Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ಕಾಂಗ್ರೆಸ್ ಜಾತಿ ಆಧಾರದಲ್ಲಿ ಅಧಿಕಾರ...

ಕಾಂಗ್ರೆಸ್ ಜಾತಿ ಆಧಾರದಲ್ಲಿ ಅಧಿಕಾರ ನೀಡಿಲ್ಲ: ಸಚಿವ ಕೆ.ಎನ್.ರಾಜಣ್ಣ

ವಾರ್ತಾಭಾರತಿವಾರ್ತಾಭಾರತಿ16 Jan 2024 9:35 PM IST
share
ಕಾಂಗ್ರೆಸ್ ಜಾತಿ ಆಧಾರದಲ್ಲಿ ಅಧಿಕಾರ ನೀಡಿಲ್ಲ: ಸಚಿವ ಕೆ.ಎನ್.ರಾಜಣ್ಣ

ತುಮಕೂರು: ಕಾಂಗ್ರೆಸ್ ಪಕ್ಷ ಯಾವತ್ತು ಜಾತಿ ಜನಸಂಖ್ಯೆಯನ್ನು ನೋಡಿ ಅಧಿಕಾರ ನೀಡಿಲ್ಲ. ದೇವರಾಜ ಅರಸು, ಧರಮ್ ಸಿಂಗ್ ,ವೀರಪ್ಪ ಮೊಯ್ಲಿ ಅವರುಗಳೆಲ್ಲಾ ಯೋಗ್ಯತೆಯಿಂದ ಅಧಿಕಾರ ಪಡೆದವರೇ ಹೊರತು ಜಾತಿಯ ಬಲದಿಂದಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟ-ತುಮಕೂರು ಜಿಲ್ಲೆ ಇವರು ಆಯೋಜಿಸಿದ್ದ ಹಿಂದುಳಿದ ವರ್ಗಗಳ ಒಕ್ಕೂಟದ ದಶಮಾನೋತ್ಸವ ಕಾರ್ಯಕ್ರಮ ಹಾಗೂ ಕೆ.ಎನ್.ಆರ್.ಪ್ರಶಸ್ತಿ ಪ್ರಧಾನ ಸಮಾರಂಭ ವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,‌ ಕಾಂಗ್ರೆಸ್‍ಗೆ ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು ಎಲ್ಲರಿಗೂ ರಾಜಕೀಯ ಅಧಿಕಾರವನ್ನು ನೀಡಿದೆ. ಆದರೆ ಬಿಜೆಪಿ, ಜೆಡಿಎಸ್ ಪಕ್ಷದಿಂದ ಇದು ಸಾಧ್ಯವೇ ಎಂದು ಪ್ರಶ್ನಿಸಿದರು.

ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗುವ ಸಮಯದಲ್ಲಿ ಅವರು ಜನಪ್ರತಿನಿಧಿಯಲ್ಲ. ಅಂದಿನ ಎಐಸಿಸಿ ಕಾರ್ಯಕಾರಿ ಮಂಡಳಿ ಸದಸ್ಯರಾಗಿದ್ದ ಕೊಲ್ಲೂರು ಮಲ್ಲಪ್ಪ ಅವರ ಸಲಹೆಯಂತೆ ಶ್ರೀಮತಿ ಇಂದಿರಾಗಾಂಧಿ ಅವರು ಅರಸು ಅವರನ್ನು ಮುಖ್ಯಮಂತ್ರಿ ಮಾಡಿದರು. ಆದರೆ ಅವರು ಜಾರಿಗೆ ತಂದ ಭೂ ಸುಧಾರಣಾ ಕಾಯ್ದೆ, ಜೀತ ವಿಮುಕ್ತಿ ಸೇರಿದಂತೆ ಹಲವಾರು ಯೋಜನೆಗಳು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಸರು ತಂದುಕೊಟ್ಟವು. ಹಾಗೆಯೇ ಬಂಗಾರಪ್ಪ ಅವರು ಸಹ ಜಾರಿಗೆ ತಂದ ವಿಶ್ವ, ಆರಾಧನಾ, ಆಶ್ರಯ, ಕನ್ನಡ ಮಾಧ್ಯಮ ಕೃಪಾಂಕ ಇವುಗಳು ಬಡವರ ಪರವಾಗಿ ಹೆಚ್ಚು ಜನಪ್ರಿಯತೆ ಪಡೆದವು. ಈ ಎಲ್ಲಾ ನಾಯಕರು ಜನರೊಂದಿಗೆ ಬೆರತು ಕೆಲಸ ಮಾಡಿದರು. ಜನರಿಂದ ಅಂತರ ಕಾಯ್ದು ಕೊಳ್ಳಲಿಲ್ಲ. ಜನರಿಂದ ದೂರ ಇದ್ದವ ಜನನಾಯಕನಾಗಲು ಸಾಧ್ಯವೇ ಇಲ್ಲ ಎಂದು ಕೆ.ಎನ್.ರಾಜಣ್ಣ ನುಡಿದರು.

