Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಟ್ರೆಂಡಿಂಗ್
  4. ಟ್ರೋಲ್ ಗೆ ಗುರಿಯಾದ ‘ಭಾರತ ತೊರೆಯುವುದು...

ಟ್ರೋಲ್ ಗೆ ಗುರಿಯಾದ ‘ಭಾರತ ತೊರೆಯುವುದು ನನ್ನ ಕನಸು’ ಎಂಬ ವಿದ್ಯಾರ್ಥಿನಿಯ ಹೇಳಿಕೆ

ಕೆನಡಾದಲ್ಲಿರುವ ವಿದ್ಯಾರ್ಥಿನಿಗೆ ಉದ್ಯೋಗಾವಕಾಶದ ಆಮಂತ್ರಣ ನೀಡಿದ ಟ್ರೂಕಾಲರ್ ಸಿಇಒ

ವಾರ್ತಾಭಾರತಿವಾರ್ತಾಭಾರತಿ4 Aug 2023 11:46 PM IST
share
ಟ್ರೋಲ್ ಗೆ ಗುರಿಯಾದ ‘ಭಾರತ ತೊರೆಯುವುದು ನನ್ನ ಕನಸು’ ಎಂಬ ವಿದ್ಯಾರ್ಥಿನಿಯ ಹೇಳಿಕೆ

ಒಟ್ಟಾವಾ: ‘ಭಾರತ ತೊರೆಯುವುದು ನನ್ನ ಕನಸು’ ಎಂಬ ಭಾರತೀಯ ಮೂಲದ ವಿದ್ಯಾರ್ಥಿನಿಯ ಹೇಳಿಕೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಗುರುವಾರದಂದು ಟ್ರೂಕಾಲರ್ ಸಿಇಒ ಅಲನ್ ಮಮೇದಿ ಅವರು ಆಕೆಗೆ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ ಎಂದು hindustantimes.com ವರದಿ ಮಾಡಿದೆ.

ಕೆನಡಾದಲ್ಲಿ ಜೈವಿಕ ತಂತ್ರಜ್ಞಾನದಲ್ಲಿ ನನ್ನ ಪದವಿ ಮುಗಿದ ನಂತರ ನನ್ನ ಭವಿಷ್ಯದ ಯೋಜನೆಯು ವ್ಯಾಪಾರೋದ್ಯಮದಲ್ಲಿ ವೃತ್ತಿ ಜೀವನ ಆರಂಭಿಸುವುದನ್ನು ಒಳಗೊಂಡಿದೆ ಎಂದೂ ಏಕತಾ ಹೇಳಿದ್ದಳು. ಕೆನಡಾದ ಪ್ರಕೃತಿ ಸೊಬಗು ಹಾಗೂ ಸೂರ್ಯೋದಯ ಹಾಗೂ ಸೂರ್ಯಾಸ್ತಮಾನವನ್ನು ನೋಡುವುದು ನನ್ನ ಅಚ್ಚುಮೆಚ್ಚಿನ ಸಂಗತಿಗಳಲ್ಲೊಂದು ಎಂದೂ ಆಕೆ ಆ ವಿಡಿಯೊದಲ್ಲಿ ಬಹಿರಂಗಪಡಿಸಿದ್ದಳು. ಆದರೆ, ತನ್ನ ತವರು ದೇಶದ ಕುರಿತು ಏಕತಾ ನೀಡಿದ ಹೇಳಿಕೆಯು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.

ಆದರೆ, ಈ ಟ್ರೋಲ್‍ಗಳ ಕುರಿತು ತಲೆ ಕೆಡಿಸಿಕೊಳ್ಳಬೇಡ ಎಂದು ಆಕೆಯನ್ನು ಒತ್ತಾಯಿಸಿರುವ ಮಮೇದಿ, ಆಕೆಯ ಶಿಕ್ಷಣ ಪೂರ್ಣಗೊಂಡ ನಂತರ ವಿಶ್ವದ ಯಾವುದೇ ಭಾಗದಿಂದಲಾದರೂ ಉದ್ಯೋಗ ನಿರ್ವಹಿಸುವ ಅವಕಾಶದ ಆಹ್ವಾನವನ್ನು ತಮ್ಮ ಕಂಪನಿಯಿಂದ ಆಕೆಗೆ ನೀಡಿದ್ದಾರೆ. ಅಲ್ಲದೆ, ಆಕೆ ತನ್ನ ಕನಸನ್ನು ಪೂರೈಸಿಕೊಳ್ಳುವತ್ತ ಕೆಲಸ ಮಾಡುತ್ತಿರುವುದನ್ನು ಟೀಕಿಸುತ್ತಿರುವ ಜನರನ್ನು ಖಂಡಿಸಿದ್ದಾರೆ.

ಈ ಕುರಿತು ‘ಎಕ್ಸ್‍’ನಲ್ಲಿ ಪೋಸ್ಟ್ ಮಾಡಿರುವ ಅವರು, “ಜನರು ಆಕೆಯ ಬಗ್ಗೆ ವ್ಯಂಗ್ಯವಾಡಲು, ಆಕೆ ತಪ್ಪು ತಿಳಿವಳಿಕೆಗೆ ಒಳಗಾಗಬೇಕು ಎಂದು ಬಯಸುತ್ತಿದ್ದಾರೆ. ಇದು ಸರಿಯಲ್ಲ!! ಏಕತಾ, ಈ ಎಲ್ಲ ಕುರಿಗಳು ನಿನ್ನ ಕುರಿತು ಮಾಡುತ್ತಿರುವ ವ್ಯಂಗ್ಯವನ್ನು ಗಂಭೀರವಾಗಿ ಪರಿಗಣಿಸದಿರು. ನನ್ನ ಪ್ರಕಾರ, ನೀನು ಸಂಯಮದಿಂದಿದ್ದೀಯ ಹಾಗೂ ನಿನ್ನ ಕನಸನ್ನು ಜೀವಿಸುತ್ತಿದ್ದೀಯ! ನೀನು ನಿನ್ನ ವಿದ್ಯಾಭ್ಯಾಸವನ್ನು ಪೂರೈಸಿದ ನಂತರ, ವಿಶ್ವದ ಯಾವುದೇ ಮೂಲೆಯಲ್ಲಿನ ಟ್ರೂಕಾಲರ್ ಕಚೇರಿಯಲ್ಲಿ ಕೆಲಸ ಮಾಡಲು ನಿನಗೆ ಆಹ್ವಾನ ನೀಡುತ್ತಿದ್ದೇನೆ” ಎಂದು ಭರವಸೆ ನೀಡಿದ್ದಾರೆ.

ಮಮೇದಿಯ ‘ಎಕ್ಸ್’ ಪೋಸ್ಟ್ ಗೆ ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದು ಕೃಪಾಂಕವನ್ನು ಪಡೆಯುವ ಗಿಮಿಕ್ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಆದರೆ, ಇನ್ನೂ ಕೆಲವು ಬಳಕೆದಾರರು, ಅವರು ಅದ್ಭುತ ನಡವಳಿಕೆಯನ್ನು ಶ್ಲಾಘಿಸಿದ್ದಾರೆ. ಓರ್ವ ಬಳಕೆದಾರರು, “ವಾವ್! ಅದ್ಭುತ ನಡವಳಿಕೆ” ಎಂದು ಶ್ಲಾಘಿಸಿದ್ದಾರೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X