಅಧ್ಯಕ್ಷ ಜಗದೀಶ್, ಡಾ.ನಾಗರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X