Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ...

ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290ಕ್ಕೂ ಹೆಚ್ಚು ಈಡೇರಿಕೆ, ಉಳಿದ 2 ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು : ಸಿಎಂ ಸಿದ್ದರಾಮಯ್ಯ

ತುಮಕೂರಿನಲ್ಲಿ "ಮೂರು ವರ್ಷಗಳ ಸಾಧನಾ ಸಮರ್ಪಣಾ" ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ19 May 2026 3:09 PM IST
share
ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290ಕ್ಕೂ ಹೆಚ್ಚು ಈಡೇರಿಕೆ, ಉಳಿದ 2 ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು : ಸಿಎಂ ಸಿದ್ದರಾಮಯ್ಯ

ತುಮಕೂರು : ಚುನಾವಣೆ ವೇಳೆ ಜಿ.ಪರಮೇಶ್ವರ್ ಅವರ ಅಧ್ಯಕ್ಷತೆಯ‌ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290 ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ. ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಸರಕಾರಕ್ಕೆ ಮೂರು ವರ್ಷಗಳು ಪೂರೈಸಿರುವ ಸಂದರ್ಭದಲ್ಲಿ ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಆಯೋಜಿಸಿದ್ದ, "ಮೂರು ವರ್ಷಗಳ ಸಾಧನಾ ಸಮರ್ಪಣಾ" ಸಮಾವೇಶ ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಬಳಿಕ, "ನವ ಕರ್ನಾಟಕ" ಅಭಿವೃದ್ಧಿ ಮಾದರಿಯ ವಸ್ತು ಪ್ರದರ್ಶನ ಮತ್ತು ತುಮಕೂರು ಜಿಲ್ಲೆಯಲ್ಲಿ ನಡೆದಿರುವ 682 ಕೋಟಿ ಮೊತ್ತದ ಬೃಹತ್ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದರು.

ನಾಳೆಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ತುಂಬುತ್ತಿರುವ ಹೊತ್ತಲ್ಲಿ ಜಿ.ಪರಮೇಶ್ವರ್ ಅವರು ಸರ್ಕಾರದ ಸಾಧನಾ ಸಮರ್ಪಣಾ ಸಮಾವೇಶ ಮತ್ತು ಕಂದಾಯ ಇಲಾಖೆಯ ಕ್ರಾಂತಿಕಾರಿ ಜನೋಪಯೋಗಿ ಕೆಲಸಗಳ ಜನಾರ್ಪಣೆ ಸಮಾವೇಶವನ್ನು ಸ್ವಯಂಸ್ಫೂರ್ತಿಯಿಂದ ತುಮಕೂರಿನಲ್ಲಿ ಅಚ್ಚುಕಟ್ಟಾಗಿ ಆಯೋಜಿಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಜಿ.ಪರಮೇಶ್ವರ್ ಅಧ್ಯಕ್ಷತೆಯ‌ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290 ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ. ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು. ಪ್ರಮುಖವಾಗಿ ನಾವು ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಒಂದೊಂದಾಗಿ ಈಡೇರಿಸಿದ್ದಲ್ಲದೆ ಉಳಿದ ಭರವಸೆಗಳನ್ನೂ ಈಡೇರಿಸಿ ನಾವು ನಿಮ್ಮ ಮುಂದೆ ಧನ್ಯತೆ ಅರ್ಪಿಸಲು ಇಲ್ಲಿ ನಿಮ್ಮ ಮುಂದೆ ನಿಂತಿದ್ದೇವೆ ಎಂದರು.

ನಾವು ಅಧಿಕಾರಕ್ಕೆ ಬಂದ ಬಳಿಕ‌ ಸರ್ವ ಜಾತಿ, ಸರ್ವ ಧರ್ಮದ ಸಕಲ ಜನತೆಯ ಅಭಿವೃದ್ಧಿಗೆ ಕೆಲಸ ಮಾಡಿದ್ದೇವೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಬಿಜೆಪಿಯವರ ರೀತಿ ಜಾತಿ ಧರ್ಮದದ ಹೆಸರಲ್ಲಿ ಮನುಷ್ಯರನ್ನು ವಿಭಜಿಸುವ ಕೆಟ್ಟ ರಾಜಕಾರಣ ನಾವು ಮಾಡಲಿಲ್ಲ. ಬಿಜೆಪಿಯವರ ಎಲ್ಲಾ ಅಪಪ್ರಚಾರಗಳನ್ನು ಸುಳ್ಳಾಗಿಸಿ ನಾವು ಅಭಿವೃದ್ಧಿ ಮಾಡಿ ತೋರಿಸಿದ್ದೇವೆ ಎಂದರು.

