Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ರಾಜ್ಯದಲ್ಲಿ 20ಕ್ಕೂ ಹೆಚ್ಚು...

ರಾಜ್ಯದಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ: ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ16 March 2024 1:12 PM IST
share
ರಾಜ್ಯದಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ: ಡಾ.ಜಿ.ಪರಮೇಶ್ವರ್

ತುಮಕೂರು,ಮಾ.16:ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 20ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ನಗರದ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸ್ಮಾರ್ಟ್‍ಸಿಟಿ ವತಿಯಿಂದ ಸುಮಾರು 8.78 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಇನ್ನು 21 ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕಿದೆ.ಈ ಸಂಬಂಧ ಈಗಾಗಲೇ ಅಂತಿಮ ಸುತ್ತಿನ ಚರ್ಚೆ ನಡೆದು ಅಭ್ಯರ್ಥಿಗಳ ಹೆಸರುಗಳನ್ನು ಶಿಫಾರಸ್ಸು ಸಹ ಮಾಡಲಾಗಿದೆ.ಕೇಂದ್ರ ಚುನಾವಣಾ ಕಮಿಟಿ ಮುಂದೆ ಕೆಪಿಸಿಸಿ ಅಧ್ಯಕ್ಷರು ಹಾಗ ರಾಜ್ಯ ಉಸ್ತುವಾರಿಗಳು ಅಭ್ಯರ್ಥಿಗಳ ಹೆಸರುಗಳನ್ನು ಮಂಡಿಸುತ್ತಾರೆ.ಇನ್ನೆರಡು ದಿನಗಳಲ್ಲಿ ಟಿಕೆಟ್ ಪಟ್ಟಿ ಘೋಷಣೆಯಾಗಲಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದಿದೆ.ಈ ಅವಧಿಯಲ್ಲಿ ನಮ್ಮ ಸರ್ಕಾರ ಚುನಾವಣಾ ಸಂದರ್ಭದಲ್ಲಿ ನೀಡಿದ್ದ 5 ಗ್ಯಾರಂಟಿ ಯೋಜನೆಯ ಭರವಸೆಯನ್ನು ಈಡೇರಿಸಿದೆ.ಈ ಗ್ಯಾರಂಟಿ ಯೋಜನೆಗಳಿಗಾಗಿ 36 ಸಾವಿರ ಕೋಟಿ ರೂ. ಹಣ ಖರ್ಚು ಮಾಡಿದ್ದೇವೆ. ಹೀಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ನಮ್ಮ ಕೈ ಹಿಡಿಯುತ್ತಾರೆ ಎಂಬ ವಿಶ್ವಾಸ ನಮ್ಮಲ್ಲಿದೆ ಎಂದರು.

ರಾಜ್ಯಕ್ಕೆ ರಾಹುಲ್‍ ಗಾಂಧಿ ಭೇಟಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ರಾಹುಲ್‍ ಗಾಂಧಿಯವರ ವೇಳಾಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದಲ್ಲಿ ಪ್ರಚಾರ ಮಾಡುತ್ತಾರೆ. ಆದರೆ ಅವರ ವೇಳಾಪಟ್ಟಿ ಸಹ ಇನ್ನು ಬಿಡುಗಡೆಯಾಗಿಲ್ಲ. ಅವರ ಪ್ರಚಾರದ ವೇಳಾಪಟ್ಟಿ ಬಂದ ಬಳಿಕ ಕೆಪಿಸಿಸಿ ಅಧ್ಯಕ್ಷರು ಅದನ್ನು ಪ್ರಕಟಿಸುತ್ತಾರೆ ಎಂದು ಗೃಹ ಸಚಿವರು ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ಅಭ್ಯರ್ಥಿ ಘೋಷಣೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ನಮ್ಮಲ್ಲಿ ಸದ್ಯಕ್ಕೆ ಆ ವಿಚಾರದ ಬಗ್ಗೆ ಪ್ರಸ್ತಾಪ ಇಲ್ಲ. ನಮ್ಮ ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷಗಳು ಸೇರಿ ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ತೀರ್ಮಾನ ಮಾಡುತ್ತವೆ ಎಂದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಮೇಲಿನ ಪೋಕ್ಸೊ ಪ್ರಕರಣವನ್ನು ಸಿಐಡಿಗೆ ವಹಿಸಿದ್ದೇವೆ.ಸುಖಾ ಸುಮ್ಮನೆ ಗೊಂದಲ ಆಗಬಾರದು ಎಂಬ ಉದ್ದೇಶದಿಂದ ಈ ಪ್ರಕರಣವನ್ನು ಸಿಐಡಿಗೆ ಕೊಟ್ಟಿದ್ದೇವೆ. ಈಗಾಗಲೇ ಯಡಿಯೂರಪ್ಪ ಅವರು ಸಹ ಪೊಲೀಸರಿಗೆ ಹೇಳಿಕೆ ಕೊಟ್ಟಿದ್ದಾರೆ. ದೂರು ಕೊಟ್ಟಿರುವ ಮಹಿಳೆ ಸುಮಾರು 50 ಪೋಕ್ಸೋ ಪ್ರಕರಣ ದಾಖಲೆ ಮಾಡಿದ್ದಾರೆ ಎಂಬ ಮಾಹಿತಿ ಇದೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X