ಆಗ್ನೇಯ ಪದವೀಧರ ಕ್ಷೇತ್ರದಿಂದ ಶಶಿ ಹುಲಿಕುಂಟೆಮಠಗೆ ಕಾಂಗ್ರೆಸ್ ಟಿಕೆಟ್

ತುಮಕೂರು : ಮುಂಬರುವ 2026ರ ನವೆಂಬರ್‌ನಲ್ಲಿ ನಡೆಯುವ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗು ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಉಪಾಧ್ಯಕ್ಷ ಶಶಿ ಹುಲಿಕುಂಟೆಮಠ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ.
ಶಶಿ ಹುಲಿಕುಂಟೆಮಠ ಅವರು ಬಿ.ಕಾಂ ಪದವೀಧರರಾಗಿದ್ದು, ತುಮಕೂರು ನಗರದ ನಿವಾಸಿಯಾಗಿದ್ದಾರೆ.
2007 ರಿಂದ 2010 ರವರೆಗೆ ಎನ್.ಎಸ್.ಯು.ಐ ನಗರ ಪ್ರಧಾನ ಕಾರ್ಯದರ್ಶಿಯಾಗಿ, 2011 ರಿಂದ 2013ರವರೆಗೆ ತುಮಕೂರು ನಗರ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದರೆ, 2017 ರಿಂದ 2020ರವರೆಗೆ ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ, 2020 ರಿಂದ 2025 ರವರೆಗೆ ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಚುನಾಯಿತರಾಗಿ ಕೆಲಸ ಮಾಡಿದ್ದಾರೆ. 2023ರಲ್ಲಿ ತುಮಕೂರು ನಗರ ಪಾಲಿಕೆಯ ಕೌನ್ಸಿಲರ್ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು.
Next Story