ನನ್ನದು ಬಡವರ ಜಾತಿ. ನಾನು ಎಲ್ಲಾ ವರ್ಗದ ಬಡವರ ಪ್ರತಿನಿಧಿ ಎಂದ ಅವರು, ಇಂದಿಗೂ ಚಿಕ್ಕಪೇಟೆಯಲ್ಲಿ ಒಂದೊತ್ತಿನ ಊಟ ಮಾಡುವ ಬಡ ಬ್ರಾಹ್ಮಣರಿದ್ದಾರೆ. ಚುನಾವಣೆಗೋಸ್ಕರ ಶ್ರೀರಾಮನ ಜಪ ಮಾಡುತ್ತಿರುವ ಪಕ್ಷದ ಕಣ್ಣಿಗೆ ಇದು ಕಾಣುವುದಿಲ್ಲವೇ ?, ಇಷ್ಟೊಂದು ಅಬ್ಬರದಲ್ಲಿ ನಡೆಯುತ್ತಿರುವ ಶ್ರೀರಾಮ ಮಂದಿರದ ಬಿಜೆಪಿಯದ್ದೋ, ಇಲ್ಲ ಮೋದಿ ಅವರದ್ದೋ ಎಂಬುದು ಐದಾರು ತಿಂಗಳಲ್ಲಿ ಗೊತ್ತಾಗಲಿದೆ. ಜನರ ಭಾವನೆಗಳೊಂದಿಗೆ ಆಟ ಆಡುವುದನ್ನು ನಿಲ್ಲಿಸಿದಷ್ಟು ಒಳ್ಳೆಯದು ಎಂದು ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.

ನಾವೆಲ್ಲರೂ ಹಿಂದುಗಳೇ, ಆದರೆ ನಮ್ಮದು ಗಾಂಧಿಯ ಹಿಂದುತ್ವ, ಬಿಜೆಪಿಯವರದ್ದು ಗೋಡ್ಸೆ ಹಿಂದುತ್ವ. ಗೋಡ್ಸೆ ಹಿಂದುತ್ವವದಲ್ಲಿ ಕೊಲೆ, ಸುಲಿಗೆಗಳಿಲ್ಲದೆ ಇನ್ನೇನು ಇರಲು ಸಾಧ್ಯ ಎಂದು ಪ್ರಶ್ನಿಸಿದ ಅವರು, ಮರಾಠರ ಹಿಂದು ಪೇಶ್ವೆಗಳು ಕರ್ನಾಟಕದ ಪ್ರಮುಖ ದೇವಾಲಯಗಳ ಮೇಲೆ ದಾಳಿ ನಡೆಸಿದಾಗ, ಅವರನ್ನು ಹಿಮ್ಮೆಟ್ಟಿಸಿದವ ಮೈಸೂರು ಹುಲಿ ಟಿಪ್ಪು ಸುಲ್ತಾನ್, ಆತನನ್ನು ದೇಶದ್ರೋಹಿ ಎನ್ನುತ್ತಾರೆ. ಟಿಪ್ಪು ಸುಲ್ತಾನ್ ಆರಂಭಿಸಿದ ಕನ್ನಂಬಾಡಿ ಕಟ್ಟೆಯನ್ನು ನಾಲ್ವಡಿ ಕೃಷ್ಣರಾಜ ಒಡೆಯರ್ ಪೂರ್ಣಗೊಳಿಸಿದರು. ಟಿಪ್ಪು ಬಳಕೆ ಮಾಡುತ್ತಿದ್ದ ರಾಕೇಟ್ ತಂತ್ರಜ್ಞಾನವನ್ನು ಇಂದು ಇಸ್ರೋಗೆ ಬಳಕೆ ಮಾಡಲಾಗುತ್ತಿದೆ. ಇತಿಹಾಸವನ್ನು ತಿರುಚುವುದರಿಂದ ಕೆಲ ಕಾಲ ಸತ್ಯವನ್ನು ಮರೆ ಮಾಚಬಹುದು. ಹಾಗಾಗಿ ಹಿಂದುಳಿದ ವರ್ಗಗಳು ರಾಜಕೀಯ ಪ್ರಜ್ಞೆಯ ಜೊತೆಗೆ, ಇತಿಹಾಸ ಪ್ರಜ್ಞೆಯನ್ನು ಬೆಳೆಸಿಕೊಂಡು, ಮುನ್ನೆಡೆಯುವುದು ಸೂಕ್ತ ಎಂದು ಕೆಎನ್.ರಾಜಣ್ಣ ನುಡಿದರು.

