ತುಮಕೂರು | ರಸ್ತೆ ಬದಿ ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಢಿಕ್ಕಿ: ಓರ್ವ ಮೃತ್ಯು, ಇನ್ನೋರ್ವ ಗಂಭೀರ

ತುಮಕೂರು: ಟೈರ್ ಪಂಕ್ಚರ್ ಆಗಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಲಾರಿ ಢಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ಹುಳಿಯಾರು ಸಮೀಪದ ಕೆಂಕೆರೆ ಗೊಲ್ಲರಹಟ್ಟಿ ಬಳಿ ನಡೆದಿದೆ.
ರಾಮಪ್ಪನಹಟ್ಟಿ ಗ್ರಾಮದ ಯುವಕ ಕುಮಾರ್ ಮೃತಪಟ್ಟವರು.
ಘಟನೆ ವಿವರ: ಗುರುವಾರ ತಡರಾತ್ರಿ 12:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಗೊಬ್ಬರ ಸಾಗಾಟದ ಲಾರಿಯೊಂದರ ಟೈರ್ ಪಂಕ್ಚರ್ ಆದ ಕಾರಣ ಕೆಂಕೆರೆ ಗೊಲ್ಲರಹಟ್ಟಿ ಸಮೀಪ ರಸ್ತೆ ಬದಿಯಲ್ಲಿ ನಿಂತಿತ್ತು. ಪಂಕ್ಚರ್ ಆಗಿದ್ದ ಲಾರಿಯ ಟೈರ್ ಬದಲಾಯಿಸುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಲಾರಿ ಢಿಕ್ಕಿ ಹೊಡೆದಿದೆ. ಈ ವೇಳೆ ಟೈರ್ ಬಿಚ್ಚುತ್ತಿದ್ದ ವ್ಯಕ್ತಿಯ ಪಕ್ಕದಲ್ಲಿ ನಿಂತಿದ್ದ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡ ಇನ್ನೋರ್ವರನ್ನು ತಕ್ಷಣವೇ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
Next Story





