Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ...

ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ : ಸಿಎಂ ಸಿದ್ದರಾಮಯ್ಯ

"ಎಲ್ಲಾ ಧರ್ಮದ, ಜಾತಿಯ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ಜಿಡಿಪಿ ಬೆಳವಣಿಗೆ"

ವಾರ್ತಾಭಾರತಿವಾರ್ತಾಭಾರತಿ2 Dec 2024 7:52 PM IST
share
Photo of Program

ತುಮಕೂರು : ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಎಲ್ಲರ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಸರಕಾರದ ನಾನಾ ಯೋಜನೆಗಳ 750 ಕೋಟಿ ರೂ. ಮೊತ್ತದ 23 ಸಾವಿರಕ್ಕೂ ಅಧಿಕ ಮಂದಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ, ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಇಡೀ ದೇಶದಲ್ಲಿ ರಾಜ್ಯದ ಜಿಡಿಪಿ ನಂಬರ್ ಒನ್ ಆಗಿದೆ. ದೇಶದ ಜಿಡಿಪಿ ಇನ್ನೂ 8 ಇದೆ. ಆದರೆ ರಾಜ್ಯದ ಜಿಡಿಪಿ 10ಕ್ಕೆ ತಲುಪಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇದು ಸಾಧ್ಯವಾಗಿದ್ದು ರಾಜ್ಯದ ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದವರ ಒಟ್ಟಾರೆ ಕೊಡುಗೆಯಿಂದ ಎಂದು ವಿವರಿಸಿದರು.

ತುಮಕೂರು ಜಿಲ್ಲೆಯಲ್ಲಿ ಒಂದೂವರೆ ಲಕ್ಷ ಫಲಾನುಭವಿಗಳಿಗೆ ಸರಕಾರದ ಸವಲತ್ತುಗಳು ಇಂದು ನೇರವಾಗಿ ತಲುಪಿವೆ. ಪ್ರತೀ ಜಿಲ್ಲೆಯಲ್ಲೂ ಲಕ್ಷ ಲಕ್ಷ ಫಲಾನುಭವಿಗಳಿಗೆ ಸರಕಾರದ ಸವಲತ್ತುಗಳು ತಲುಪುತ್ತಲೇ ಇವೆ ಎಂದರು.

ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ನಾವು ಕೊಡುತ್ತಲೇ ಹೋಗುತ್ತೇವೆ. ಜೊತೆಗೆ ಹಿಂದುಳಿದವರ, ದುರ್ಬಲರ ಏಳಿಗೆಗೆ ವಿಶೇಷ ಯೋಜನೆಗಳನ್ನೂ ರೂಪಿಸುತ್ತೇವೆ. ಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿ ಮಾಡಿದ್ದು ನಮ್ಮ ಸರಕಾರ ಮಾತ್ರ. ಆದ್ದರಿಂದ ನಮ್ಮ ಸರಕಾರ ಮಹಿಳೆಯರ ಪರವಾದ ಸರಕಾರ. ನಮ್ಮ ಸರಕಾರ ಎಲ್ಲಾ ಜಾತಿಯ ಬಡವರ, ಹಿಂದುಳಿದವರ, ದಲಿತರ ಪರವಾಗಿರುವ ಸರಕಾರ ಎಂದರು.

ಹಳ್ಳಿಗಳ, ತಾಲ್ಲೂಕುಗಳ, ಜಿಲ್ಲೆಗಳ ಅಭಿವೃದ್ಧಿಯಿಂದ ಮಾತ್ರ ರಾಜ್ಯದ, ದೇಶದ ಅಭಿವೃದ್ಧಿ ಸಾಧ್ಯ. ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಜಿಡಿಪಿ ಪ್ರಗತಿ ಕಾಣಲು ಸಾಧ್ಯ. ಎಲ್ಲಾ ಧರ್ಮದ, ಎಲ್ಲಾ ಜಾತಿಯ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ಜಿಡಿಪಿ ಬೆಳವಣಿಗೆಯಾಗುತ್ತದೆ ಎಂದರು‌.

ಹೀಗಾಗಿ ನಮ್ಮ ಸರಕಾರ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವಾಗ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರನ್ನೂ ಒಳಗೊಳ್ಳುವಂತೆ ರೂಪಿಸುತ್ತೇವೆ. ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿದ್ದಾಗಿದೆ. ಈ ರೀತಿ ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎನ್.ರಾಜಣ್ಣ, ಬೈರತಿ ಸುರೇಶ್, ಕರ್ನಾಟಕ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಸೇರಿ ಜಿಲ್ಲೆಯ ಶಾಸಕರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

SiddaramaiahTumkur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X