ವಿಧಾನಪರಿಷತ್ ಸದಸ್ಯ ವೇಣುಗೋಪಾಲ್ ಮಾತನಾಡಿ,ಕೊಟ್ಟ ಮಾತಿಗೆ ತಪ್ಪದ, ಇಟ್ಟ ಹೆಜ್ಜೆಯನ್ನು ಹಿಂದಿಡದ, ನೇರ, ನಿಷ್ಟೂರ ನಡೆಯ ಕೆ.ಎನ್.ರಾಜಣ್ಣ ಹಿಂದುಳಿದ ವರ್ಗಗಳಿಗೆ ಹೊಸ ಆಶಾಕಿರಣವಾಗಿದ್ದಾರೆ.ಬಿಹಾರ ಸರಕಾರಕ್ಕಿಂತ ಮೊದಲೇ 2016ರಲ್ಲಿ ಸಿದ್ದರಾಮಯ್ಯ ಅವರು ಕಾಂತರಾಜು ಆಯೋಗ ರಚಿಸಿ,ಅರ್ಥಿಕ, ಸಾಮಾಜಿಕ ಸಮೀಕ್ಷೆ ನಡೆಸಿದ್ದರೂ ಇದುವರೆಗೂ ಸರಕಾರ ವರದಿ ಸ್ವೀಕರಿಸಿಲ್ಲ.ಸರಕಾರ ಕೂಡಲೇ ಕಾಂತರಾಜು ವರದಿಯನ್ನು ಸ್ವೀಕರಿಸಿ, ಸಾರ್ವಜನಿಕ ಅಭಿಪ್ರಾಯಕ್ಕೆ ಬಿಡಬೇಕು.ಸಂಸದ ಆನಂತಕುಮಾರ್ ಹೆಗಡೆ ಹೇಳಿಕೆ ನೋವುಂಟು ಮಾಡಿದ್ದು,ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಕೇಸು ದಾಖಲಿಸುವಂತೆ ಸಲಹೆ ಮಾಡಿದರು.

ಹಿಂದುಳಿದ ವರ್ಗಗಳ ಒಕ್ಕೂಟದ ಗೌರವಾಧ್ಯಕ್ಷ ಟಿ.ಎನ್.ಮಧುಕರ್ ಹಿಂದುಳಿದ ವರ್ಗಗಳ ಒಕ್ಕೂಟದ ಹಕ್ಕೋತ್ತಾಯ ಮನವಿಯನ್ನು ಸಲ್ಲಿಸಿದರು. ವೇದಿಕೆಯಲ್ಲಿ ವಿವಿಧ ಸಮಾಜದ ಮುಖಂಡರಾದ ಆಡಿಟರ್ ಆಂಜನಪ್ಪ, ಡಾ.ಪಾಪಣ್ಣ, ಗುರುಪ್ರಸಾದ್,ಪಿ.ಮೂರ್ತಿ, ವೆಂಕಟಸ್ವಾಮಿ, ಚಿ.ನಿ.ಪುರಷೋತ್ತಮ್, ಡಿ.ಎಂ.ಸತೀಶ್, ಎಂ.ಜಿ.ಶ್ರೀನಿವಾಸಮೂರ್ತಿ, ಎ.ಡಿ.ಬಲರಾಮಯ್ಯ, ಕೊಟ್ಟ ಶಂಕರ್,ಪಿ.ಎನ್.ರಾಮಯ್ಯ, ಮೈಲಪ್ಪ, ಡಾ.ಕೆ.ವಿ.ಕೃಷ್ಣಮೂರ್ತಿ, ಮಲ್ಲಸಂದ್ರ ಶಿವಣ್ಣ, ಶಾಂತಕುಮಾರ್, ಮಂಜೇಶ್, ರೂಪೇಶ್ ಕೃಷ್ಣಯ್ಯ, ನಯಾಜ್ ಅಹಮದ್, ಗುರು.ಡಿ.,ರಾಜು,ಧನಿಯಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸುಮಾರು 32 ಜನ ವಿವಿಧ ಸಮುದಾಯದ ಮುಖಂಡರುಗಳಿಗೆ ಕೆ.ಎನ್.ರಾಜಣ್ಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X