ಮೋದಿಯವರು ಪ್ರಧಾನಿ ಆಗುವ ಮೊದಲು ದೇಶದಲ್ಲಿ ಡೀಸೆಲ್, ಪೆಟ್ರೋಲ್, ಚಿನ್ನದ ಬೆಲೆ ಎಷ್ಟಿತ್ತು. ಈಗ ಅದು ಆಕಾಶಕ್ಕೆ ಏರಿದೆ. ಟ್ರಂಪ್ ಬಾಲ ಹಿಡಿದು ಸುತ್ತುತ್ತಿದ್ದ ಮೋದಿಯವರೇ ಈ ಬೆಲೆ ಏರಿಕೆಗೆ ಕಾರಣ. ಮೋದಿ ದರ್ಬಾರಿನಲ್ಲಿ ಅಂಬಾನಿ ಮತ್ತು ಅದಾನಿ ಮಾತ್ರ ಲಾಭ ಮಾಡಿಕೊಂಡು ಈಗ ಇವರ ಆಸ್ತಿ 8 ಲಕ್ಷ ಕೋಟಿಗೆ ಏರಿಕೆಯಾಗಿದೆ. ಬಡವರು ಮತ್ತು ಮಧ್ಯಮ ವರ್ಗದವರ ಆದಾಯ ಮತ್ತು ಬದುಕು ನೆಲಕಚ್ಚಿದ್ದನ್ನು ವಿವರಿಸಿದರು.

ನಾವು ನುಡಿದಂತೆ ನಡೆದಿದ್ದೇವೆ. ತಲಾ ಆದಾಯದಲ್ಲಿ ಕನ್ನಡಿಗರು ಇಡೀ ದೇಶದಲ್ಲೇ ನಂಬರ್ ಒನ್ ಇದ್ದಾರೆ. ಇಡೀ ದೇಶದ GST ಗೆ ನಮ್ಮ ಕೊಡುಗೆ ಅಪಾರ ಇದೆ. ದೇಶದ ತಲಾ ಆದಾಯಕ್ಕಿಂತ ರಾಜ್ಯದ ಆದಾಯ ಹೆಚ್ಚಾಗಿರುವ ರೀತಿಯಲ್ಲಿ ನಾವು ಪ್ರಗತಿ ಸಾಧಿಸಿದ್ದೇವೆ. ನಾವು ನುಡಿದಂತೆ ನಡೆದು ಸಾಬೀತುಪಡಿಸಿರುವುದರಿಂದ ಮತ್ತೆ 2028ರ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ. ಕುವೆಂಪು ಅವರ "ಸರ್ವ ಜನಾಂಗದ ಶಾಂತಿಯ ತೋಟ" ಎನ್ನುವ ಆಶಯದ ನಾಡನ್ನು ಇನ್ನಷ್ಟು ಗಟ್ಟಿಯಾಗಿ ರೂಪಿಸುತ್ತೇವೆ. ಸಂವಿಧಾನಬದ್ದ ಅಭಿವೃದ್ಧಿ ಮಾರ್ಗದಲ್ಲಿ ನಾಡನ್ನು ಮುನ್ನಡೆಸುತ್ತೇವೆ ಎಂದು ಭರವಸೆ ನೀಡಿದರು.

ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ‌ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತ್ಮಹತ್ಯೆಗೆ ಮೋದಿ ಸರ್ಕಾರ ಕಾರಣ. ರಾಜ್ಯದ CET ಮಾದರಿಯಲ್ಲಿ ಪರೀಕ್ಷೆ ನಡೆಸಿ ಎನ್ನು ವ ನಮ್ಮ ಸಲಹೆಯನ್ನು ತಿರಸ್ಕರಿಸಿ ನೀಟ್ ನಲ್ಲಿ ಅದ್ವಾನ ಮಾಡಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗದ ಭರವಸೆ ನೀಡಿದ್ದ ಮೋದಿಯ ಅಚ್ಚೇ ದಿನ ಬರಲಿಲ್ಲ. ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳ‌ ಆತ್ಮಹತ್ಯೆ ತಡೆಯದ ಮೋದಿ ಸರ್ಕಾರ, ರೈತರ ಆದಾಯವನ್ನೂ ದುಪ್ಪಟ್ಟು ಮಾಡಲಿಲ್ಲ. ಕಪ್ಪು ಹಣ ತರಲಿಲ್ಲ. ಹೀಗಾಗಿ ಬಿಜೆಪಿ-ಆರ್ ಎಸ್ ಎಸ್ ಸರ್ಕಾರ ಸಂಪೂರ್ಣ ವಿಫಲವಾಗಿ ದೇಶದ ಸಾಲವನ್ನು 220 ಲಕ್ಷ ಕೋಟಿಗೆ ಹೆಚ್ಚಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದಲ್ಲಿ, ಕಂದಾಯ ಸಚಿವ ಕೃಷ್ಣಬೈರೇಗೌಡರ ಅವರ ಉಸ್ತುವಾರಿಯಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಂಪುಟದ ಎಲ್ಲಾ ಸಚಿವರು ಹಾಗೂ ಶಾಸಕರುಗಳು ಉಪಸ್ಥಿತರಿದ್ದರು.

Tags

CM Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X